ತುಮಕೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಒಮಿನಿ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇನ್ನೂ ಘಟನೆಯಲ್ಲಿ ಮೂವರಿಗೆ ಗಂಭೀರವಾದ ಗಾಯಗಳಾಗಿದ್ದು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರು ಆಂಧ್ರಪ್ರದೇಶದ ಮೂಲದವರು ಎಂಬ ಮಾಹಿತಿ ತಿಳಿದು ಬಂದಿದೆ. ಹಿರಿಯೂರಿನಿಂದ ಹುಳಿಯಾರು ಕಡೆಗೆ ಓಮಿನಿ ಕಾರು ಬರುತ್ತಿತ್ತು. ಓಮನಿ ಕಾರಿಗೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಓಮಿನಿ ಕಾರು ರಸ್ತೆ ಪಕ್ಕ ಪಲ್ಟಿಯಾಗಿದೆ.
ಪರಿಣಾಮ ಕಾರಿನಲ್ಲಿ ಇದ್ದ ವೃದ್ಧ ದಂಪತಿ ಸೇರಿ ಮೂವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಮೂವರಿಗೆ ಗಂಭೀರ ಗಾಯಗಳಾಗಿದ್ದು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಹುಳಿಯಾರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.







