ಬೆಂಗಳೂರು: ಸಾವಿರಾರು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (UGCET/K-CET 2026) ಫಲಿತಾಂಶ ಕೊನೆಗೂ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದು ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಮಧ್ಯಾಹ್ನ 2 ಗಂಟೆಯಿಂದ ತಮ್ಮ ಅಂಕಗಳು ಹಾಗೂ ರ್ಯಾಂ)ಕ್ ಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು.
ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಕೆಇಎ ಸಹಾಧ್ಯಕ್ಷರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ವಿದ್ಯಾರ್ಥಿಗಳು ನಿಗದಿತ ವೆಬ್‌ಸೈಟ್‌ಗಳ ಮೂಲಕ ಸ್ಕೋರ್‌ಕಾರ್ಡ್ ವೀಕ್ಷಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.
ಫಲಿತಾಂಶ ವೀಕ್ಷಿಸಲು ಅಧಿಕೃತ ವೆಬ್‌ಸೈಟ್‌ಗಳು
ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಒಂದೇ ಸಮಯದಲ್ಲಿ ವೆಬ್‌ಸೈಟ್‌ಗೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಕೆಇಎ ಹಲವು ಪರ್ಯಾಯ ಲಿಂಕ್‌ಗಳನ್ನು ಒದಗಿಸಿದೆ. ಅಭ್ಯರ್ಥಿಗಳು ಈ ಕೆಳಗಿನ ಅಧಿಕೃತ ತಾಣಗಳ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು.
cetonline.karnataka.gov.in/kea/
karresults.nic.in
keaonline.karnataka.gov.in
K-CET 2026 Result ಚೆಕ್ ಮಾಡುವ ವಿಧಾನ
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಸುಲಭವಾಗಿ ಪಡೆಯಲು ಈ ಹಂತಗಳನ್ನು ಅನುಸರಿಸಬಹುದು:
ಮೇಲಿನ ಯಾವುದೇ ಒಂದು ಅಧಿಕೃತ ವೆಬ್‌ಸೈಟ್ ತೆರೆಯಿರಿ.
ಮುಖಪುಟದಲ್ಲಿ ಕಾಣುವ “UGCET 2026 Result” ಆಯ್ಕೆಯನ್ನು ಕ್ಲಿಕ್ ಮಾಡಿ.
ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ.
ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು ದೊಡ್ಡ ಅಕ್ಷರಗಳಲ್ಲಿ (Capital Letters) ನಮೂದಿಸಿ.
‘Submit’ ಬಟನ್ ಒತ್ತಿ.
ಬಳಿಕ ನಿಮ್ಮ ಅಂಕಪಟ್ಟಿ ಹಾಗೂ ರ್ಯಾಂ ಕ್ ವಿವರಗಳು ಪರದೆಯ ಮೇಲೆ ಕಾಣಿಸಿಕೊಳ್ಳುತ್ತವೆ.
ಸ್ಕೋರ್‌ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳುವುದು ಏಕೆ ಮುಖ್ಯ?
ಮುಂದಿನ ಹಂತವಾದ ಕೌನ್ಸೆಲಿಂಗ್ ಹಾಗೂ ದಾಖಲಾತಿ ಪ್ರಕ್ರಿಯೆಗಳಲ್ಲಿ ಸ್ಕೋರ್‌ಕಾರ್ಡ್ ಅಗತ್ಯವಾಗಿರುವುದರಿಂದ ವಿದ್ಯಾರ್ಥಿಗಳು ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಂಡು ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಉತ್ತಮ. ವೆಬ್‌ಸೈಟ್‌ನಲ್ಲಿ ತಾಂತ್ರಿಕ ತೊಂದರೆ ಅಥವಾ ಸರ್ವರ್ ಒತ್ತಡ ಕಂಡುಬಂದರೆ ಆತಂಕಪಡದೇ ಪರ್ಯಾಯ ಲಿಂಕ್‌ಗಳನ್ನು ಬಳಸಬಹುದು.








