Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಎಬೋಲಾ ವೈರಸ್’ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಅಲರ್ಟ್ : ಸರ್ಕಾರಿ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ!

BK Hariprasad

BREAKING : `ಇದು ಹುದ್ದೆಯಲ್ಲ, ಸಿದ್ಧಾಂತಕ್ಕೆ ಸಿಕ್ಕ ಸಂದೇಶ’: ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಫಸ್ಟ್ ರಿಯಾಕ್ಷನ್

BK Hariprasad

ಅಧಿಕಾರ ಬೇಕು ಎನ್ನುವವರು ಡಿಕೆಶಿ ಜೊತೆಗೆ ಹೋಗಿ, ಪಕ್ಷ ಬೆಳೆಸಬೇಕು ಎನ್ನುವರು ನನ್ನ ಜೊತೆಗೆ ಬನ್ನಿ : ಬಿಕೆ ಹರಿಪ್ರಸಾದ್ ಖಡಕ್ ಸಂದೇಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ಇದು ಹುದ್ದೆಯಲ್ಲ, ಸಿದ್ಧಾಂತಕ್ಕೆ ಸಿಕ್ಕ ಸಂದೇಶ’: ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಫಸ್ಟ್ ರಿಯಾಕ್ಷನ್
KARNATAKA

BREAKING : `ಇದು ಹುದ್ದೆಯಲ್ಲ, ಸಿದ್ಧಾಂತಕ್ಕೆ ಸಿಕ್ಕ ಸಂದೇಶ’: ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಫಸ್ಟ್ ರಿಯಾಕ್ಷನ್

By kannadanewsnow57
BK Hariprasad
BK Hariprasad

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ನೂತನ ಅಧ್ಯಕ್ಷರಾಗಿ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ಹೈಕಮಾಂಡ್ ನೇಮಕ ಮಾಡಿದೆ. ಈ ಬೆನ್ನಲ್ಲೇ ತಮಗೆ ಇಷ್ಟು ದೊಡ್ಡ ಜವಾಬ್ದಾರಿ ನೀಡಿದ ಕಾಂಗ್ರೆಸ್ ರಾಷ್ಟ್ರೀಯ ನಾಯಕರಿಗೆ ಬಿ.ಕೆ.ಹರಿಪ್ರಸಾದ್ ಅವರು ಧನ್ಯವಾದ ಸಮರ್ಪಿಸಿದ್ದಾರೆ.

ತಮ್ಮ ನೇಮಕಾತಿ ಕುರಿತು ಪ್ರತಿಕ್ರಿಯಿಸಿರುವ ಅವರು, “ನನ್ನ ಮೇಲೆ ಪ್ರೀತಿ, ವಿಶ್ವಾಸ ಹಾಗೂ ನಂಬಿಕೆ ಇಟ್ಟು ಈ ಮಹತ್ತರ ಜವಾಬ್ದಾರಿ ವಹಿಸಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನನ್ನ ಅಚ್ಚುಮೆಚ್ಚಿನ ನಾಯಕಿ ಶ್ರೀಮತಿ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ಪ್ರಿಯಾಂಕಾ ಗಾಂಧಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದಿದ್ದಾರೆ.

ಇದು ಕೇವಲ ಹುದ್ದೆಯಲ್ಲ, ಸಿದ್ಧಾಂತಕ್ಕೆ ಸಿಕ್ಕ ಸಂದೇಶ!

“ಕಾಂಗ್ರೆಸ್ ಹೈಕಮಾಂಡ್‌ನ ಈ ನಿರ್ಧಾರವು ಕೇವಲ ಒಬ್ಬ ವ್ಯಕ್ತಿಗೆ ನೀಡಿರುವ ಹುದ್ದೆಯಲ್ಲ. ಇದು ಕಾಂಗ್ರೆಸ್ ಪಕ್ಷದ ಮೂಲ ಸಿದ್ಧಾಂತಗಳಾದ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಪ್ರಜಾಪ್ರಭುತ್ವ, ಸಂವಿಧಾನವಾದ ಮತ್ತು ದುರ್ಬಲ ವರ್ಗಗಳ ಸಬಲೀಕರಣದ ಪರವಾಗಿ ನೀಡಿರುವ ಸ್ಪಷ್ಟ ಸಂದೇಶವಾಗಿದೆ” ಎಂದು ಹರಿಪ್ರಸಾದ್ ಬಣ್ಣಿಸಿದ್ದಾರೆ.

