ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಮುಕ್ತ ಕಚೇರಿ ಎಂದು ಫಲಕ ಅಳವಡಿಸುವಂತೆ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇ ವನೆ ನಿಷೇಧಿಸಿದ್ದು, ಸೇವನೆ ಮಾಡುತ್ತಿರುವುದು ಕಂಡು ಬಂದಲ್ಲಿ ದಂಡ ವಿಧಿಸುವಂತೆ ಸೂಚನೆ ನೀಡಿದರಲ್ಲದೆ, ಅನಿರೀಕ್ಷಿತ ದಾಳಿ ನಡೆಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ತಂಬಾಕು ಉತ್ಪನ್ನಗಳನ್ನು ಬಳಸಬಾರದು ಅವುಗಳಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮ ಕುರಿತು ಶಾಲಾ ಮಕ್ಕಳಿಗೆ ಮಾಹಿತಿ ನೀಡುವುದರ ಮೂಲಕ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರ ಲ್ಲದೆ, ತಂಬಾಕು ಮುಕ್ತ ಶಾಲೆ, ಹಾಸ್ಟೆಲ್ ಎಂದು ಫಲಕ ಅಳವಡಿಸುವಂತೆ ನಿರ್ದೇಶನ ನೀಡಿದರು. ಸದರಿ ಆವರಣಗಳಲ್ಲಿ ಗುಟ್ಕಾ ಕವರ್ ಗಳು ಸಿಕ್ಕರೆ ದಂಡ ವಿಧಿಸಿ ಶಾಲಾ ಮುಖ್ಯಸ್ಥರೆ ಹೊಣೆಗಾರಾರು ಎಂದು ತಿಳಿಸಿದರು.
ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳನ್ನು ತಂಬಾಕು ಮುಕ್ತ ನಿಲ್ದಾಣ ಎಂದು ಘೋಷಣೆ ಮಾಡಲು ಕ್ರಮವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.








