Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಓಮನ್ ಕರಾವಳಿಯಲ್ಲಿ ನೌಕೆಯ ಮೇಲೆ ದಾಳಿ: ಮೂವರು ಭಾರತೀಯರು ನಾಪತ್ತೆ, US ರಾಯಭಾರಿಗೆ ಭಾರತದ ಸಮನ್ಸ್!

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!
KARNATAKA

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!

By kannadanewsnow57

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಇದೀಗ ದೊಡ್ಡ ಮಟ್ಟದ ಪರಿಶೀಲನಾ ಕಾರ್ಯ ನಡೆಯುತ್ತಿದೆ. ಯೋಜನೆಯ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ಅರ್ಹತೆಯನ್ನು ಮರುಪರಿಶೀಲಿಸುವ ವೇಳೆ ಸಾವಿರಾರು ಅನರ್ಹರ ಹೆಸರುಗಳು ಬೆಳಕಿಗೆ ಬಂದಿದ್ದು, ಸರ್ಕಾರವು ಪಟ್ಟಿಯಿಂದ ಅವರನ್ನು ಕೈಬಿಡುವ ಪ್ರಕ್ರಿಯೆ ಆರಂಭಿಸಿದೆ.

ಪ್ರಸ್ತುತ 17 ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆದ ತಪಾಸಣೆಯಲ್ಲಿ ಒಟ್ಟು 1,12,092ಕ್ಕೂ ಹೆಚ್ಚು ಅನರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ. ಈ ಪೈಕಿ ಆತಂಕಕಾರಿ ಸಂಗತಿಯೆಂದರೆ, 55,232 ಮೃತ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗಿರುವುದು ಪರಿಶೀಲನೆ ವೇಳೆ ಪತ್ತೆಯಾಗಿದೆ.

ಇದರ ಜೊತೆಗೆ, ಆದಾಯ ತೆರಿಗೆ (ಐಟಿ) ಹಾಗೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪಾವತಿಸುತ್ತಿರುವ 56,860 ಮಹಿಳೆಯರು ಕೂಡ ಯೋಜನೆಯ ಅರ್ಹತಾ ಮಾನದಂಡಗಳಿಗೆ ವಿರುದ್ಧವಾಗಿರುವುದರಿಂದ ಅವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಹೆಸರುಗಳು ಕೈಬಿಟ್ಟಿವೆ?
ಪರಿಶೀಲನೆ ವೇಳೆ ವಿವಿಧ ಜಿಲ್ಲೆಗಳಲ್ಲಿ ಅನರ್ಹ ಫಲಾನುಭವಿಗಳ ಸಂಖ್ಯೆ ಹೀಗಿದೆ:

ಮೈಸೂರು ಜಿಲ್ಲೆ – 18,000

ಚಿತ್ರದುರ್ಗ ಜಿಲ್ಲೆ – 12,637

ದಕ್ಷಿಣ ಕನ್ನಡ ಜಿಲ್ಲೆ – 9,000

ಕೊಪ್ಪಳ ಜಿಲ್ಲೆ – 7,200

ಉತ್ತರ ಕನ್ನಡ ಜಿಲ್ಲೆ – 6,380

ಹಾವೇರಿ ಜಿಲ್ಲೆ – 6,346

ದಾವಣಗೆರೆ ಜಿಲ್ಲೆ – 4,000

ಉಡುಪಿ ಜಿಲ್ಲೆ – 2,800

ಇತರೆ ಜಿಲ್ಲೆಗಳಲ್ಲಿಯೂ ಇದೇ ರೀತಿಯ ಪರಿಶೀಲನೆ ಮುಂದುವರಿದಿದ್ದು, ಅನರ್ಹರನ್ನು ಗುರುತಿಸಿ ಪಟ್ಟಿಯಿಂದ ಹೊರಗಿಡುವ ಕಾರ್ಯ ಚುರುಕುಗೊಂಡಿದೆ.

ಗೃಹಲಕ್ಷ್ಮಿ ಯೋಜನೆ, ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ, ಅನರ್ಹ ಫಲಾನುಭವಿಗಳು, ಮೃತರ ಖಾತೆಗೆ ಹಣ ಜಮೆ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಲವು ವಿಚಾರಗಳು ಇದೀಗ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿವೆ.

Shock for ineligible Grihalakshmi beneficiaries: Names of 1.12 lakh women deleted from the list!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

2 Mins Read

ರಾಜ್ಯದ ಗ್ರಾಮೀಣ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ `ಒಸಿ’ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ

1 Min Read

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

2 Mins Read
Recent News

​ಓಮನ್ ಕರಾವಳಿಯಲ್ಲಿ ನೌಕೆಯ ಮೇಲೆ ದಾಳಿ: ಮೂವರು ಭಾರತೀಯರು ನಾಪತ್ತೆ, US ರಾಯಭಾರಿಗೆ ಭಾರತದ ಸಮನ್ಸ್!

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಗ್ರಾಮೀಣ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ `ಒಸಿ’ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ

State News
KARNATAKA

ಅನರ್ಹ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶಾಕ್ : ಪಟ್ಟಿಯಿಂದ 1.12 ಲಕ್ಷ ಮಹಿಳೆಯರ ಹೆಸರು ಡಿಲೀಟ್.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಇದೀಗ ದೊಡ್ಡ ಮಟ್ಟದ ಪರಿಶೀಲನಾ ಕಾರ್ಯ ನಡೆಯುತ್ತಿದೆ.…

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ’ ಬೆಳಿಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಗ್ರಾಮೀಣ ಜನತೆಗೆ ಭರ್ಜರಿ ಗುಡ್ ನ್ಯೂಸ್ : ಮನೆಗಳಿಗೆ ವಿದ್ಯುತ್ ಸಂಪರ್ಕಕ್ಕೆ `ಒಸಿ’ ವಿನಾಯಿತಿ ನೀಡಿ ಸರ್ಕಾರ ಮಹತ್ವದ ಆದೇಶ

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.