ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ನಡೆದಿದ್ದು, ಒಂಟಿ ಮನೆ ಟಾರ್ಗೆಟ್ ಮಾಡಿ ಚೆನ್ನಾಭರಣ ದರೋಡೆ ಮಾಡಲಾಗಿದೆ. ಬೆಂಗಳೂರಿನ ಕದಿರೆನಹಳ್ಳಿಯಲ್ಲಿ ಒಂಟಿ ಮನೆಗೆ ಖದೀಮರು ಕನ್ನ ಹಾಕಿದ್ದಾರೆ. ಮನೆಯಲ್ಲಿ ಇದ್ದಂತಹ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ.
ಅರುಣ್ ಕುಮಾರ್ ಮನೆಯಲ್ಲಿ ಸುಮಾರು 21 ಲಕ್ಷ ಮೌಲ್ಯದ 200 ಗ್ರಾಂ ಚಿನ್ನ, 2 ಲಕ್ಷ ಮೌಲ್ಯದ 3 ಕೆಜಿ ಬೆಳ್ಳಿ ಹಾಗೂ ರೇಷ್ಮೆ ಸೀರೆಗಳನ್ನು ಕಳ್ಳತನ ಮಾಡಿದ್ದಾರೆ. ಅರುಣ್ ಕುಮಾರ್ ದಂಪತಿ ಸಂಬಂಧಿಕರ ಮನೆಗೆ ಹೋಗಿದ್ದರು ಆ ಸಂದರ್ಭದಲ್ಲಿ ಕಬ್ಬಿಣದ ಡೋರ್ ಲಾಕ್ ಮುರಿದು ಮನೆ ಒಳಗೆ ನುಗ್ಗಿದ್ದಾರೆ. ಮನೆಯ ಲಾಕರ್ ಮುರಿದು ಚಿನಭರಣ ಬೆಳ್ಳಿ ಹಾಗೂ ಬೆಲೆ ಬಾಳುವ ರೇಷ್ಮೆ ಸೀರೆ ಸಹ ಕದ್ದು ತೆಗೆದುಕೊಂಡು ಹೋಗಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.








