Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಹೊರ್ಮುಜ್ ಜಲಸಂಧಿ ಮೂಲಕ ಸಾಗಿದ ಮೊದಲ ಭಾರತೀಯ ‘ಎಲ್‌ಎನ್‌ಜಿ’ ನೌಕೆ!

ಸಾಗರದಲ್ಲಿ ಮಳೆಗಾಲದ ಅವಘಡ ಎದುರಿಸಲು ಸನ್ನದ್ಧರಾಗಿ: ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

​ಜೈಪುರದಲ್ಲಿ ಹೈಡ್ರಾಮಾ: ಪ್ರತಿಭಟನಾ ರ‍್ಯಾಲಿ ವೇಳೆ ‘ಸಿಜೆಪಿ’ ಸಂಸ್ಥಾಪಕ ಅಭಿಜೀತ್ ದಿಪ್ಕೆಗೆ ಕಪಾಳಮೋಕ್ಷ! ವಿಡಿಯೋ ವೈರಲ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದಲ್ಲಿ ಮಳೆಗಾಲದ ಅವಘಡ ಎದುರಿಸಲು ಸನ್ನದ್ಧರಾಗಿ: ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ
KARNATAKA

ಸಾಗರದಲ್ಲಿ ಮಳೆಗಾಲದ ಅವಘಡ ಎದುರಿಸಲು ಸನ್ನದ್ಧರಾಗಿ: ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಮಳೆಗಾಲದಲ್ಲಿ ಸಂಭವಿಸಬಹುದಾದ ಯಾವುದೇ ರೀತಿಯ ಅವಘಡಗಳನ್ನು ಎದುರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಸನ್ನದ್ಧರಾಗಿರಬೇಕು. ಈ ತುರ್ತು ಪರಿಸ್ಥಿತಿಯಲ್ಲಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ರಜೆ ಹಾಕದೆ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಸಾಗರ  ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಳೆಗಾಲದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಕರೆಯಲಾಗಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಜಂಟಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮನೆ ಬಿದ್ದರೆ ಚೌಕಾಸಿ ಮಾಡದೆ ಪರಿಹಾರ ನೀಡಿ

ಮಳೆ ಗಾಳಿಗೆ ಮನೆ ಕುಸಿದು ಬಿದ್ದರೆ ತಕ್ಷಣವೇ ತಹಶೀಲ್ದಾರ್, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಸೂಚಿಸಿದ ಶಾಸಕರು, “ಮನೆ ಕಳೆದುಕೊಂಡ ಬಡವರ ವಿಷಯದಲ್ಲಿ ಯಾವುದೇ ರೀತಿಯ ಚೌಕಾಸಿ ಮಾಡದೆ, ಅವರಿಗೆ ನಿಯಮಾನುಸಾರ ಸಿಗಬೇಕಾದ ಗರಿಷ್ಠ ಪರಿಹಾರವನ್ನು ತಲುಪಿಸಲು ಅಧಿಕಾರಿಗಳು ಮಾನವೀಯತೆಯಿಂದ ಸಹಕರಿಸಬೇಕು” ಎಂದರು.

ಮಳೆಮಾಪನ ಕೇಂದ್ರಗಳ ಸುಸ್ಥಿತಿಗೆ ಆದೇಶ; ವಿಮೆ ತಾರತಮ್ಯಕ್ಕೆ ಬ್ರೇಕ್

“ತಾಲ್ಲೂಕಿನಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಕೊರತೆ ಇಲ್ಲ. ಕೃಷಿ ಇಲಾಖೆಯಲ್ಲಿ ಅಗತ್ಯ ದಾಸ್ತಾನು ಮಾಡಿಕೊಳ್ಳಲಾಗಿದೆ. ಆದರೆ, ಮಳೆಮಾಪನ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ತೋಟಗಾರಿಕಾ ಇಲಾಖೆ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು. ಕಳೆದ ವರ್ಷ ಸೊರಬ, ಶಿಕಾರಿಪುರ ತಾಲ್ಲೂಕಿನ ರೈತರಿಗೆ ನ್ಯಾಯಸಮ್ಮತ ಬೆಳೆ ವಿಮೆ ಪರಿಹಾರ ಬಂದಿದೆ. ಆದರೆ ಸಾಗರ ತಾಲ್ಲೂಕಿನ ರೈತರಿಗೆ ತೀರ ಕಡಿಮೆ ಪರಿಹಾರ ಬಂದಿದ್ದು, ಈ ಬಾರಿ ಅಂತಹ ತಾರತಮ್ಯ ನಡೆಯಬಾರದು. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಒಂದು ವೇಳೆ ತಾಂತ್ರಿಕ ದೋಷದಿಂದಾಗಿ ಈ ಬಾರಿಯೂ ಪರಿಹಾರ ಕಡಿಮೆ ಬಂದರೆ ಅದಕ್ಕೆ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುತ್ತದೆ” ಎಂದು ಎಚ್ಚರಿಸಿದರು.

