ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಲಾರಿ ಮಧ್ಯ ಭೀಕರ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಕೆಎಸ್ಆರ್ಟಿಸಿ ಬಸ್ ನಲ್ಲಿ ಇದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೀಳಗಿ ತಾಲೂಕಿನ ಸುನಗ ಕ್ರಾಸ್ ಬಳಿ ನಡೆದಿದೆ.
ಕುಡಿದ ಮತ್ತಿನಲ್ಲಿ ಕೆಎಸ್ಆರ್ಟಿಸಿ ಬಸ್ಗೆ ಲಾರಿ ಚಾಲಕ ಡಿಕ್ಕಿ ಹೊಡೆದಿದ್ದಾನೆ ಘಟನೆಯಲ್ಲಿ ವಾಣಿ ದೇಸಾಯಿ (26) ಹಾಗೂ ಶಿವಕುಮಾರ್ ಕಡ್ಲಿವಾಡ (25) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