ನಾನು ಯಾವುದೇ ಅಧಿಕಾರದ ಹುದ್ದೆಗಳಿಗಾಗಿ ರಾಜಕೀಯ ಮಾಡಿಲ್ಲ. ನನ್ನ ಜೀವನ ಪೂರ್ತಿ ಕಾಂಗ್ರೆಸ್ ತತ್ವಗಳ ಜಾರಿಗೆ ಮೀಸಲಿಟ್ಟಿದ್ದೇನೆ. ಅಧಿಕಾರಕ್ಕಿಂತ ಸಿದ್ಧಾಂತ ದೊಡ್ಡದು, ಹುದ್ದೆಗಿಂತ ಜನರ ಹಿತ ಮುಖ್ಯ ಎಂಬ ನಿಲುವಿನೊಂದಿಗೆ ಬದುಕಿದವನು ನಾನು. ಹಾಗಾಗಿ ಕೆಪಿಸಿಸಿ ಅಧ್ಯಕ್ಷ ಹುದ್ದೆ ಎಂಬ ಪಕ್ಷ ಕಟ್ಟುವ ಕಾಯಕವನ್ನು ಅತ್ಯಂತ ಸಂತೋಷದಿಂದ ಸ್ವೀಕರಿಸಿದ್ದೇನೆ.

ದೇಶದ ದುರಿತ ಕಾಲದಲ್ಲಿ ಹೊಸ ಸವಾಲು

ದೇಶದಲ್ಲಿ ಸದ್ಯ ದ್ವೇಷದ ರಾಜಕಾರಣ, ಧರ್ಮದ ಹೆಸರಿನ ಧ್ರುವೀಕರಣ ಮತ್ತು ಸಂವಿಧಾನ ವಿರೋಧಿ ಪ್ರವೃತ್ತಿಗಳು ಹೆಚ್ಚಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ ಅವರು, “ಸಾಮಾಜಿಕ ಸಾಮರಸ್ಯ ಮತ್ತು ಜಾತ್ಯತೀತ ಮೌಲ್ಯಗಳನ್ನು ನಿರಂತರವಾಗಿ ಪ್ರತಿಪಾದಿಸುತ್ತಾ ಬಂದಿರುವ ನನಗೆ, ದೇಶದ ಈ ದುರಿತ ಕಾಲದಲ್ಲಿ ಕಾಂಗ್ರೆಸ್ ರಾಜ್ಯ ಘಟಕದ ನೇತೃತ್ವ ಸಿಕ್ಕಿರುವುದು ಹೊಸ ಸವಾಲಾಗಿದೆ. ಈ ಸವಾಲನ್ನು ಪಕ್ಷದ ಸೈದ್ಧಾಂತಿಕ ಕಾರ್ಯಕರ್ತರ ಬಲದಿಂದ ಯಶಸ್ವಿಯಾಗಿ ಎದುರಿಸುತ್ತೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ಪಣ

ಹಿಂದುಳಿದ ವರ್ಗಗಳು, ದಲಿತರು, ಅಲ್ಪಸಂಖ್ಯಾತರು, ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಜನರ ಆಶೋತ್ತರಗಳಿಗೆ ಧ್ವನಿಯಾಗುವುದಾಗಿ ಭರವಸೆ ನೀಡಿದ ನೂತನ ಅಧ್ಯಕ್ಷರು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಬೂತ್ ಮಟ್ಟದಿಂದ ಸಂಘಟಿಸಿ, ಸೈದ್ಧಾಂತಿಕವಾಗಿ ಬಲಪಡಿಸುವುದಾಗಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಸಮರ್ಥ ನಾಯಕರು ಮತ್ತು ಕಾರ್ಯಕರ್ತರು ಕೈಜೋಡಿಸಲಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ಸೇತರರಿಗೂ ಮುಕ್ತ ಆಹ್ವಾನ

ಕೋಮುವಾದದ ವಿರುದ್ಧ ಹೋರಾಡುವವರು, ಸಂವಿಧಾನ ರಕ್ಷಕರು ಮತ್ತು ಪ್ರಗತಿಪರ ಚಿಂತನೆ ಹೊಂದಿರುವ ಕೋಟ್ಯಾಂತರ ಕಾಂಗ್ರೆಸ್ಸೇತರ ಕಾರ್ಯಕರ್ತರೂ ದೇಶದ ಹಿತದೃಷ್ಟಿಯಿಂದ ಕೈಜೋಡಿಸಬೇಕಿದೆ. ಕಾಂಗ್ರೆಸ್ ಮತ್ತು ಕಾಂಗ್ರೆಸ್ಸೇತರ ಜಾತ್ಯತೀತ ಯುವ ಸಮುದಾಯವನ್ನು ಒಟ್ಟಿಗೆ ಕೊಂಡೊಯ್ಯುವ ಅರಿವು ತನಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಂವಿಧಾನವೇ ನಮ್ಮ ದಾರಿ, ಸಾಮಾಜಿಕ ನ್ಯಾಯವೇ ನಮ್ಮ ಗುರಿ, ಜಾತ್ಯತೀತತೆಯೇ ನಮ್ಮ ಶಕ್ತಿ” ಎಂಬ ಕಾಂಗ್ರೆಸ್‌ನ ಮೂಲ ಸಂದೇಶದೊಂದಿಗೆ ಹೈಕಮಾಂಡ್ ನೀಡಿದ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆಯಿಂದ ನಿರ್ವಹಿಸುವುದಾಗಿ ಬಿ.ಕೆ.ಹರಿಪ್ರಸಾದ್ ತಿಳಿಸಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ನೇಮಿಸಿದ ಎಐಸಿಸಿ ಅಧ್ಯಕ್ಷರಾದ @kharge, ನನ್ನ ಮೇಲೆ ಪ್ರೀತಿ ವಿಶ್ವಾಸ ನಂಬಿಕೆ ಇರಿಸಿ ಜವಾಬ್ದಾರಿ ವಹಿಸಿದ ನನ್ನ ಅಚ್ಚುಮೆಚ್ಚಿನ ನಾಯಕಿ ಶ್ರೀಮತಿ ಸೋನಿಯಾ ಗಾಂಧಿಯವರಿಗೆ, ವಿರೋಧ ಪಕ್ಷದ ನಾಯಕರಾದ ಶ್ರೀ @RahulGandhi ಅವರಿಗೆ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ… pic.twitter.com/qCr1eTnCOo

