Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Liver cancer: ‘ಸಕ್ಕರೆಯುಕ್ತ ಪಾನೀಯ’ಗಳ ಅತಿಯಾದ ಬಳಕೆಯಿಂದ ‘ಲಿವರ್ ಕ್ಯಾನ್ಸರ್’ಗೆ ಕಾರಣವಾಗಬಹುದು: ಅಧ್ಯಯನ

ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ: ದಿನೇಶ್ ಗೂಳಿಗೌಡ ಸ್ಪಷ್ಟನೆ

ಕಲಬುರಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಾರ್ & ರೆಸ್ಟೋರೆಂಟ್ : ತಪ್ಪಿದ ಭಾರಿ ಅನಾಹುತ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ: ದಿನೇಶ್ ಗೂಳಿಗೌಡ ಸ್ಪಷ್ಟನೆ
KARNATAKA

ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ: ದಿನೇಶ್ ಗೂಳಿಗೌಡ ಸ್ಪಷ್ಟನೆ

By ವಸಂತ ಬಿ ಈಶ್ವರಗೆರೆ

​ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯನ್ನು ದುರುಪಯೋಗದಿಂದ ತಡೆದು, ಅರ್ಹರಿಗೆ ಮಾತ್ರ ತಲುಪಿಸುವ ನಿಟ್ಟಿನಲ್ಲಿ ಯೋಜನೆ ಪರಿಷ್ಕರಣೆಗೆ ಆಗ್ರಹಿಸಲಾಗಿದೆಯೇ ಹೊರತು, ಯೋಜನೆಯನ್ನು ನಿಲ್ಲಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸ್ಪಷ್ಟಪಡಿಸಿದ್ದಾರೆ.

​ವಿರೋಧ ಪಕ್ಷದ ವರು ಗೃಹಲಕ್ಷ್ಮಿ ಯೋಜನೆ ಕುರಿತು ಇಲ್ಲದ ಅಪಪ್ರಚಾರಗಳನ್ನು ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಅವರು ಜರೆದಿದ್ದಾರೆ.

ರಾಜ್ಯದಲ್ಲಿ ಇದುವರೆಗೆ ಸುಮಾರು 1 ಕೋಟಿ 24 ಲಕ್ಷಕ್ಕೂ ಅಧಿಕ ಮಹಿಳಾ ಯಜಮಾನಿಯರಿಗೆ ಪ್ರತಿ ತಿಂಗಳು ತಲಾ 2,000 ರೂಪಾಯಿಗಳಂತೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪುತ್ತಿದೆ. ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಯೋಜನೆಯ ಫಲಾನುಭವಿಗಳಾಗಿದ್ದ ಸುಮಾರು 1 ಲಕ್ಷದ 95 ಸಾವಿರಕ್ಕೂ ಹೆಚ್ಚು ಕುಟುಂಬದ ಯಜಮಾನಿಯರು ಮರಣ ಹೊಂದಿದ್ದಾರೆ. ಆದಾಗ್ಯೂ, ತಾಂತ್ರಿಕ ಕಾರಣಗಳಿಂದಾಗಿ ಮೃತಪಟ್ಟವರ ಬ್ಯಾಂಕ್ ಖಾತೆಗಳಿಗೂ ಇನ್ನೂ ಹಣ ಸಂದಾಯವಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ರೀತಿಯ ದುರುಪಯೋಗವನ್ನು ತಡೆಯುವ ಕೆಲಸವನ್ನು ಸರಕಾರದಿಂದ ಮಾಡಲಾಗುತ್ತಿದೆ ಎಂದು ಹೇಳಿದರು.

​ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ:

​”ಮೃತಪಟ್ಟವರ ಖಾತೆಗಳಿಗೆ ಸರ್ಕಾರದ ಹಣ ಪಾವತಿಯಾಗುತ್ತಿರುವುದನ್ನು ತಡೆಗಟ್ಟಲು ಮತ್ತು ಯೋಜನೆಯನ್ನು ಸದ್ವಿನಿಯೋಗಪಡಿಸಿಕೊಳ್ಳಲು ಹಿಂದಿನ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ ಅವರಿಗೆ ನಾನು ಈ ಹಿಂದೆ ಲಿಖಿತ ಮನವಿಯೊಂದನ್ನು ಸಲ್ಲಿಸಿ, ಫಲಾನುಭವಿಗಳಿಗೆ ‘ಜೀವಿತ ಪ್ರಮಾಣ ಪತ್ರ’ (Life Certificate) ಕಡ್ಡಾಯಗೊಳಿಸುವಂತೆ ಕೋರಿದ್ದೆ. ಅದೇ ರೀತಿ, ಪ್ರಸ್ತುತ ಮುಖ್ಯಮಂತ್ರಿಗಳಾಗಿರುವ ಡಿ.ಕೆ. ಶಿವಕುಮಾರ್ ಅವರಿಗೂ ಸಹ ಈ ಯೋಜನೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಮೃತಪಟ್ಟವರು ಹಾಗೂ ಅನರ್ಹರನ್ನು ಯೋಜನೆಯಿಂದ ಹೊರಗಿಡುವ ಮೂಲಕ ಗೃಹಲಕ್ಷ್ಮಿ ಯೋಜನೆಯನ್ನು ಸಂಪೂರ್ಣವಾಗಿ ಪರಿಷ್ಕರಣೆ (Auditing/Verification) ಮಾಡಬೇಕೆಂದು ಮನವಿ ಮಾಡಿದ್ದೇನೆ ಎಂದು ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

