Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸಾಗರದಲ್ಲಿ ಅಕ್ರಮ ಜಂಬಿಟ್ಟಿಗೆ ಕ್ವಾರಿ, ಮರಳು ಅಡ್ಡೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ದಾಳಿ: ಲಾರಿಗಳು ಜಪ್ತಿ!
KARNATAKA

BREAKING: ಸಾಗರದಲ್ಲಿ ಅಕ್ರಮ ಜಂಬಿಟ್ಟಿಗೆ ಕ್ವಾರಿ, ಮರಳು ಅಡ್ಡೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ದಾಳಿ: ಲಾರಿಗಳು ಜಪ್ತಿ!

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಸಾಗರ ತಾಲೂಕಿನಲ್ಲಿ ನೂತನ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡಿರುವ ಡಾ. ಪ್ರತಿಭಾ ಆರ್. ಅವರು ಅಕ್ರಮ ದಂಧೆಕೋರರ ವಿರುದ್ಧ ದಂಡಯಾತ್ರೆ ಆರಂಭಿಸಿದ್ದಾರೆ. ತಾಲೂಕಿನಾದ್ಯಂತ ಸದ್ದಿಲ್ಲದೆ ನಡೆಯುತ್ತಿದ್ದ ಅಕ್ರಮ ಜಂಬಿಟ್ಟಿಗೆ (ಲೆಟರೈಟ್ ಕಲ್ಲು) ಮತ್ತು ಮರಳು ಸಾಗಾಣಿಕೆ ಜಾಲದ ಮೇಲೆ ಖಡಕ್ ದಾಳಿ ನಡೆಸುವ ಮೂಲಕ ದಂಧೆಕೋರರ ನಡುಕ ಹುಟ್ಟಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಹಶೀಲ್ದಾರ್ ಡಾ.ಪ್ರತಿಭಾ ಅವರು ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಜಂಬಿಟ್ಟಿಗೆ, ಮರಳು ಸಾಗಾಟ ನಿರತ ಲಾರಿಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದೆ.

ಹಿರೇನೆಲ್ಲೂರು ಗ್ರಾಮದಲ್ಲಿ ನಡೆದಿದ್ದೇನು?

ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ಹಿರೇನೆಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇನೆಲ್ಲೂರು ಗ್ರಾಮದ ಸರ್ವೆ ನಂಬರ್ 211 ರ ಸರ್ಕಾರಿ ಜಾಗದಲ್ಲಿ ಯಾವುದೇ ಅನುಮತಿಯಿಲ್ಲದೆ, ಅಕ್ರಮವಾಗಿ ಜಂಬಿಟ್ಟಿಗೆ ಕಲ್ಲುಗಳನ್ನು ಗಣಿಗಾರಿಕೆ ಮಾಡಿ ಲಾರಿಗಳ ಮೂಲಕ ಸಾಗಿಸಲಾಗುತ್ತಿದೆ ಎಂಬ ದೂರು ತಹಶೀಲ್ದಾರ್ ಅವರಿಗೆ ತಲುಪಿತ್ತು.

ಮಾಹಿತಿ ಸಿಗುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರು ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಧಾವಿಸಿದರು. ಈ ವೇಳೆ ಅಕ್ರಮವಾಗಿ ಜಂಬಿಟ್ಟಿಗೆ ಮತ್ತು ಮರಳು ಸಾಗಿಸುತ್ತಿದ್ದ ಎರಡು ಲಾರಿಗಳನ್ನು ರೆಡ್ ಹ್ಯಾಂಡ್ ಆಗಿ ಪತ್ತೆ ಹಚ್ಚಿ, ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ನಿಯಮಾವಳಿಗಳ ಪ್ರಕಾರ ಪ್ರಕರಣ ದಾಖಲಿಸಲಾಗಿದ್ದು, ಎಫ್‌ಐಆರ್ (FIR) ದಾಖಲು ಮಾಡಲಾಗಿದೆ.

ದಂಧೆಕೋರರಿಗೆ ತಹಶೀಲ್ದಾರ್ ಖಡಕ್ ಎಚ್ಚರಿಕೆ

ಅಕ್ರಮ ಜಂಬಿಟ್ಟಿಗೆ ಕಲ್ಲು ತೆಗೆಯುತ್ತಿದ್ದ ಜಾಗಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ತಹಶೀಲ್ದಾರ್ ಡಾ. ಪ್ರತಿಭಾ ಆರ್., ತಾಲೂಕಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಯಾವುದೇ ಆಸ್ಪದ ನೀಡುವುದಿಲ್ಲ ಎಂದು ಕಠಿಣ ಸಂದೇಶ ರವಾನಿಸಿದ್ದಾರೆ.

