ಮಂಡ್ಯ : ಕ್ಷೇತ್ರದ ಜನರ ಪ್ರೀತಿ, ವಿಶ್ವಾಸಕ್ಕೆ ನಾನು ಎಂದೆದಿಗೂ ಚಿರಋಣಿಯಾಗಿರುತ್ತೇನೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.
ಮದ್ದೂರು ತಾಲೂಕಿನ ಬೆಸಗರಹಳ್ಳಿ ಜಿಲ್ಲಾ ವ್ಯಾಪ್ತಿಯ ಕೆ.ಎಂ.ಉದಯ್ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಹುಟ್ಟು ಹಬ್ಬದ ಅಂಗವಾಗಿ ಪಣ್ಣೆದೊಡ್ಡಿಯ ಅಡ್ಡರಸ್ತೆಯಲ್ಲಿರುವ ಶ್ರೀ ವೀರಾಂಜನೇಸ್ವಾಮಿ ದೇಗುಲದಲ್ಲಿ ಶಾಸಕ ಉದಯ್ ವಿಶೇಷ ಪೂಜೆ ಸಲ್ಲಿಸಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಕೋರೋನಾದಂತ ವೇಳೆಯಲ್ಲಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕ್ಷೇತ್ರದಲ್ಲಿ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡಬೇಕೆಂದು ಬಂದೇ ಆದರೆ, ಜನರ ಪ್ರೀತಿ, ವಿಶ್ವಾಸ ಹಾಗೂ ಒತ್ತಡದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿತು. ನನ್ನ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡು ಮೊದಲ ಬಾರಿಗೆ ಅಭೂತಪೂರ್ವ ಮತವನ್ನು ಕೊಟ್ಟು ತಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಿರಿ ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಹುಸಿ ಮಾಡುವುದಿಲ್ಲ ಎಂದರು.
ಈಗಾಗಲೇ ಬೆಸಗರಹಳ್ಳಿ ಜಿಲ್ಲಾ ವ್ಯಾಪ್ತಿಯಲ್ಲಿ ಅಂದಾಜು 80 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ವಿವಿಧ ಇಲಾಖೆಗಳ ಮೂಲಕ ಅಬಿವೃದ್ಧಿ ಕಾರ್ಯಕ್ರಮ ಸಮರೋಪಾದಿಯಲ್ಲಿ ನಡೆಯುತ್ತಿವೆ.
ಗ್ರಾಮೀಣ ಭಾಗದ ರಸ್ತೆ, ಕಾಲುವೆ, ಚರಂಡಿ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸುತ್ತಿದ್ದೇನೆ. ಪಣ್ಣೆದೊಡ್ಡಿ ಒಂದೇ ಗ್ರಾಮದಲ್ಲಿ ಸುಮಾರು 6 ಕೋಟಿ ರೂ.ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಗ್ರಾಮದಲ್ಲಿ ನಾಲೆಗಳು ಹಲವಾರು ವರ್ಷಗಳಿಂದ ಆಧುನಿಕರಣವಾಗದ ಹಿನ್ನೆಲೆಯಲ್ಲಿ ಸಮರ್ಪಕವಾಗಿ ಜಮೀನುಗಳಿಗೆ ಹರಿಯದೆ ವ್ಯವಸಾಯ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಕಾಮಗಾರಿ ಕೈಗೊಂಡಿರುವುದರಿಂದ ನೀರು ಸುಗಮವಾಗಿ ಹರಿದು ರೈತರಿಗೆ ಅನುಕೂಲವಾಗಲಿದೆ ಎಂದರು.
ಮುಂದಿನ ದಿನಗಳಲ್ಲಿ ಸರ್ಕಾರದಿಂದ ವಿಶೇಷ ಅನುದಾನ ತಂದು ಬೆಸಗರಹಳ್ಳಿ ಜಿಪಂ ವ್ಯಾಪ್ತಿಯ ಪ್ರತಿಯೊಂದು ಹಳ್ಳಿಗೂ ಮೂಲ ಸೌಕರ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ ಹುಟ್ಟು ಹಬ್ಬದ ಅಂಗವಾಗಿ ಪಣ್ಣೆದೊಡ್ಡಿ ಅಡ್ಡ ರಸ್ತೆಯಲ್ಲಿರುವ ಶ್ರೀ ವೀರಾಂಜನೇಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.
ಇದೇ ವೇಳೆ ಮುಖಂಡರಾದ ಅಡ್ಡ ರಸ್ತೆ ಗೋಪಿ, ಪಣ್ಣೆದೊಡ್ಡಿ ಸುಧಾಕರ್, ಸುನೀಲ್, ಮುರಳಿ, ನಾಗರಾಜು, ಶೋಭಾ, ತಿಮ್ಮೇಗೌಡ, ಪುಟ್ಟಸ್ವಾಮಿ, ಗೋವಿಂದ, ಮಾರಸಿಂಗನಹಳ್ಳಿ ರಾಮಚಂದ್ರ ಸೇರಿದಂತೆ ಇತರರು ಇದ್ದರು.








