ಬೆಂಗಳೂರು : ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ ಇಂದು ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಅವರ ಜೊತೆಗೆ ಸುಮಾರು 25 ನಿಮಿಷಗಳ ಕಾಲ ಚರ್ಚೆ ನಡೆಸಿದರು. ಬಳಿಕ ಅವರು ಬೆಂಗಳೂರಿನ ಕೋರಮಂಗಲ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಿನ್ನೆ ಕಾಂಗ್ರೆಸ್ ನಾಯಕರಿಗೆ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ. ರಾಜೀನಾಮೆ ಹಿಂಪಡೆಯಲು ಸಿಎಂ ಮತ್ತು ಸುರ್ಜಿವಾಲ ಮನವಿ ಮಾಡಿದ್ದಾರೆ. ಜಲ ಸಂಪನ್ಮೂಲ ಇಲಾಖೆಯ ಬಗ್ಗೆ ನನಗೆ ಹೆಚ್ಚು ಮಾಹಿತಿ ಇಲ್ಲ ಸಿಎಂ ಡಿಕೆ ಶಿವಕುಮಾರ್ ಹಾಗೂ ಸುರ್ಜೆವಾಲಾ ಅವರನ್ನು ಭೇಟಿಯಾಗಿದ್ದೆ. ಸುರ್ಜೆವಾಲಾ ಅವರಿಗೆ ಎಲ್ಲವನ್ನು ನಾನು ತಿಳಿಸಿದ್ದೇನೆ. ಇಬ್ಬರು ಏನು ತೀರ್ಮಾನ ಮಾಡುತ್ತಾರೆ ನೋಡೋಣ.
ನನಗೆ ಜಲ ಸಂಪನ್ಮೂಲ ಇಲಾಖೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಜಲಸಂಪನ್ಮೂಲ ಖಾತೆಯನ್ನು ನಾನು ಕೇಳಿರಲಿಲ್ಲ ಸಚಿವ ಸ್ಥಾನ ಇಂತಹದ್ದೇ ಖಾತೆ ಬೇಕು ಎಂದು ನಾನು ಯಾವತ್ತೂ ಕೇಳಿಲ್ಲ. ಮಾತು ಕೊಟ್ಟಂತೆ ನಡೆದುಕೊಳ್ಳಲಿಲ್ಲ ಅಂತ ಬೇಸರವಿದೆ. ನನ್ನ ಅಭಿಪ್ರಾಯ ಏನು ಎನ್ನು








