ಬೀದರ್ : ಕೋರ್ಟ್ ವಿಚಾರಣೆಗೆ ಗೈರಾದ ಹಿನ್ನೆಲೆ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್‌ಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. ಹೌದು ಕೋರ್ಟ್ ವಿಚಾರಣೆಗೆ ಗೈರು ಹಿನ್ನೆಲೆಯಲ್ಲಿ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗಾರಗೆ ಬಂಧನದ ಭೀತಿ ಎದುರಾಗಿದೆ. ಯಾವುದೇ ಕ್ಷಣದಲ್ಲಿ ಶರಣು ಸಲಗಾರ್ ಅರೆಸ್ಟ್ ಆಗುವ ಸಾಧ್ಯತೆ ಇದೆ.
ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ಶರಣು ಸಲ್ಗಾರ ಬಂಧನಕ್ಕೆ ಮುಂದಾಗಿದ್ದಾರೆ. ಹಾಗಾಗಿ ಶಾಸಕ ಶರಣು ಸಲಗರ ಮನೆಗೆ ಪೋಲಿಸರು ಆಗಮಿಸಿದ್ದು ಸಿ.ಪಿ.ಐ ಅಲಿಸಬ್ ಹಾಗು ಪಿ ಎಸ್ ಐ ಚಂದ್ರಶೇಖರ್ ಬೀದರ್ ಜಿಲ್ಲೆಯ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಮನೆಗೆ ಭೇಟಿ ನೀಡಿದ್ದಾರೆ.
ಅಕ್ರಮವಾಗಿ ಗೋಹತ್ಯೆ ಆರೋಪ ಪ್ರಕರಣವನ್ನು ತನಿಖೆ ನಡೆಸಿದ ಪೊಲೀಸರು ಈಗಾಗಲೇ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ಸಂಬಂಧ ನಡೆಯಬೇಕಿದ್ದ ಸಾಕ್ಷ್ಯ ವಿಚಾರಣೆಗೆ ಶಾಸಕ ಸಲಗರ್ ಗೈರಾಗಿದ್ದು, ಈ ಹಿನ್ನೆಲೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ನಿಂದ ವಾರಂಟ್ ಜಾರಿಯಾಗಿದೆ.2023ರ ಜು.1ರಂದು ಬಕ್ರೀದ್ ಹಬ್ಬದ ವೇಳೆ ಅಕ್ರಮವಾಗಿ ಗೋಹತ್ಯೆ ಮಾಡಿದ್ದಾರೆಂದು ಆರೋಪಿಸಿ, ಗಲಾಟೆ ಮಾಡಿದ್ದರು. ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ಹೋಗಿ ಗೋಹತ್ಯೆ ತಡೆದಾಗ ಗಲಾಟೆ ಶುರುವಾಗಿತ್ತು.








