ಮಹಾರಾಷ್ಟ್ರದಲ್ಲಿ ನಡೆದ ಹೃದಯವಿದ್ರಾವಕ ಘಟನೆ ಬೆಚ್ಚಿಬೀಳಿಸಿದೆ. ಆಟವಾಡುತ್ತಿದ್ದ ವೇಳೆ ತೆರೆದ ಸ್ಥಿತಿಯಲ್ಲಿದ್ದ ಸೆಪ್ಟಿಕ್ ಟ್ಯಾಂಕ್‌ಗೆ ಆಕಸ್ಮಿಕವಾಗಿ ಬಿದ್ದ ಐದು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ದುರ್ಘಟನೆ ಮಕ್ಕಳ ಸುರಕ್ಷತೆ ಕುರಿತಾಗಿ ಮತ್ತೊಮ್ಮೆ ಗಂಭೀರ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.
ಮಾಹಿತಿಯ ಪ್ರಕಾರ, ಮೊಹಮದ್ ಎಂಬ ಐದು ವರ್ಷದ ಬಾಲಕ ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ವೇಳೆ ಮುಚ್ಚಳವಿಲ್ಲದೆ ಬಿಟ್ಟಿದ್ದ ಸೆಪ್ಟಿಕ್ ಟ್ಯಾಂಕ್ ಇರುವ ಪ್ರದೇಶದತ್ತ ತೆರಳಿದ್ದಾನೆ. ಆಟದ ನಡುವೆಯೇ ಆಕಸ್ಮಿಕವಾಗಿ ಟ್ಯಾಂಕ್ ಒಳಗೆ ಬಿದ್ದಿದ್ದಾನೆ ಎನ್ನಲಾಗಿದೆ.
ಸ್ವಲ್ಪ ಸಮಯದ ನಂತರ ಬಾಲಕ ಕಾಣಿಸದಿದ್ದರಿಂದ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದಾರೆ. ಈ ವೇಳೆ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಬಾಲಕ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಸ್ಥಳೀಯರ ಸಹಾಯದಿಂದ ಬಾಲಕನನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಆತನನ್ನು ಬದುಕಿಸಲು ಸಾಧ್ಯವಾಗಲಿಲ್ಲ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸೆಪ್ಟಿಕ್ ಟ್ಯಾಂಕ್ ಸುರಕ್ಷತಾ ಕ್ರಮಗಳಲ್ಲಿ ನಿರ್ಲಕ್ಷ್ಯ ನಡೆದಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರ ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣವಾಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಈ ಘಟನೆ ಪೋಷಕರು ಮತ್ತು ಸ್ಥಳೀಯ ಆಡಳಿತಕ್ಕೆ ಗಂಭೀರ ಎಚ್ಚರಿಕೆಯ ಸಂದೇಶ ನೀಡಿದೆ. ವಸತಿ ಪ್ರದೇಶಗಳು, ನಿರ್ಮಾಣ ಹಂತದ ಕಟ್ಟಡಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತೆರೆದ ಗುಂಡಿಗಳು, ಚರಂಡಿಗಳು ಮತ್ತು ಮುಚ್ಚದ ಸೆಪ್ಟಿಕ್ ಟ್ಯಾಂಕ್‌ಗಳು ಮಕ್ಕಳ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸುತ್ತಿವೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
#महाराष्ट्र के भिवंडी स्थित फरीद बाग इलाके में
बच्चों के खेल के बीच दर्दनाक हादसा: सेप्टिक टैंक में गिरने से 5 वर्षीय बच्चे की मौत
घटना का #CCTV आया सामने pic.twitter.com/OaZI9Teftu— Devesh , वनवासी (@Devesh81403955) June 16, 2026








