ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು GBA ಕಸದ ವಾಹನ ಹರಿದು ಬೈಕ್ ಸವಾರ ಸಾವನಪ್ಪಿದ್ದಾನೆ , ಬೆಂಗಳೂರಿನ ಶಿರಸಿ ಸರ್ಕಲ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಬೈಕ್ ನಿಂದ ಆಯತಪ್ಪಿ 35 ವರ್ಷದ ವ್ಯಕ್ತಿ ರಸ್ತೆ ಮೇಲೆ ಬಿದ್ದಿದ್ದಾನೆ. ಈ ವೇಳೆ ಜಿಬಿಎ ಕಸದ ಲಾರಿ ಆತನ ಮೇಲೆ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಚಾಮರಾಜಪೇಟೆ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತಮಿಳುನಾಡು ನೋಂದಣಿ ಸಂಖ್ಯೆಯ ಬೈಕ್ ಚಲಾಯಿಸುತ್ತಿದ್ದ ಸವಾರ ಎಂದು ತಿಳಿದು ಬಂದಿದ್ದು, ಆದರೆ ಮೃತ ಬೈಕ್ ಸವಾರ ಯಾರು ಎಂದು ಪತ್ತೆಯಾಗಿಲ್ಲ. ಸದ್ಯ ಪೊಲೀಸರು ಲಾರಿಯನ್ನು ವಶಕ್ಕೆ ಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.








