Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫಿಫಾ ವಿಶ್ವಕಪ್ 2026: ಸೌದಿ ಅರೇಬಿಯಾ ವಿರುದ್ಧದ ಆರಂಭಿಕ ಪಂದ್ಯದಲ್ಲಿ 1-1 ಡ್ರಾಗೆ ತೃಪ್ತಿಪಟ್ಟ ಉರುಗ್ವೆ!

ʻಶಕ್ತಿʼ ಯೋಜನೆಗೆ ಬಿಗ್ ಅಪ್ ಡೇಟ್: ರಾಜ್ಯದ 2 ಕೋಟಿ ಮಹಿಳೆಯರಿಗೆ ಉಚಿತ ಸ್ಮಾರ್ಟ್ ಕಾರ್ಡ್!

JOB ALERT: ಭಾರತೀಯ ರೈಲ್ವೇ ಇಲಾಖೆಯಲ್ಲಿ 6,565 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ |RRB Recruitment 2026

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻಶಕ್ತಿʼ ಯೋಜನೆಗೆ ಬಿಗ್ ಅಪ್ ಡೇಟ್: ರಾಜ್ಯದ 2 ಕೋಟಿ ಮಹಿಳೆಯರಿಗೆ ಉಚಿತ ಸ್ಮಾರ್ಟ್ ಕಾರ್ಡ್!
KARNATAKA

ʻಶಕ್ತಿʼ ಯೋಜನೆಗೆ ಬಿಗ್ ಅಪ್ ಡೇಟ್: ರಾಜ್ಯದ 2 ಕೋಟಿ ಮಹಿಳೆಯರಿಗೆ ಉಚಿತ ಸ್ಮಾರ್ಟ್ ಕಾರ್ಡ್!

By kannadanewsnow57

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ʻಶಕ್ತಿʼ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆ ಬಗ್ಗೆ ಅಂತಿಮ ರೂಪುರೇಶೆ ಸಿದ್ಧಪಡಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸುಮಾರು 2 ಕೋಟಿಗೂ ಅಧಿಕ ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಿಸುವ ಸಾಧ್ಯತೆಗಳಿವೆ. ಈ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ವಿಶೇಷ ಉದ್ದೇಶಿತ ವಾಹನ (SPV)ಯನ್ನು ರಚನೆ ಮಾಡಿ, ಇದರಡಿಯೇ ವಿತರಣಾ ಪ್ರಕ್ರಿಯೆ ನಡೆಸಲಾಗುತ್ತದೆ ಎಂದರು.

ಇದೇವೇಳೆ, ಸ್ಮಾರ್ಟ್ ಕಾರ್ಡ್ ನ ರೂಪುರೇಶೆಯನ್ನು ಅಂತಿಮಗೊಳಿಸಲು ವಹಿವಾಟು ಸಲಹೆಗಾರರ ಸಮಿತಿಯನ್ನು ನೇಮಕ ಮಾಡಲಾಗಿದೆ. ಈ ಸಮಿತಿಯು ಸ್ಮಾರ್ಟ್ ಕಾರ್ಡ್ ಸ್ವರೂಪ, ತಾಂತ್ರಿಕ ನೆರವು, ಟೆಂಡರ್ ಪ್ರಕ್ರಿಯೆ ಮತ್ತು ವಿತರಣೆ ಪ್ರಕ್ರಿಯೆಯನ್ನು ಹೇಗೆ ನಡೆಸಬೇಕೆಂಬುದರ ಬಗ್ಗೆ ಸಾರಿಗೆ ನಿಗಮಗಳಿಗೆ ಸಲಹೆ, ಮಾರ್ಗದರ್ಶನ ನೀಡಲಿದೆ ಎಂದು ತಿಳಿಸಿದರು.

ಪಿಪಿಪಿ ಮಾದರಿಯಲ್ಲಿ ಸ್ಮಾರ್ಟ್ ಕಾರ್ಡ್

ಸಮಿತಿಯು ಈ ತಿಂಗಳಾಂತ್ಯದಲ್ಲಿ ವರದಿ ನೀಡಲಿದ್ದು, ಇದರ ಆಧಾರದಲ್ಲಿ ಸ್ಮಾರ್ಟ್ ಕಾರ್ಡ್ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಕೋಟ್ಯಂತರ ಸ್ಮಾರ್ಟ್ ಕಾರ್ಡ್ ವಿತರಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ಟೆಂಡರ್ ಕರೆಯಲಾಗುತ್ತದೆ.

