ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಣೆ ಪತ್ತೆಯಾಗಿದೆ.
ದುಬೈನಿಂದ ಬಂದಿದ್ದ ಪ್ರಯಾಣಿಕನ ಬಳಿ 899.50 ಗ್ರಾಂ ಚಿನ್ನ ಪತ್ತೆಯಾಗಿದೆ. 1.337 ಕೋಟಿ ಮೌಲ್ಯದ 899.50 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. 4 ಕ್ಯಾಪ್ಸುಲ್ ಗಳಲ್ಲಿ ಚಿನ್ನದ ಪೇಸ್ಟ್ ಅಡಗಿಸಿ ತಂದಿದ್ದ ಪ್ರಯಾಣಿಕ ಅನುಮಾನಸ್ಪದ ವರ್ತನೆ ಹಿನ್ನಲೆ ಕಸ್ಟಮ್ಸ್ ಅಧಿಕಾರಿಗಳಿಂದ ತಪಾಸಣೆ ನಡೆಸಿದರು. ಈ ವೇಳೆ 899.50 ಗ್ರಾಂ 24 ಕ್ಯಾರಾಟ್ ಚಿನ್ನ ಪತ್ತೆಯಾಗಿದೆ. ಕಸ್ಟಮ್ಸ್ ಕಾಯ್ದೆಯಡಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.








