ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.ನಿರ್ಮಲಾ(24) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರದ ಹಾಲಗಾನಹಳ್ಳಿ ಗ್ರಾಮದ ನಿವಾಸಿಯಾಗಿರುವ ನಿರ್ಮಲಾ ದೇವನಹಳ್ಳಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿದ್ದರು. ಬಸ್ನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ವಿಷ ಸೇವಿಸಿದ್ದಾರೆ. ಈ ವೇಳೆ 48 ಮಂದಿ ಪ್ರಯಾಣಿಕರಿದ್ದ ಬಸ್ ಸಮೇತ ಚಾಲಕ ಹಾಗೂ ಕಂಡಕ್ಟರ್ ಖಾಸಗಿ ಆಸ್ಪತ್ರೆಗೆ ತೆರಳಿ ಸಮಯ ಪ್ರಜ್ಞೆ ಮೆರೆದಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಡಿಪೋಗೆ ಸೇರಿದ ಬಸ್ ಅನ್ನು ಆಸ್ಪತ್ರೆ ಬಳಿ ನಿಲ್ಲಿಸಿದ ಕೆಎಸ್ಆರ್ಟಿಸಿ ಸಿಬ್ಬಂದಿ ಪ್ರಯಾಣಿಕರನ್ನು ಬೇರೆ ಬಸ್ನಲ್ಲಿ ಕಳುಹಿಸಿದ್ದಾರೆ. ಕಂಡಕ್ಟರ್ ಸುಧಾಕರ್, ಡ್ರೈವರ್ ನಾರಾಯಣಸ್ವಾಮಿಯ ಸಮಯ ಪ್ರಜ್ಞೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.