ಮಹಿಳೆಯರಿಗೆ ಉಚಿತವಾಗಿ ಸ್ಮಾರ್ಟ್ ಕಾರ್ಡ್ ದೊರೆಯಲಿದೆ. ಪುರುಷರು ಪಾವತಿ ಆಧಾರದಲ್ಲಿ ಸ್ಮಾರ್ಟ್ ಕಾರ್ಡ್ ಖರೀದಿಸಬೇಕಾಗುತ್ತದೆ. ಹೀಗೆ ಮಹಿಳಾ ಮತ್ತು ಪುರುಷ ಪ್ರಯಾಣಿಕರೆಲ್ಲರನ್ನು ಒಟ್ಟುಗೂಡಿಸಿದರೆ ಸುಮಾರು 2.5 ಕೋಟಿಯಿಂದ 3 ಕೋಟಿ ಕಾರ್ಡ್ ಗಳು ಬೇಕಾಗುತ್ತವೆ ಎಂದು ಅಂದಾಜಿಸಲಾಗಿದೆ ಎಂದು ಬೈರತಿ ಸುರೇಶ್ ತಿಳಿಸಿದರು.

ಸ್ಮಾರ್ಟ್ ಕಾರ್ಡುಗಳನ್ನು ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ವಿತರಣೆ ಮಾಡಲಾಗುತ್ತದೆ. ಮಹಿಳೆಯರಿಗೆ ಉಚಿತವಾಗಿ ವಿತರಿಸಲಿದ್ದು, ಇದಕ್ಕೆ ತಗಲುವ ಸಂಸ್ಕರಣ ವೆಚ್ಚವನ್ನು ಸರ್ಕಾರ ಭರಿಸಲಿದ್ದರೆ, ಪುರುಷ ಪ್ರಯಾಣಿಕರು ಹಣ ಕೊಟ್ಟು ಖರೀದಿಸಬೇಕಾಗುತ್ತದೆ. ಸ್ಮಾರ್ಟ್ ಕಾರ್ಡ್ ಗಳ ತಾಂತ್ರಿಕ ನೆರವು ಸೇರಿದಂತೆ ಇನ್ನಿತರ ಸಹಕಾರವನ್ನು ಖಾಸಗಿ ಸಂಸ್ಥೆಯೇ ನಿರ್ವಹಣೆ ಮಾಡಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಎಲೆಕ್ಟ್ರಿಕ್ ವಾಹನಗಳಿಗೆ ಆದ್ಯತೆ

ಪರಿಸರ ಸಂರಕ್ಷಣೆಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದ್ದು, ಎಲೆಕ್ಟ್ರಿಕ್ ಬಸ್ ಗಳ ಖರೀದಿಯತ್ತ ಗಮನಹರಿಸಿದೆ. ಈ ಹಿನ್ನೆಲೆಯಲ್ಲಿ ಹಂತಹಂತವಾಗಿ ನಾಲ್ಕೂ ನಿಗಮಗಳಿಗೆ 4 ಸಾವಿರಕ್ಕೂ ಅಧಿಕ ಎಲೆಕ್ಟ್ರಿಕ್ ಬಸ್ ಗಳನ್ನು ಖರೀದಿಸಲಾಗುತ್ತದೆ ಎಂದರು. ಸಭೆಯಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ ದೀಪಾಚೋಳನ್, ಆಯುಕ್ತರು ಮತ್ತು ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಸೆಲ್ವಮಣಿ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳು ಇದ್ದರು.

Big update for 'Shakti' scheme: Free smart cards for 2 crore women in the state!
Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾ. ಪಂ.ಬಿಲ್ ಕಲೆಕ್ಟರ್ ಗಳಿಗೆ ನೆಮ್ಮದಿ ಸುದ್ದಿ : ಸರ್ಕಾರಿ ರಜೆ ದಿನಗಳಲ್ಲಿ ತೆರಿಗೆ ವಸೂಲಾತಿ ಕರ್ತವ್ಯಕ್ಕೆ ಆದೇಶಿಸದಂತೆ ಸರ್ಕಾರ ನಿರ್ದೇಶನ

1 Min Read

BIG NEWS : ರಾಜ್ಯದಲ್ಲಿ ಸರ್ಕಾರದ ಅನುಮತಿ ಇಲ್ಲದೆ ‘ಗ್ರಾಮ ಸಹಾಯಕರ’ ನೇಮಕಾತಿ ಮಾಡುವಂತಿಲ್ಲ: ಸರ್ಕಾರದಿಂದ ಮಹತ್ವದ ಆದೇಶ!