​ಸರ್ಕಾರದ ಉದ್ದೇಶ ಸ್ಪಷ್ಟವಾಗಿದೆ:

​ಮುಖ್ಯಮಂತ್ರಿಗಳು ಈ ಮನವಿಯನ್ನು ಪುರಸ್ಕರಿಸಿ ಯೋಜನೆಯ ಪರಿಷ್ಕರಣೆಗೆ ಮುಂದಾಗಿದ್ದಾರೆ. ಈ ಪ್ರಕ್ರಿಯೆಯ ಮೂಲ ಉದ್ದೇಶ ಮೃತಪಟ್ಟ ಹಾಗೂ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಿ, ಸರ್ಕಾರದ ಹಣ ದುರುಪಯೋಗವಾಗುವುದನ್ನು ತಪ್ಪಿಸುವುದೇ ಆಗಿದೆ. ​ಯಾವುದೇ ಕಾರಣಕ್ಕೂ ಪ್ರಸ್ತುತ ಸೌಲಭ್ಯ ಪಡೆಯುತ್ತಿರುವ ಯಾವುದೇ ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೆ ಈ ಯೋಜನೆಯಿಂದ ಯಾವುದೇ ರೀತಿಯ ತೊಂದರೆಯಾಗಲಿ ಅಥವಾ ನಷ್ಟವಾಗಲಿ ಸಂಭವಿಸುವುದಿಲ್ಲ. ವಿರೋಧ ಪಕ್ಷದವರು ರಾಜಕೀಯ ಪ್ರೇರಿತ ಅಪಪ್ರಚಾರಗಳನ್ನು ನಂಬಬಾರದು ಎಂದು ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

BIG NEWS: ಮುಂಗಾರು ಆರಂಭವಾದ್ರೂ ಮಂಡ್ಯದಲ್ಲಿಲ್ಲ ಮಳೆ: 81 ಅಡಿಗೆ ಕುಸಿದ KRS ಡ್ಯಾಂ ನೀರಿನ ಮಟ್ಟ

BIG NEWS: ಸರ್ಕಾರಿ ನೌಕರನ ವೈಯಕ್ತಿಕ ಆಸ್ತಿ ವಿವರ ‘RTI’ ಅಡಿ ನೀಡಲಾಗದು: ಹೈಕೋರ್ಟ್ ಮಹತ್ವದ ತೀರ್ಪು

Share. Facebook Twitter LinkedIn WhatsApp Email

Related Posts

ಕಲಬುರಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಾರ್ & ರೆಸ್ಟೋರೆಂಟ್ : ತಪ್ಪಿದ ಭಾರಿ ಅನಾಹುತ!

1 Min Read

BREAKING: ಸಾಗರದಲ್ಲಿ ಅಕ್ರಮ ಜಂಬಿಟ್ಟಿಗೆ ಕ್ವಾರಿ, ಮರಳು ಅಡ್ಡೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ದಾಳಿ: ಲಾರಿಗಳು ಜಪ್ತಿ!

2 Mins Read

BREAKING : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

3 Mins Read
Recent News

Liver cancer: ‘ಸಕ್ಕರೆಯುಕ್ತ ಪಾನೀಯ’ಗಳ ಅತಿಯಾದ ಬಳಕೆಯಿಂದ ‘ಲಿವರ್ ಕ್ಯಾನ್ಸರ್’ಗೆ ಕಾರಣವಾಗಬಹುದು: ಅಧ್ಯಯನ

ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ: ದಿನೇಶ್ ಗೂಳಿಗೌಡ ಸ್ಪಷ್ಟನೆ

ಕಲಬುರಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಾರ್ & ರೆಸ್ಟೋರೆಂಟ್ : ತಪ್ಪಿದ ಭಾರಿ ಅನಾಹುತ!

BREAKING: ಸಾಗರದಲ್ಲಿ ಅಕ್ರಮ ಜಂಬಿಟ್ಟಿಗೆ ಕ್ವಾರಿ, ಮರಳು ಅಡ್ಡೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ದಾಳಿ: ಲಾರಿಗಳು ಜಪ್ತಿ!

State News
KARNATAKA

ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ: ದಿನೇಶ್ ಗೂಳಿಗೌಡ ಸ್ಪಷ್ಟನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

​ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯನ್ನು ದುರುಪಯೋಗದಿಂದ ತಡೆದು, ಅರ್ಹರಿಗೆ ಮಾತ್ರ ತಲುಪಿಸುವ ನಿಟ್ಟಿನಲ್ಲಿ ಯೋಜನೆ ಪರಿಷ್ಕರಣೆಗೆ ಆಗ್ರಹಿಸಲಾಗಿದೆಯೇ…

ಕಲಬುರಗಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಾರ್ & ರೆಸ್ಟೋರೆಂಟ್ : ತಪ್ಪಿದ ಭಾರಿ ಅನಾಹುತ!

BREAKING: ಸಾಗರದಲ್ಲಿ ಅಕ್ರಮ ಜಂಬಿಟ್ಟಿಗೆ ಕ್ವಾರಿ, ಮರಳು ಅಡ್ಡೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ದಾಳಿ: ಲಾರಿಗಳು ಜಪ್ತಿ!

BREAKING : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.