ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜಕೀಯ ಬೆಳವಣಿಗೆಯೊಂದರಲ್ಲಿ, ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಈ ಕುರಿತು ಅವರೇ ಅಧಿಕೃತ ಹೇಳಿಕೆ ನೀಡುವ ಮೂಲಕ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಎಲ್ಲಾ ವದಂತಿ ಹಾಗೂ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, “ನನ್ನ ರಾಜೀನಾಮೆಯನ್ನು ಮುಖ್ಯಮಂತ್ರಿಗಳು ಸ್ವೀಕಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಿಎಂ ಅವರು ಸ್ವೀಕಾರ ಮಾಡುವುದಿಲ್ಲ ಎಂದರೆ ನನ್ನ ರಾಜೀನಾಮೆ ತಿರಸ್ಕೃತಗೊಂಡಿದೆ (ರಿಜೆಕ್ಟ್) ಎಂದೇ ಅರ್ಥ” ಎಂದು ತಿಳಿಸಿದರು.
ಮುಂದುವರಿದು ಮಾತನಾಡಿದ ಅವರು, “ಈಗಾಗಲೇ ನಾನು ಮುಖ್ಯಮಂತ್ರಿಗಳ ಜೊತೆ ಸುದೀರ್ಘವಾಗಿ ಮಾತನಾಡಿದ್ದೇನೆ. ಸದ್ಯ ನಮ್ಮ ನಡುವೆ ಯಾವುದೇ ರೀತಿಯ ಗೊಂದಲಗಳಿಲ್ಲ. ಇನ್ನು ಖಾತೆ ಬದಲಾವಣೆ ಅಥವಾ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ, ಅದನ್ನು ಅವರೇ ನೋಡಿಕೊಳ್ಳುತ್ತಾರೆ” ಎಂದು ಸ್ಪಷ್ಟಪಡಿಸಿದರು.
ಸಚಿವರ ಈ ಹೇಳಿಕೆಯಿಂದಾಗಿ ಇಲಾಖೆ ಹಾಗೂ ಸರ್ಕಾರದ ಮಟ್ಟದಲ್ಲಿದ್ದ ಅಸಮಾಧಾನ ಸದ್ಯಕ್ಕೆ ತಿಳಿಯಾಗಿದ್ದು, ಸಚಿವರು ತಮ್ಮ ಎಂದಿನ ಆಡಳಿತಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ








