Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಮೊದಲ ವಿಕೆಟ್ ಪತನ : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!

BIG NEWS : ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ CM ಡಿಕೆಶಿ ಬಿಗ್ ಶಾಕ್ : ಅನರ್ಹರ ಪತ್ತೆಗೆ ಸರ್ಕಾರದ ಮಹತ್ವದ ಹೆಜ್ಜೆ.!

​CBSE 12ನೇ ತರಗತಿ ಮರುಮೌಲ್ಯಮಾಪನ: ಅರ್ಜಿ ಸಲ್ಲಿಸಲು ಇನ್ನು ಒಂದೇ ದಿನ ಬಾಕಿ; ಇಲ್ಲಿದೆ ನೋಂದಣಿ ಪ್ರಕ್ರಿಯೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ CM ಡಿಕೆಶಿ ಬಿಗ್ ಶಾಕ್ : ಅನರ್ಹರ ಪತ್ತೆಗೆ ಸರ್ಕಾರದ ಮಹತ್ವದ ಹೆಜ್ಜೆ.!
KARNATAKA

BIG NEWS : ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ CM ಡಿಕೆಶಿ ಬಿಗ್ ಶಾಕ್ : ಅನರ್ಹರ ಪತ್ತೆಗೆ ಸರ್ಕಾರದ ಮಹತ್ವದ ಹೆಜ್ಜೆ.!

By kannadanewsnow57

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳನ್ನು ಕೆಲ ಅನರ್ಹರು ಕೂಡ ಪಡೆಯುತ್ತಿರುವ ಮಾಹಿತಿ ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆ ಯೋಜನೆಗಳ ನಿಜವಾದ ಫಲಾನುಭವಿಗಳ ವಿವರಗಳನ್ನು ಪರಿಶೀಲಿಸಿ, ಅರ್ಹ ಮತ್ತು ಅನರ್ಹರನ್ನು ಪ್ರತ್ಯೇಕಿಸುವ ಪ್ರಕ್ರಿಯೆಗೆ ಸರ್ಕಾರ ಮುಂದಾಗಿದೆ.

ವಿಧಾನಸೌಧದಲ್ಲಿ ಗುರುವಾರ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಮೊದಲ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ವಿಷಯವನ್ನು ಗಂಭೀರವಾಗಿ ಚರ್ಚಿಸಿದರು. ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ತಪ್ಪು ಕೈಗಳಿಗೆ ಹೋಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಗ್ಯಾರಂಟಿ ಯೋಜನೆ ರದ್ದು ಅಲ್ಲ, ಮಾಹಿತಿ ಪರಿಶೀಲನೆ ಮಾತ್ರ

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಅಥವಾ ರದ್ದುಪಡಿಸುವ ಯಾವುದೇ ಯೋಚನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ ಯೋಜನೆಗಳ ಲಾಭ ಪಡೆಯುತ್ತಿರುವವರ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ಗೃಹಜ್ಯೋತಿ ಯೋಜನೆಯಡಿ ಉಚಿತವಾಗಿ ನೀಡಲಾಗುತ್ತಿರುವ 200 ಯೂನಿಟ್ ವಿದ್ಯುತ್‌ನ್ನು ಕೆಲವರು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಸರ್ಕಾರಕ್ಕೆ ಮಾಹಿತಿ ಲಭಿಸಿದೆ. ಪ್ರಸ್ತುತ ಸುಮಾರು 1.64 ಕೋಟಿ ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ ಈ ಸೌಲಭ್ಯ ನಿಜವಾಗಿಯೂ ಅರ್ಹ ಕುಟುಂಬಗಳಿಗೆ ತಲುಪುತ್ತಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಕೆಲವರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ವಿದ್ಯುತ್ ಮೀಟರ್‌ಗಳಿರುವುದು ಗಮನಕ್ಕೆ ಬಂದಿದ್ದು, ಫಲಾನುಭವಿಗಳ ಸಂಪೂರ್ಣ ವಿವರಗಳನ್ನು ಸಂಗ್ರಹಿಸುವ ಮೂಲಕ ನಿಖರ ಮಾಹಿತಿ ಪಡೆಯಲು ಸರ್ಕಾರ ಮುಂದಾಗಿದೆ.

