ಬೆಂಗಳೂರು : ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಅಸಮಾಧಾನಗೊಂಡ ಸಚಿವ ಸ್ಥಾನಕ್ಕೆ ನಿನ್ನೆ ರಾಮಲಿಂಗಾರೆಡ್ಡಿ ರಾಜಿನಾಮೆ ನೀಡಿದ್ದರು. ಇಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಜೊತೆಗೆ ರಾಮಲಿಂಗಾರೆಡ್ಡಿ ಸುಧೀರ್ಘವಾಗಿ ಚರ್ಚೆ ನಡೆಸಿದರು. ಚರ್ಚೆ ಬಳಿಕ ಸುರ್ಜೆವಾಲಾ ರಾಮಲಿಂಗ ರೆಡ್ಡಿ ರಾಜಿನಾಮೆ ವಾಪಸ್ ಪಡೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ರಣದೀಪ್ ಸಿಂಗ್ ಸುರ್ಜೆವಾಲಾ, ರಾಮಲಿಂಗ ರೆಡ್ಡಿ ಪಕ್ಷದ ಹಿರಿಯ ನಾಯಕರು ಹಲವು ಸಲ ಸಚಿವರಾಗಿ ಅವರು ಕೆಲಸ ಮಾಡಿದ್ದಾರೆ ಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ರಾಮಲಿಂಗಾರೆಡ್ಡಿ ವಿಚಾರದಲ್ಲಿ ಬಿಜೆಪಿ ಸುಳ್ಳುಸುದ್ದಿ ಹಬ್ಬಿಸುತ್ತಿದೆ ಎಂದು ಬಿ ವೈ ವಿಜಯೇಂದ್ರ ಹಾಗೂ ಆರ್ ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದರು.
ರಾಮಲಿಂಗ ರೆಡ್ಡಿ ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ. ಹರಿಪ್ರಸಾದ್ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿಯವರು ಗೊಂದಲ ಆಗುವುದನ್ನು ಕಾಯುತ್ತಿದ್ದಾರೆ. ಈ ಮೂಲಕ ರಾಜಕೀಯ ಮೈಲೇಜ್ ಪಡೆಯಲು ಯತ್ನಿಸುತ್ತಿದ್ದಾರೆ. ಬಿವೈ ವಿಜಯೇಂದ್ರ ಮತ್ತು ಆರ್ ಅಶೋಕ್ ಜನರ ಮುಂದೆ ಕ್ಲೀನ್ ಬೋರ್ಡ್ ಆಗಿದ್ದಾರೆ. ಬಿಕೆ ಹರಿಪ್ರಸಾದ್ ನಾನು ಮಾತುಕತೆ ನಡೆಸಿದ್ದೆವು ಎಂದು ಬೆಂಗಳೂರಿನಲ್ಲಿ ಸುರ್ಜೆವಾಲ ತಿಳಿಸಿದರು.








