ಬೆಂಗಳೂರು : ನೂತನ ಸಿಎಂ ಪದಗ್ರಹಣ ಬೆನ್ನಲ್ಲೆ, ಸಚಿವರಿಗೆ ಖಾತೆ ಹಂಚಿಕೆ ವಿಚಾರವಾಗಿ ಇದೀಗ ಅಸಮಾಧಾನ ಭುಗಿಲೆದ್ದಿದೆ. ರಾಮಲಿಂಗಾರೆಡ್ಡಿ ಇದೀಗ ಬೆಂಗಳೂರು ನಗರಾಭಿವೃದ್ಧಿ ಖಾತೆ ಬೇಕು ಎಂದು ಪಟ್ಟು ಹಿಡಿದಿದ್ದು, ಆ ಖಾತೆ ಕೊಡದಿದ್ದರೆ, ಸಚಿವ ಸ್ಥಾನವೇ ಬೇಡ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ಹೌದು ಸಚಿವರಿಗೆ ಖಾತೆ ಹಂಚಿಕೆಗೂ ಮುನ್ನ ಅಸಮಾಧಾನ ಭುಗಿಲೆದ್ದಿದೆ. ಖಾತೆ ಹಂಚಿಕೆ ವಿಚಾರವಾಗಿ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ಹೊರ ಹಾಕಿದ್ದಾರೆ. ಜಲ ಸಂಪನ್ಮೂಲ ಖಾತೆ ನೀಡಲು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿದ್ದು, ಆದರೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಬೇಕು ಎಂದು ಪಟ್ಟು ಹಿಡಿದಿದ್ದು, ಆ ಖಾತೆ ಕೊಡದಿದ್ದರೆ, ಸಚಿವ ಸ್ಥಾನವೇ ಬೇಡ ಎಂದು ಅಸಮಾಧಾನ ಹೊರ ಹಾಕಿದ್ದಾರೆ.








