ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.
ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಲಗೇಜ್ ಬ್ಯಾಗ್ ನಲ್ಲಿ ಗಾಂಜಾ ತರಲಾಗಿತ್ತು. ಕಲ್ಯಾಣಿ ಲಗೇಜ್ ಬ್ಯಾಗ್ ನಲ್ಲಿ 6.6 ಕೆ.ಜಿ ಮೌಲ್ಯದ ಗಾಂಜಾ ಪತ್ತೆಯಾಗಿತ್ತು. ಪರಿಶೀಲನ ವೇಳೆ ಗಾಂಜಾ ಸಮೇತ ಆರೋಪಿ ಸಿಕ್ಕಿಬಿದ್ದಿದ್ದಾನೆ. ಸದ್ಯ ಆರೋಪಿಯನ್ನು ಅಧಿಕಾರಿಗಳು ವಶಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.








