ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆಯೊಂದನ್ನು ಮಾಡಿದ್ದು, ಹಿರಿಯ ಕೆ.ಎ.ಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ಅವರನ್ನು ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.
ಕೆ.ಎ.ಎಸ್ (ಸೂಪರ್ ಟೈಂ ಸ್ಕೇಲ್) ಅಧಿಕಾರಿಯಾಗಿರುವ ಡಾ. ರಾಜೇಂದ್ರ ಪ್ರಸಾದ್ ಎಂ.ಎನ್. ಅವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಮಾನ್ಯ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಥವಾ ಮಾನ್ಯ ಮುಖ್ಯಮಂತ್ರಿಯವರ ಪದಾವಧಿಯವರೆಗೆ ನೇಮಕ ಮಾಡಲಾಗಿದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ.
ಕರ್ನಾಟಕ ಸರ್ಕಾರದ ಸಚಿವಾಲಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸಿಆಸುಇ) ಜೂನ್ 6, 2026 ರಂದು ಈ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಹೆಚ್. ಅವರು ರಾಜ್ಯಪಾಲರ ಆಜ್ಞಾನುಸಾರ ಈ ಆದೇಶಕ್ಕೆ ಸಹಿ ಹಾಕಿದ್ದಾರೆ.
ಅಂದಹಾಗೇ ಡಿ.ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ಡಾ.ರಾಜೇಂದ್ರ ಪ್ರಸಾದ್ ಅವರು ಡಿಕೆಶಿ ಆಪ್ತ ಕಾರ್ಯದರ್ಶಿಯಾಗಿದ್ದರು. ಇದೀಗ ಅವರನ್ನೇ ಸಿಎಂ ಆದ ಬಳಿಕ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ: ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟಿಸಿ ಒತ್ತಾಯ








