ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು UGCET-2026 ಪರೀಕ್ಷೆಯ ಫಲಿತಾಂಶವನ್ನು ಜೂನ್ 6, 2026 (ಶನಿವಾರ) ರಂದು ಇಂದು ಪ್ರಕಟಿಸಲಿದೆ.
ವೈದ್ಯಕೀಯ ಶಿಕ್ಷಣ ಸಚಿವರು ಮತ್ತು KEA ಸಹ ಅಧ್ಯಕ್ಷರಾದ ಡಾ. ಶರಣ ಪ್ರಕಾಶ ಪಾಟೀಲ ಅವರು ಇಂದು ಮಧ್ಯಾಹ್ನ 12:00 ಗಂಟೆಗೆ ಪತ್ರಿಕಾಗೋಷ್ಠಿಯನ್ನು ನಡೆಸಿ ಫಲಿತಾಂಶದ ವಿವರಗಳನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ಅಂದು ಮಧ್ಯಾಹ್ನ 2:00 ಗಂಟೆಯ ನಂತರ ಅಧಿಕೃತ ವೆಬ್ಸೈಟ್ಗಳ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.
ಫಲಿತಾಂಶವನ್ನು ವೀಕ್ಷಿಸುವುದು ಹೇಗೆ?
ಫಲಿತಾಂಶ ಪ್ರಕಟವಾದ ನಂತರ, ವಿದ್ಯಾರ್ಥಿಗಳು ಈ ಕೆಳಗಿನ ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡಿ ತಮ್ಮ ಅಂಕಪಟ್ಟಿ (Scorecard) ಪಡೆಯಬಹುದು:
cetonline.karnataka.gov.in
karresults.nic.in
ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಅರ್ಜಿ ಸಂಖ್ಯೆ (Application Number) ಮತ್ತು ನಿಮ್ಮ ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು (First 4 characters of your name) ಸಿದ್ಧವಾಗಿಟ್ಟುಕೊಳ್ಳಿ.ಹೆಚ್ಚಿನ ದಟ್ಟಣೆ (Traffic) ಇರುವುದರಿಂದ ವೆಬ್ಸೈಟ್ ನಿಧಾನವಾಗಬಹುದು, ಆತಂಕಪಡದೆ ಸ್ವಲ್ಪ ಸಮಯದ ನಂತರ ಪ್ರಯತ್ನಿಸಿ. ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿ ಎಂದು ಹಾರೈಸುತ್ತೇವೆ.








