ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿಸಿಇಟಿ) ಫಲಿತಾಂಶವನ್ನು ಶನಿವಾರ (ಜೂನ್ 6ರಂದು) ಪ್ರಕಟಿಸಲಿದೆ.
ವೈದ್ಯಕೀಯ ಶಿಕ್ಷಣ ಸಚಿವರೂ ಅದ ಪ್ರಾಧಿಕಾರದ ಸಹ ಅಧ್ಯಕ್ಷ ಡಾ.ಶರಣ ಪ್ರಕಾಶ ಪಾಟೀಲ ಅವರು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಟಿ ನಡೆಸಿ, ಫಲಿತಾಂಶದ ವಿವರಗಳನ್ನು ಪ್ರಕಟಿಸಲಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬು ಗೋಯಲ್ ಅವರೂ ಇರುತ್ತಾರೆ.
ಸಾರ್ವಜನಿಕರು, ಅಂದು ಮಧ್ಯಾಹ್ನ 2 ಗಂಟೆ ನಂತರ ಈ ಕೆಳಗಿನ ಲಿಂಕ್ ಗಳ ಮೂಲಕ ಫಲಿತಾಂಶ ಪಡೆಯಬಹುದು ಎಂದು ಅವರು ವಿವರಿಸಿದ್ದಾರೆ.
ಫಲಿತಾಂಶವನ್ನು ನೋಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ…
https://keaonline.karnataka.gov.in/ugcet_2026_results/
https://keaonline.karnataka.gov.in/ugcet_2026_result/
https://cetonline.karnataka.gov.in/kea/