ದುಸ್ಥಿತಿಯಲ್ಲಿರುವ ಶಾಲೆಗಳ ದುರಸ್ತಿ ಹಾಗೂ ಜೋಗ ಜಲಪಾತದ ಪ್ರವಾಸೋದ್ಯಮಕ್ಕೆ ಒತ್ತು

ಮಳೆಗಾಲದಲ್ಲಿ ಶಾಲಾ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಿದ ಅವರು, ತೀರಾ ದುಸ್ಥಿತಿಯಲ್ಲಿರುವ ಶಾಲೆಗಳ ಪಟ್ಟಿ ಮಾಡಿ ತಕ್ಷಣವೇ ರಿಪೇರಿ ಕಾಮಗಾರಿ ಕೈಗೊಳ್ಳಲು ತಿಳಿಸಿದರು. ಇನ್ನು ಶಿಕ್ಷಕರ ಕೊರತೆ ನೀಗಿಸಲು ಸರ್ಕಾರ ಈಗಾಗಲೇ ಅಗತ್ಯ ಕ್ರಮ ಕೈಗೊಂಡಿದೆ ಎಂದರು.

ಜೋಗ ಜಲಪಾತದ ಕುರಿತು ಮಾತನಾಡುತ್ತಾ, “ಜೋಗ ಅಭಿವೃದ್ಧಿ ಕಾಮಗಾರಿ 90 ಕೋಟಿ ರೂ. ವೆಚ್ಚದಲ್ಲಿ ಭರದಿಂದ ಸಾಗುತ್ತಿದ್ದು, ಇನ್ನೂ 90 ಕೋಟಿ ರೂ. ಬಿಡುಗಡೆಯಾಗಬೇಕಿದೆ. ಮಳೆಗಾಲದಲ್ಲಿ ಜಲಪಾತದ ವೈಭವ ವೀಕ್ಷಿಸಲು ಬರುವ ದೇಶ-ವಿದೇಶಿ ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ರಕ್ಷಣೆ ಹಾಗೂ ಸೌಕರ್ಯ ಒದಗಿಸಲು ಗಮನ ಹರಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಅರಣ್ಯ ಇಲಾಖೆ ಕಿರುಕುಳಕ್ಕೆ ಎಚ್ಚರಿಕೆ ಹಾಗೂ ನಗರ ಸ್ವಚ್ಛತೆ

“ಅರಣ್ಯ ಇಲಾಖೆಯ ಅಧಿಕಾರಿಗಳು ಮಲೆನಾಡಿನ ರೈತರಿಗೆ ಅನಗತ್ಯವಾಗಿ ಕಿರುಕುಳ ನೀಡಬಾರದು. ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ಕೈಹಾಕಿದರೆ ಸರ್ಕಾರದಿಂದ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ” ಎಂದು ಶಾಸಕರು ಎಚ್ಚರಿಕೆ ನೀಡಿದರು. ಮಳೆಗಾಲದ ಅವಧಿಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ, ನಗರಸಭೆಯು ಸ್ವಚ್ಛತೆಗೆ ಆದ್ಯತೆ ನೀಡಬೇಕು. ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಅಪಾಯಕಾರಿ ಗಿಡಗಂಟಿಗಳನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ಸೂಚಿಸಿದರು. ಇದೇ ವೇಳೆ ಸೊರಬ ರಸ್ತೆ ಅಗಲೀಕರಣ ಕಾರ್ಯ ಅಂತಿಮ ಹಂತಕ್ಕೆ ಬಂದಿದ್ದು, ಶೀಘ್ರದಲ್ಲೇ ತೆರವು ಕಾರ್ಯಾಚರಣೆ ನಡೆಸಲಾಗುವುದು ಎಂದು ಪ್ರಕಟಿಸಿದರು.

ಈ ಸಭೆಯಲ್ಲಿ ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ತಹಶೀಲ್ದಾರ್ ಡಾ. ಪ್ರತಿಭಾ ಆರ್., ಪೊಲೀಸ್ ಉಪಾಧೀಕ್ಷಕ ಡಾ. ಬೆನಕ ಪ್ರಸಾದ್, ಇಓ ಮೌನೇಶ್, ನಗರಸಭೆ ಪೌರಾಯುಕ್ತ ನಾಗಪ್ಪ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದಂತ ಶಿವಪ್ರಕಾಶ್, ಬಿಇಓ ಸದಾನಂದ ಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BREAKING: ‘ದರ್ಶನ್ ಆಂಡ್ ಗ್ಯಾಂಗ್‌’ಗೆ ಬಿಗಿಯಾದ ಕಾನೂನು ಸಂಕೋಲೆ: ಪಾಟೀಸವಾಲು ಮುಂದೂಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕಾರ

