ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌ನ 14 ಜನ ಶಾಸಕರಿಗೆ ಕರೆ ಮಾಡಿ ಸೆಳೆಯುವ ಪ್ರಯತ್ನ ಮಾಡಿದ್ದಾರೆ ಎಂದು ಶಾಸಕ ಎಚ್.ಸಿ.ಬಾಕೃಷ್ಣ ಆರೋಪಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ಸಿಗೆ ಮತಗಳ ಕೊರತೆ ಇಲ್ಲ. ಇಬ್ಬರು ಬಿಜೆಪಿ ಉಚ್ಚಾಟಿತ ಶಾಸಕರಿದ್ದಾರೆ. ಎರಡನೇ ಪ್ರಾಶಸ್ತ್ರ ಮತಗಳಿಂದ ಕಾಂಗ್ರೆಸ್ ಐದನೇ ಅಭ್ಯರ್ಥಿಯೂ ಗೆಲ್ಲಲಿದ್ದಾರೆ. ಇದೆಲ್ಲ ಗೊತ್ತಿದ್ದೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಡಿ.ಕೆ.ಶಿವಕುಮಾರ್ ಕಾಟ ಕೊಡಬೇಕೆಂದು ಕುಮಾರಸ್ವಾಮಿ ಅಭ್ಯರ್ಥಿ ಹಾಕಿದ್ದಾರೆ. ಈ ಹಿಂದೆ ಜೆಡಿಎಸ್‌ನಲ್ಲಿದ್ದ ಹಾಲಿ ಶಾಸಕರು ಮತ್ತು ಪಕ್ಷೇತರರು ಸೇರಿ 14 ಶಾಸಕರಿಗೆ ಕರೆ ಮಾಡಿ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರ ಎಂದರು.