ಗೃಹಲಕ್ಷ್ಮಿ ಯೋಜನೆಯಲ್ಲೂ ಕೆಲವು ಅಕ್ರಮಗಳು ಬೆಳಕಿಗೆ ಬಂದಿವೆ. ಮೃತಪಟ್ಟ ವ್ಯಕ್ತಿಗಳ ಹೆಸರಿನಲ್ಲಿಯೇ ಹಣ ವರ್ಗಾವಣೆಯಾಗುತ್ತಿರುವ ಪ್ರಕರಣಗಳಿರುವುದರಿಂದ ಸರ್ಕಾರ ಎಚ್ಚೆತ್ತುಕೊಂಡಿದೆ. ಸಾರ್ವಜನಿಕ ಹಣದ ದುರ್ಬಳಕೆ ತಡೆಯುವ ಉದ್ದೇಶದಿಂದ ಫಲಾನುಭವಿಗಳ ಮೊಬೈಲ್ ಸಂಖ್ಯೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಮರುಪರಿಶೀಲಿಸಲಾಗುತ್ತಿದೆ.

ಸಮಗ್ರ ಡೇಟಾಬೇಸ್ ಸಿದ್ಧಪಡಿಸಲು ಸರ್ಕಾರದ ಯೋಜನೆ
ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳ ನೈಜ ಫಲಾನುಭವಿಗಳ ಡೇಟಾಬೇಸ್ ಸಿದ್ಧಪಡಿಸಿ, ಅರ್ಹರಿಗೆ ಮಾತ್ರ ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಲು ಸರ್ಕಾರ ಸಜ್ಜಾಗಿದೆ. ಇದರಿಂದ ಯೋಜನೆಗಳ ಪಾರದರ್ಶಕತೆ ಹೆಚ್ಚುವ ಜೊತೆಗೆ ಅನಗತ್ಯ ಸೋರಿಕೆಗೆ ತಡೆ ಬೀಳುವ ನಿರೀಕ್ಷೆಯಿದೆ.

BIG NEWS: CM DKshi Big Shock for Guarantee Scheme Beneficiaries: Government's Important Step to Identify Ineligibles!
Share. Facebook Twitter LinkedIn WhatsApp Email

Related Posts

BREAKING : ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಮೊದಲ ವಿಕೆಟ್ ಪತನ : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!

2 Mins Read

BREAKING : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ಘೋಷಣೆ | Ramalingareddy resigns

1 Min Read

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

3 Mins Read
Recent News

BREAKING : ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಮೊದಲ ವಿಕೆಟ್ ಪತನ : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!

BIG NEWS : ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ CM ಡಿಕೆಶಿ ಬಿಗ್ ಶಾಕ್ : ಅನರ್ಹರ ಪತ್ತೆಗೆ ಸರ್ಕಾರದ ಮಹತ್ವದ ಹೆಜ್ಜೆ.!

​CBSE 12ನೇ ತರಗತಿ ಮರುಮೌಲ್ಯಮಾಪನ: ಅರ್ಜಿ ಸಲ್ಲಿಸಲು ಇನ್ನು ಒಂದೇ ದಿನ ಬಾಕಿ; ಇಲ್ಲಿದೆ ನೋಂದಣಿ ಪ್ರಕ್ರಿಯೆ!

BREAKING : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ಘೋಷಣೆ | Ramalingareddy resigns

State News
KARNATAKA

BREAKING : ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಮೊದಲ ವಿಕೆಟ್ ಪತನ : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನವೊಂದು ಸೃಷ್ಟಿಯಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ದಿಢೀರ್…

BIG NEWS : ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ CM ಡಿಕೆಶಿ ಬಿಗ್ ಶಾಕ್ : ಅನರ್ಹರ ಪತ್ತೆಗೆ ಸರ್ಕಾರದ ಮಹತ್ವದ ಹೆಜ್ಜೆ.!

BREAKING : ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ಘೋಷಣೆ | Ramalingareddy resigns

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಶಾಸಕರ ಅನುದಾನ’ದಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.