1 Min Read

ಸಾಗರದ ‘ಪ್ರಜ್ವಲ್ ರೇವಣ್ಣ’ನಂತೆ ವರ್ತಿಸುವ ‘ಕಾಮುಕ ಮೇಸ್ತ್ರಿ ನಾಗರಾಜ್’ ಬಂಧಿಸಿ; ಡಿಎಸ್ಎಸ್ ಒತ್ತಾಯ

2 Mins Read
Recent News

ಫಿಫಾ ವಿಶ್ವಕಪ್ 2026: ಸೌದಿ ಅರೇಬಿಯಾ ವಿರುದ್ಧದ ಆರಂಭಿಕ ಪಂದ್ಯದಲ್ಲಿ 1-1 ಡ್ರಾಗೆ ತೃಪ್ತಿಪಟ್ಟ ಉರುಗ್ವೆ!

ʻಶಕ್ತಿʼ ಯೋಜನೆಗೆ ಬಿಗ್ ಅಪ್ ಡೇಟ್: ರಾಜ್ಯದ 2 ಕೋಟಿ ಮಹಿಳೆಯರಿಗೆ ಉಚಿತ ಸ್ಮಾರ್ಟ್ ಕಾರ್ಡ್!

JOB ALERT: ಭಾರತೀಯ ರೈಲ್ವೇ ಇಲಾಖೆಯಲ್ಲಿ 6,565 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ |RRB Recruitment 2026

SHOCKING : ಮಹಿಳೆಯರಿಗಿಂತ ಭಾರತೀಯ ಪುರುಷರೇ `ಕ್ಯಾನ್ಸರ್’ಗೆ ಹೆಚ್ಚು ಬಲಿ : ಆಘಾತಕಾರಿ ವರದಿ ಬಹಿರಂಗ.!

State News
KARNATAKA

ʻಶಕ್ತಿʼ ಯೋಜನೆಗೆ ಬಿಗ್ ಅಪ್ ಡೇಟ್: ರಾಜ್ಯದ 2 ಕೋಟಿ ಮಹಿಳೆಯರಿಗೆ ಉಚಿತ ಸ್ಮಾರ್ಟ್ ಕಾರ್ಡ್!

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ʻಶಕ್ತಿʼ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆ ಬಗ್ಗೆ ಅಂತಿಮ ರೂಪುರೇಶೆ ಸಿದ್ಧಪಡಿಸಲಾಗುತ್ತಿದೆ ಎಂದು ಸಾರಿಗೆ…

ರಾಜ್ಯದ ಗ್ರಾ. ಪಂ.ಬಿಲ್ ಕಲೆಕ್ಟರ್ ಗಳಿಗೆ ನೆಮ್ಮದಿ ಸುದ್ದಿ : ಸರ್ಕಾರಿ ರಜೆ ದಿನಗಳಲ್ಲಿ ತೆರಿಗೆ ವಸೂಲಾತಿ ಕರ್ತವ್ಯಕ್ಕೆ ಆದೇಶಿಸದಂತೆ ಸರ್ಕಾರ ನಿರ್ದೇಶನ

BIG NEWS : ರಾಜ್ಯದಲ್ಲಿ ಸರ್ಕಾರದ ಅನುಮತಿ ಇಲ್ಲದೆ ‘ಗ್ರಾಮ ಸಹಾಯಕರ’ ನೇಮಕಾತಿ ಮಾಡುವಂತಿಲ್ಲ: ಸರ್ಕಾರದಿಂದ ಮಹತ್ವದ ಆದೇಶ!

ಸಾಗರದ ‘ಪ್ರಜ್ವಲ್ ರೇವಣ್ಣ’ನಂತೆ ವರ್ತಿಸುವ ‘ಕಾಮುಕ ಮೇಸ್ತ್ರಿ ನಾಗರಾಜ್’ ಬಂಧಿಸಿ; ಡಿಎಸ್ಎಸ್ ಒತ್ತಾಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.