ರಾಜ್ಯ ಸಚಿವ ಸಂಪುಟದಲ್ಲಿ ನನಗೆ ಶೇ.100ರಷ್ಟು ಸಚಿವ ಸ್ಥಾನ ನೀಡುವ ಭರವಸೆ ಇದೆ: ಶಾಸಕ ಗೋಪಾಲಕೃಷ್ಣ ಬೇಳೂರು

Share. Facebook Twitter LinkedIn WhatsApp Email

Related Posts

BREAKING: ‘ದರ್ಶನ್ ಆಂಡ್ ಗ್ಯಾಂಗ್‌’ಗೆ ಬಿಗಿಯಾದ ಕಾನೂನು ಸಂಕೋಲೆ: ಪಾಟೀಸವಾಲು ಮುಂದೂಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕಾರ

1 Min Read

ರಾಜ್ಯ ಸಚಿವ ಸಂಪುಟದಲ್ಲಿ ನನಗೆ ಶೇ.100ರಷ್ಟು ಸಚಿವ ಸ್ಥಾನ ನೀಡುವ ಭರವಸೆ ಇದೆ: ಶಾಸಕ ಗೋಪಾಲಕೃಷ್ಣ ಬೇಳೂರು

2 Mins Read

ಕೆಪಿಟಿಸಿಎಲ್ ನಿಂದ ಪ್ರಾಯೋಗಿಕವಾಗಿ ಬೆಂಗಳೂರು ಕಾರಿಡಾರ್‌ನಲ್ಲಿ ಹೊಸ ತಂತ್ರಜ್ಞಾನದ ಅಳವಡಿಕೆ

3 Mins Read
Recent News

​ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಹೊರ್ಮುಜ್ ಜಲಸಂಧಿ ಮೂಲಕ ಸಾಗಿದ ಮೊದಲ ಭಾರತೀಯ ‘ಎಲ್‌ಎನ್‌ಜಿ’ ನೌಕೆ!

ಸಾಗರದಲ್ಲಿ ಮಳೆಗಾಲದ ಅವಘಡ ಎದುರಿಸಲು ಸನ್ನದ್ಧರಾಗಿ: ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

​ಜೈಪುರದಲ್ಲಿ ಹೈಡ್ರಾಮಾ: ಪ್ರತಿಭಟನಾ ರ‍್ಯಾಲಿ ವೇಳೆ ‘ಸಿಜೆಪಿ’ ಸಂಸ್ಥಾಪಕ ಅಭಿಜೀತ್ ದಿಪ್ಕೆಗೆ ಕಪಾಳಮೋಕ್ಷ! ವಿಡಿಯೋ ವೈರಲ್

BREAKING: ‘ದರ್ಶನ್ ಆಂಡ್ ಗ್ಯಾಂಗ್‌’ಗೆ ಬಿಗಿಯಾದ ಕಾನೂನು ಸಂಕೋಲೆ: ಪಾಟೀಸವಾಲು ಮುಂದೂಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕಾರ

State News
KARNATAKA

ಸಾಗರದಲ್ಲಿ ಮಳೆಗಾಲದ ಅವಘಡ ಎದುರಿಸಲು ಸನ್ನದ್ಧರಾಗಿ: ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಮಳೆಗಾಲದಲ್ಲಿ ಸಂಭವಿಸಬಹುದಾದ ಯಾವುದೇ ರೀತಿಯ ಅವಘಡಗಳನ್ನು ಎದುರಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಸನ್ನದ್ಧರಾಗಿರಬೇಕು. ಈ ತುರ್ತು ಪರಿಸ್ಥಿತಿಯಲ್ಲಿ ಅಧಿಕಾರಿಗಳು…

BREAKING: ‘ದರ್ಶನ್ ಆಂಡ್ ಗ್ಯಾಂಗ್‌’ಗೆ ಬಿಗಿಯಾದ ಕಾನೂನು ಸಂಕೋಲೆ: ಪಾಟೀಸವಾಲು ಮುಂದೂಡುವಂತೆ ಸಲ್ಲಿಸಿದ್ದ ಮನವಿ ತಿರಸ್ಕಾರ

ರಾಜ್ಯ ಸಚಿವ ಸಂಪುಟದಲ್ಲಿ ನನಗೆ ಶೇ.100ರಷ್ಟು ಸಚಿವ ಸ್ಥಾನ ನೀಡುವ ಭರವಸೆ ಇದೆ: ಶಾಸಕ ಗೋಪಾಲಕೃಷ್ಣ ಬೇಳೂರು

ಕೆಪಿಟಿಸಿಎಲ್ ನಿಂದ ಪ್ರಾಯೋಗಿಕವಾಗಿ ಬೆಂಗಳೂರು ಕಾರಿಡಾರ್‌ನಲ್ಲಿ ಹೊಸ ತಂತ್ರಜ್ಞಾನದ ಅಳವಡಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.