ಬೆಂಗಳೂರು: ಸಾಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್, ನೂತನ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ರಾಜ್ಯ ಸಚಿವ ಸಂಪುಟಕ್ಕೆ ನೂತನ ಸಚಿವರಾಗಿ ಸೇರ್ಪಡೆಗೊಂಡು ಪ್ರಮಾಣ ವಚನ ಸ್ವೀಕರಿಸಿದ ಸತೀಶ್ ಜಾರಕಿಹೊಳಿ ಅವರನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭೇಟಿಯಾಗಿ, ಪುಷ್ಪಗುಚ್ಛ ನೀಡಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.
ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭೇಟಿ
ಇದೇ ಸಂದರ್ಭದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಸಹ ಭೇಟಿ ಮಾಡಿದರು. ಪಕ್ಷದ ಈ ಮಹತ್ವದ ಜವಾಬ್ದಾರಿ ವಹಿಸಿಕೊಂಡಿರುವ ನೂತನ ಅಧ್ಯಕ್ಷರಿಗೆ ಶಾಸಕರು ಆತ್ಮೀಯವಾಗಿ ಅಭಿನಂದನೆಗಳನ್ನು ತಿಳಿಸಿದರು.
ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಿಷ್ಠವಾಗಲಿ ಎಂದು ಶುಭ ಹಾರೈಕೆ
ನೂತನ ಅಧ್ಯಕ್ಷರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಶಾಸಕರು, ಬಿ.ಕೆ. ಹರಿಪ್ರಸಾದ್ ಅವರ ಸುದೀರ್ಘ ರಾಜಕೀಯ ಅನುಭವ, ದೂರದೃಷ್ಟಿಯ ನಾಯಕತ್ವ ಹಾಗೂ ಪಕ್ಷದ ಮೇಲಿನ ಅಪಾರ ಬದ್ಧತೆ ನಮಗೆಲ್ಲರಿಗೂ ಪ್ರೇರಣೆಯಾಗಿದೆ. ಅವರ ಸಮರ್ಥ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಸಂಘಟನಾತ್ಮಕವಾಗಿ ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿ ಎಂದು ಆಶಿಸಿ, ಅವರ ಮುಂದಿನ ಸಾರಥ್ಯಕ್ಕೆ ಶುಭ ಹಾರೈಸಿದರು.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…
ಸಾಗರದ ಜನತೆ ಗಮನಕ್ಕೆ: ನಾಳೆಯಿಂದ ಮೂರು ದಿನ ಹಲಸು, ಮಾವು ಮೇಳ, ವಿವಿಧ ಖಾದ್ಯಗಳ ಸವಿರುಚಿ