“ನನ್ನ ಸಾಗರ ತಾಲೂಕಿನ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಕ್ರಮ ಮರಳು ಸಾಗಾಣಿಕೆ ಅಥವಾ ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ನಡೆಯಲು ಬಿಡುವುದಿಲ್ಲ. ಸರ್ಕಾರದ ನಿಯಮಗಳನ್ನು ಮೀರಿ ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡುವ ಅಕ್ರಮ ಸಾಗಾಣಿಕೆದಾರರ ವಿರುದ್ಧ ಯಾವುದೇ ಮುಲಾಜಿಲ್ಲದೆ, ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.” – ಡಾ. ಪ್ರತಿಭಾ ಆರ್., ತಹಶೀಲ್ದಾರ್, ಸಾಗರ

ತಾಲೂಕಿನಾದ್ಯಂತ ಹದ್ದಿನ ಕಣ್ಣು

ನೂತನ ತಹಶೀಲ್ದಾರ್ ಆಗಿ ಬಂದ ದಿನದಿಂದಲೂ ಡಾ. ಪ್ರತಿಭಾ ಅವರು ಸಾಗರ ತಾಲೂಕಿನಾದ್ಯಂತ ನಿರಂತರವಾಗಿ ಸಂಚರಿಸುತ್ತಾ ಸಾರ್ವಜನಿಕ ಕುಂದುಕೊರತೆಗಳ ಜೊತೆಗೆ ಇಂತಹ ಅಕ್ರಮಗಳ ಮೇಲೆಯೂ ಹದ್ದಿನ ಕಣ್ಣಿಟ್ಟಿದ್ದಾರೆ. ಮಲೆನಾಡಿನ ಪ್ರಕೃತಿ ಮತ್ತು ಸರ್ಕಾರಿ ಜಮೀನುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅವರು ತೆಗೆದುಕೊಳ್ಳುತ್ತಿರುವ ಇಂತಹ ದಿಟ್ಟ ನಿರ್ಧಾರಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದ್ದು, ಅಕ್ರಮ ದಂಧೆ ನಡೆಸುವವರಿಗೆ ಸಿಂಹಸ್ವಪ್ನವಾಗಿ ಪರಿಣಮಿಸಿದ್ದಾರೆ.

ದಾಳಿ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು ಸಾಥ್

ಈ ಯಶಸ್ವಿ ದಾಳಿಯ ಕಾರ್ಯಾಚರಣೆಯ ಸಂದರ್ಭದಲ್ಲಿ ಹಿರೇನೆಲ್ಲೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ರಾಘವೇಂದ್ರ, ಕಂದಾಯ ನಿರೀಕ್ಷಕರು (Revenue Inspector) ವಿನಾಯಕ್, ಗ್ರಾಮ ಆಡಳಿತ ಅಧಿಕಾರಿ (VAO) ಭೀಮಣ್ಣ, ಬೀಟ್ ಪೊಲೀಸ್ ಸಿಬ್ಬಂದಿ ಮಂಜುನಾಥ್ ಹಾಗೂ ಗ್ರಾಮ ಸಹಾಯಕ ಲೋಕೇಶ್ ಸೇರಿದಂತೆ ಪ್ರಮುಖ ಅಧಿಕಾರಿಗಳು ತಹಶೀಲ್ದಾರ್ ಡಾ.ಪ್ರತಿಭಾ ಅವರಿಗೆ ಸಾಥ್ ನೀಡಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು..

Share. Facebook Twitter LinkedIn WhatsApp Email

Related Posts

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

2 Mins Read

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

1 Min Read

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

1 Min Read
Recent News

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

​ಬಾದಾಮಿ ಖರೀದಿಯಲ್ಲಿ ₹82 ರೂಪಾಯಿ ವಂಚನೆ: ಗ್ರಾಹಕ ನ್ಯಾಯಾಲಯದಲ್ಲಿ ಹೋರಾಡಿ ₹7,000 ಪರಿಹಾರ ಗೆದ್ದ ಗ್ರಾಹಕ!

State News
KARNATAKA

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ದಿನದಿಂದ ದಿನಕ್ಕೆ ಪೆಟ್ರೋಲ್ ದರ ಗಗನಕ್ಕೇರುತ್ತಿರುವ ಬೆನ್ನಲ್ಲೇ, ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ವಿನೂತನ ಕಳ್ಳರ ಗ್ಯಾಂಗ್…

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.