ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ರಂಜನ್ ಕುಮಾರ್ ಎನ್ನುವ ಬೈಕ್ ಸವಾರ ಸಾವನಪ್ಪಿದ್ದು, ಮತ್ತೊರ್ವನಿಗೆ ಗಾಯಗಳಾಗಿವೆ. ಸದ್ಯ ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದಾನೆ. ಬೆಂಗಳೂರಿಂದ ತುಮಕೂರಿಗೆ ಕೆಎಸ್ಆರ್ಟಿಸಿ ಬಸ್ ತೆರಳುತ್ತಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








