ಬೆಂಗಳೂರು: ರಾಜ್ಯದ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಭ್ರಷ್ಟಾಚಾರಕ್ಕೆ ಸಂಪೂರ್ಣ ಮುಕ್ತಿ ಹಾಡಲು ಮತ್ತು ಪಾರದರ್ಶಕ ಆಡಳಿತವನ್ನು ತರಲು ಮುಖ್ಯಮಂತ್ರಿಗಳು ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದ್ದಾರೆ. ಇನ್ನು ಮುಂದೆ ಯಾವುದೇ ಸರ್ಕಾರಿ ಕಚೇರಿಯಲ್ಲಿ ಅಧಿಕಾರಿಗಳು ಅಥವಾ ಸಿಬ್ಬಂದಿ ಸಾರ್ವಜನಿಕರಿಂದ ಕೆಲಸ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟರೆ, ಅಂತಹವರ ವಿರುದ್ಧ ತಕ್ಷಣವೇ ಸಾರ್ವಜನಿಕರು ದೂರು ದಾಖಲಿಸಲು ಅನುಕೂಲವಾಗುವಂತೆ ಕಚೇರಿಗಳ ಪ್ರಮುಖ ಸ್ಥಳಗಳಲ್ಲಿ ಸ್ಪಷ್ಟವಾಗಿ ಕಾಣಿಸುವ ದೊಡ್ಡ ಫೋನ್ ನಂಬರ್ (ಸಹಾಯವಾಣಿ ಸಂಖ್ಯೆ) ಪ್ರದರ್ಶಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಸಾರ್ವಜನಿಕರಿಗೆ ಅನಗತ್ಯ ತೊಂದರೆ ಕೊಡುವ ಹಾಗೂ ಪೀಡಿಸುವ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆ ಹಾಗೂ ವಿವಿಧ ಇಲಾಖೆಗಳ ಸುಧಾರಣೆ ಕುರಿತ ಸುದೀರ್ಘ ಸಭೆಯಲ್ಲಿ ಭ್ರಷ್ಟಾಚಾರ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕಠಿಣ ಕ್ರಮಗಳು ಅನಿವಾರ್ಯ ಎಂದು ಅವರು ಎಚ್ಚರಿಸಿದ್ದಾರೆ.
• ಟೀಮ್ ಕರ್ನಾಟಕ: ನಾವೆಲ್ಲರೂ ಒಂದೇ ತಂಡ, ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ. ಸಮಸ್ಯೆಯೊಂದಿಗೆ ಬಂದ ಜನರಿಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ಅಧಿಕಾರಿಗಳ ವರ್ಗದಲ್ಲಿ ನಾವು ಸಾಮಾಜಿಕ ನ್ಯಾಯವನ್ನು ಪಾಲಿಸುತ್ತೇವೆ.
• 0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು. ನಾವು ಭ್ರಷ್ಟಾಚಾರ ಮುಕ್ತ ಕರ್ನಾಟಕ ನಿರ್ಮಿಸೋಣ. ಯಾರಾದರೂ ಕಾನೂನು ವಿರುದ್ಧ ಕೆಲಸ ಮಾಡಲು ಒತ್ತಡ ಹಾಕಲು ಬಂದರೆ ಕೂಡಲೇ ನನಗೆ ಮಾಹಿತಿ ನೀಡಿ.
• ರೌಡಿಸಂ & ಡ್ರಗ್ಸ್ ಮುಕ್ತ: ಗಾಂಜಾ, ಡ್ರಗ್ಸ್ ಹಾಗೂ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಪ್ರತಿ ಪೊಲೀಸ್ ಠಾಣೆಯಲ್ಲಿ ಐದು ಪೊಲೀಸರ ತಂಡವನ್ನು ರಚಿಸಿ ರೌಡಿಸಂ ನಿಗ್ರಹಕ್ಕೆ ಸೂಚಿಸಿದ್ದೇನೆ. ನಕಲಿ ಫೈನಾನ್ಸ್ಗಳ ಹಾವಳಿಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು.
• ಶಿಕ್ಷಣಕ್ಕೆ ಆದ್ಯತೆ: ವಿದ್ಯಾರ್ಥಿಗಳ ಸಮವಸ್ತ್ರ, ಶೂ, ಪಠ್ಯ ಪುಸ್ತಕ ಮುಂದಿನ ಒಂದು ತಿಂಗಳಲ್ಲಿ ವಿತರಣೆಯಾಗಬೇಕು. ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ನೂತನ ಸಿಎಸ್ಆರ್ (CSR) ನೀತಿ ತರುತ್ತಿದ್ದೇವೆ.
