ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ್ ಅರಸು ಅವರ ಮೊಮ್ಮಗ ಸೂರಜ್ ಹೆಗಡೆ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಇದೀಗ ಬೆಂಗಳೂರಿನ ಡಾಲರ್ಸ್ ಕಾಲೋನಿ ಮನೆಯಲ್ಲಿರುವ ಸೂರಜ್ ಹೆಗಡೆ ಅವರ ಮನೆಯಲ್ಲಿ ರಾಹುಲ್ ಗಾಂಧಿ ಸೂರಜ್ ಹೆಗಡೆ ಅವರ ಅಂತಿಮ ದರ್ಶನ ಪಡೆದರು.
ಅಂತಿಮ ದರ್ಶನದ ಬಳಿಕ ಕುಟುಂಬದ ಸದಸ್ಯರಿಗೆ ರಾಹುಲ್ ಗಾಂಧಿ ಸಾಂತ್ವನ ಹೇಳಿದರು.ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ, ಕೆ.ಸಿ ವೇಣುಗೋಪಾಲ್ ಅವರು ಸಹ ಸೂರಜ್ ಹೆಗಡೆ ಅಂತಿಮ ದರ್ಶನ ಪಡೆದರು ರಾಹುಲ್ ಗಾಂಧಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಸಾತ್ ಕೊಟ್ಟಿದ್ದಾರೆ








