ಚನ್ನಗಿರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ತೀವ್ರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿರುವ ಭೀಕರ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಲ್ಲಿ ನಡೆದಿದೆ.
ಚನ್ನಗಿರಿ ತಾಲ್ಲೂಕಿನ ಶೃಂಗಾರಬಾಗು ತಾಂಡಾದ ನಿವಾಸಿ ರೆಕ್ಯಾನಾಯ್ಕ್ (65) ಸಾವುನ್ನಪ್ಪಿದ ದುರ್ದೈವಿ ವೃದ್ಧರಾಗಿದ್ದಾರೆ.
ಘಟನೆಯ ವಿವರ:
ಶೃಂಗಾರಬಾಗು ತಾಂಡಾದಲ್ಲಿದ್ದ ರೆಕ್ಯಾನಾಯ್ಕ್ ಅವರ ಗುಡಿಸಲಿನಲ್ಲಿ ಹಠಾತ್ತನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಪರಿಣಾಮವಾಗಿ ಇಡೀ ಗುಡಿಸಲಿಗೆ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ಈ ದುರಂತ ಸಂಭವಿಸಿದ ಸಮಯದಲ್ಲಿ 65 ವರ್ಷದ ವೃದ್ಧ ರೆಕ್ಯಾನಾಯ್ಕ್ ಅವರು ಗುಡಿಸಲಿನ ಒಳಗೇ ಇದ್ದಿದ್ದರಿಂದ, ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದವು.
ಆಸ್ಪತ್ರೆಯಲ್ಲಿ ಕೊನೆಯುಸಿರು:
ಘಟನೆ ತಿಳಿಯುತ್ತಿದ್ದಂತೆ ತಕ್ಷಣವೇ ಸ್ಥಳೀಯರು ಹಾಗೂ ಕುಟುಂಬಸ್ಥರು ಗಾಯಾಳು ವೃದ್ಧನನ್ನು ರಕ್ಷಿಸಿ, ಚಿಕಿತ್ಸೆಗಾಗಿ ಹತ್ತಿರದ ಬಸವಪಟ್ಟಣ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಗಾಯದ ಪ್ರಮಾಣ ತೀವ್ರವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ರೆಕ್ಯಾನಾಯ್ಕ್ ಅವರು ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸದ್ಯ ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. ವೃದ್ಧನ ಸಾವಿನಿಂದಾಗಿ ತಾಂಡಾದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
BREAKING: ಜೂನ್.21ರಂದು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ!








