ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ವಿಚಿತ್ರ ಹಾಗೂ ಅಷ್ಟೇ ಅಚ್ಚರಿಯ ಘಟನೆಯೊಂದು ಜರುಗಿದ್ದು, ಅಳಿಯನೊಬ್ಬ ತನ್ನ ಅತ್ತೆಯನ್ನೇ (ಹೆಂಡತಿಯ ತಾಯಿ)
ಕಾನೂನುಬದ್ಧವಾಗಿ ಮದುವೆಯಾಗಿದ್ದಾನೆ. ಸದ್ಯ ಇವರಿಬ್ಬರ ಕೋರ್ಟ್ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ, ನವದಂಪತಿಗಳು ನ್ಯಾಯಾಲಯದ ಆವರಣದಲ್ಲಿ ಒಬ್ಬರಿಗೊಬ್ಬರು ಹಾರ ಹಾಕಿಕೊಳ್ಳುತ್ತಿರುವುದನ್ನು ಕಾಣಬಹುದು. ಅಷ್ಟೇ ಅಲ್ಲದೆ, ಇಬ್ಬರೂ ಕೈಯಲ್ಲಿ ತಮ್ಮ ಮದುವೆ ನೋಂದಣಿ ಪತ್ರವನ್ನು (Marriage Certificate) ಹಿಡಿದುಕೊಂಡು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.
ಸ್ಥಳೀಯ ಮೂಲಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವರದಿಗಳ ಪ್ರಕಾರ, ಇವರಿಬ್ಬರ ನಡುವೆ ಕಳೆದ ಕೆಲವು ಸಮಯದಿಂದ ಪ್ರೇಮ ಸಂಬಂಧವಿತ್ತು ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮೂಲಗಳಿಂದ ಇನ್ನು ಖಚಿತ ಮಾಹಿತಿ ಲಭ್ಯವಾಗಿಲ್ಲ.
ಈ ವಿಚಿತ್ರ ವಿವಾಹದ ಬಗ್ಗೆ ಸ್ಥಳೀಯರಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆಯಾದರೂ, ಈವರೆಗೆ ಯಾವುದೇ ರೀತಿಯ ಕಾನೂನುಬದ್ಧ ದೂರು ಅಥವಾ ಪೊಲೀಸ್ ಕೇಸ್ ದಾಖಲಾಗಿಲ್ಲ ಎಂದು ವರದಿಯಾಗಿದೆ. ನೆಟ್ಟಿಗರು ಈ ವಿಡಿಯೋ ನೋಡಿ ತರಹೇವಾರಿ ಕಮೆಂಟ್‌ಗಳನ್ನು ಮಾಡುತ್ತಿದ್ದು, ಸದ್ಯ ಈ ಅಪರೂಪದ “ಅತ್ತೆ-ಅಳಿಯನ” ಕಲ್ಯಾಣದ ಸುದ್ದಿ ಇಂಟರ್ನೆಟ್‌ನಲ್ಲಿ ಸದ್ದು ಮಾಡುತ್ತಿದೆ.








