ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರ ಘಟನೆಯೊಂದು ನಡೆದಿದ್ದು, ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.ಮನೆಯ ಮುಂದೆ ಗುಂಡು ಹಾರಿಸಿಕೊಂಡು ಸುಮಾ (45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆಲವು ದಿನಗಳಿಂದ ಸುಮಾ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಫಿ ಉದ್ಯಮಿ ರಾಜೇಶ್ ಎಂಬುವವರ ಪತ್ನಿ ಸುಮಾ ಎಂದು ತಿಳಿದುಬಂದಿದೆ. ತಲೆಗೆ ಗುಂಡು ಹಾರಿಸಿಕೊಂಡು ಸುಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲೈಸೆನ್ಸ್ ರಿವಲ್ವಾರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಚಿಕ್ಕಮಗಳೂರು ಎಸ್.ಪಿ ಜಿತೇಂದ್ರ ಕುಮಾರ್ ಭೇಟಿ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿ ಅವರು, ಆತ್ಮಹತ್ಯೆ ಮಾಡಿಕೊಂಡ ಸುಮಾ ಡೆತ್ ನೋಟ್ ಕೂಡ ಸಿಕ್ಕಿದೆ. ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೃಹಿಣಿ ಸುಮಾ ಆತ್ಮಹತ್ಯೆ ಕುರಿತಾಗಿ ತನಿಖೆ ನಡೆಯುತ್ತಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಕಂಡುಬದಿದೆ. ರಿವಲ್ವಾರ್ ಸಂಬಂಧ ದಾಖಲೆ ಪರಿಶೀಲನೆ ನಡೆಸುತ್ತಿದ್ದೇವೆ. ಎಂದು ಚಿಕ್ಕಮಗಳೂರು ಎಸ್.ಪಿ ಜಿತೇಂದ್ರ ಕುಮಾರ್ ಹೇಳಿಕೆ ನೀಡಿದರು.