• ಮಳೆ ಕೊರತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ: ಬಿತ್ತನೆ ಕಾರ್ಯ ಶುರುವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಲಭ್ಯತೆಗೆ ಕ್ರಮವಹಿಸಬೇಕು. ಎಲ್ ನಿನೋ ಪ್ರಭಾವ ಬೀರುವ ಸಾಧ್ಯತೆ ಇದ್ದು, ಅಲ್ಪಾವಧಿ ಮಳೆ ಮುನ್ಸೂಚನೆ ಇದೆ. 30% ಮಳೆ ಕೊರತೆ ಇದ್ದು, ಮೇವಿನ ಪೂರೈಕೆಗೆ ಕ್ರಮ ಕೈಗೊಳ್ಳಬೇಕು.
• ಗ್ಯಾರಂಟಿ ಪರಿಷ್ಕರಣೆ: ನಾವು ಯೋಜನೆಯನ್ನು ನಿಲ್ಲಿಸುವುದಿಲ್ಲ, ಯಾರನ್ನೂ ತೆಗೆದುಹಾಕುವ ಉದ್ದೇಶವಿಲ್ಲ. ಸರಿಯಾದ ಮಾಹಿತಿ ಇರುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆಗೆ ಪುನಃ ಅರ್ಜಿ ಪಡೆಯಲಾಗುವುದು.
• ಮತದಾನದ ಹಕ್ಕು ರಕ್ಷಣೆ: ಮತದಾನದ ಹಕ್ಕಿಲ್ಲವಾದರೆ ಸರ್ಕಾರದ ಐದು ಗ್ಯಾರಂಟಿಗಳು, ಪಿಂಚಣಿ ಸಿಗುವುದಿಲ್ಲ. ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಬಿಎಲ್ಒಗಳು ನೀಡುವ ಎನ್ಯುಮರೇಷನ್ ಅರ್ಜಿಯನ್ನು ಸಲ್ಲಿಸಿ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು. ವಾಸ ಪ್ರಮಾಣ ಪತ್ರ ಇಲ್ಲದವರಿಗೆ ಅದನ್ನು ಶೀಘ್ರವೇ ನೀಡಲು ಸೂಚಿಸಲಾಗಿದೆ.
• ಉದ್ಯೋಗ ವಿನಿಮಯ ಮತ್ತು ಭಾರತ್ ಜೋಡೋ ಯುವಕರ ಸಂಘ: ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸಲು ಖಾಸಗಿ ಉದ್ಯೋಗ ವಿನಿಮಯದ ಮೂಲಕ ಯುವ ಯುಗ ಆರಂಭಿಸುತ್ತಿದ್ದೇವೆ. ಯುವಕರ ಪ್ರತಿಭೆಗಳ ಅನಾವರಣಕ್ಕೆ ರಾಜಕೀಯೇತರ ‘ಭಾರತ್ ಜೋಡೋ ಯುವಕರ ಸಂಘ’ ರಚಿಸಿ, ವಾರ್ಷಿಕ ₹10 ಲಕ್ಷ ಅನುದಾನ ನೀಡಲಾಗುವುದು. ಇದು ನನ್ನ ಕನಸಿನ ಯೋಜನೆಯಾಗಿದೆ.
• ವರ್ತುಲ ರಸ್ತೆ ಯೋಜನೆ: ಸುಗಮ ಸಂಚಾರಕ್ಕಾಗಿ ಎಲ್ಲಾ ತಾಲ್ಲೂಕುಗಳಲ್ಲಿ ವರ್ತುಲ ರಸ್ತೆ ನಿರ್ಮಿಸಲು, ಗ್ರಿಡ್ ರೂಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಭ್ರಷ್ಟಾಚಾರ ಮುಕ್ತ ಹಾಗೂ ಜನಪರ ಆಡಳಿತ ನಮ್ಮ ಸರ್ಕಾರದ ಸಂಕಲ್ಪ
ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀಡಿದ ಪ್ರಮುಖ ನಿರ್ದೇಶನಗಳು ಹಾಗೂ ಈ ನಿಮಿತ್ತ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಹಂಚಿಕೊಂಡ ಪ್ರಮುಖ ವಿಚಾರಗಳು:
• ಟೀಮ್ ಕರ್ನಾಟಕ: ನಾವೆಲ್ಲರೂ… pic.twitter.com/ROgCtbO99V
— DK Shivakumar (@DKShivakumar) June 13, 2026