— Hariprasad.B.K. (@HariprasadBK2) June 4, 2026

BREAKING: ``This is not a position it is a message for ideology'': B.K. Hariprasad's first reaction as KPCC President
Share. Facebook Twitter LinkedIn WhatsApp Email

Related Posts

BREAKING : ‘ಎಬೋಲಾ ವೈರಸ್’ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಅಲರ್ಟ್ : ಸರ್ಕಾರಿ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ!

2 Mins Read
BK Hariprasad

ಅಧಿಕಾರ ಬೇಕು ಎನ್ನುವವರು ಡಿಕೆಶಿ ಜೊತೆಗೆ ಹೋಗಿ, ಪಕ್ಷ ಬೆಳೆಸಬೇಕು ಎನ್ನುವರು ನನ್ನ ಜೊತೆಗೆ ಬನ್ನಿ : ಬಿಕೆ ಹರಿಪ್ರಸಾದ್ ಖಡಕ್ ಸಂದೇಶ!

1 Min Read

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ : ಹೈಕಮಾಂಡ್ ನಿಂದ ಅಧಿಕೃತ ಆದೇಶ | B.K. Hariprasad

1 Min Read
Recent News

BREAKING : ‘ಎಬೋಲಾ ವೈರಸ್’ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಅಲರ್ಟ್ : ಸರ್ಕಾರಿ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ!

BK Hariprasad

BREAKING : `ಇದು ಹುದ್ದೆಯಲ್ಲ, ಸಿದ್ಧಾಂತಕ್ಕೆ ಸಿಕ್ಕ ಸಂದೇಶ’: ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಫಸ್ಟ್ ರಿಯಾಕ್ಷನ್

BK Hariprasad

ಅಧಿಕಾರ ಬೇಕು ಎನ್ನುವವರು ಡಿಕೆಶಿ ಜೊತೆಗೆ ಹೋಗಿ, ಪಕ್ಷ ಬೆಳೆಸಬೇಕು ಎನ್ನುವರು ನನ್ನ ಜೊತೆಗೆ ಬನ್ನಿ : ಬಿಕೆ ಹರಿಪ್ರಸಾದ್ ಖಡಕ್ ಸಂದೇಶ!

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ : ಹೈಕಮಾಂಡ್ ನಿಂದ ಅಧಿಕೃತ ಆದೇಶ | B.K. Hariprasad

State News
KARNATAKA

BREAKING : ‘ಎಬೋಲಾ ವೈರಸ್’ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಅಲರ್ಟ್ : ಸರ್ಕಾರಿ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಜಾಗತಿಕವಾಗಿ ಆತಂಕ ಮೂಡಿಸುತ್ತಿರುವ ಮಾರಕ ಎಬೋಲಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

BK Hariprasad

BREAKING : `ಇದು ಹುದ್ದೆಯಲ್ಲ, ಸಿದ್ಧಾಂತಕ್ಕೆ ಸಿಕ್ಕ ಸಂದೇಶ’: ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಫಸ್ಟ್ ರಿಯಾಕ್ಷನ್

BK Hariprasad

ಅಧಿಕಾರ ಬೇಕು ಎನ್ನುವವರು ಡಿಕೆಶಿ ಜೊತೆಗೆ ಹೋಗಿ, ಪಕ್ಷ ಬೆಳೆಸಬೇಕು ಎನ್ನುವರು ನನ್ನ ಜೊತೆಗೆ ಬನ್ನಿ : ಬಿಕೆ ಹರಿಪ್ರಸಾದ್ ಖಡಕ್ ಸಂದೇಶ!

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ : ಹೈಕಮಾಂಡ್ ನಿಂದ ಅಧಿಕೃತ ಆದೇಶ | B.K. Hariprasad

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.