ಬೆಂಗಳೂರು : ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಸೂರ್ಯನಗರ ಠಾಣೆ ಪೋಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸೂರ್ಯನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಕೇರಳ ಮೂಲದ ಪ್ರವೀಣ್, ಅಶಿಕ್, ಆದರ್ಶ ಮತ್ತು ರೋಮಿಯೋ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.
ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಅಪಹರಣಕ್ಕೆ ಆರೋಪಿಗಳು ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಮಂಗಳವಾರ ರಾತ್ರಿ ಒಂದು ಕಿಡ್ನ್ಯಾಪ್ ನಡೆದಿತ್ತು.ಬಾಕ್ಸ್ ನೀಡುವ ನೆಪದದಲ್ಲಿ ಗನ್ ತೋರಿಸಿ ಆರೋಪಿಗಳು ಕಿಡ್ನಾಪ್ ಮಾಡಿದ್ದರು. ಕಿಡ್ನಾಪ್ ಮಾಡಿ ಕರೆದೊಯುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಮಾಜಿ ಎಂಎಲ್ಸಿ ಕಿಡ್ನ್ಯಾಪ್ ಮಾಡಿ ಆರೋಪಿಗಳು ಮೂರು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದರು.
ಹಣ ನೀಡುವುದಾಗಿ ಒಪ್ಪಿಕೊಂಡು ದಯಾನಂದ ರೆಡ್ಡಿ ಬಚಾವಾಗಿದ್ದರು ದಯಾನಂದ ರೆಡ್ಡಿ ಮಾತು ನಂಬಿ ಅಪಹರಣಕಾರರು ಅವರನ್ನು ಬಿಟ್ಟು ಕಳುಹಿಸಿದ್ದರು. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು. ಪೊಲೀಸರು ಇದೀಗ ಅರೆಸ್ಟ್ ಮಾಡಿ ನಾಲ್ವರು ಆರೋಪಗಳ ವಿಚಾರಣೆ ನಡೆಸುತ್ತಿದ್ದಾರೆ.








