ಬೀದರ್ : ಮನೆಯಲ್ಲಿ ನೇಣು ಬಿಗಿದುಕೊಂಡು ಗ್ರಾಮ ಆಡಳಿತ ಅಧಿಕಾರಿ ಆತ್ಮಹತ್ಯೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಾಂಬಳೆವಾಡಿ ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಮಹದೇವ (28) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಒಂದು ವರ್ಷದ ಹಿಂದೆ ಅಷ್ಟೇ ಗ್ರಾಮ ಆಡಳಿತ ಅಧಿಕಾರಿ ಸೇವೆಗೆ ಸೇರಿದರು ಮಹದೇವ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮಂಟಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.








