ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ ನಲ್ಲಿ 2.77 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ ಏರ್ಪೋರ್ಟಲ್ಲಿ ಕಷ್ಟಂ ಅಧಿಕಾರಿಗಳು 2.77 ಕೋಟಿ ರೂಪಾಯಿ ಮೌಲ್ಯದ 7.92 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಪ್ರಯಾಣಿಕ ಬ್ಯಾಂಕಾಕ್ ನಿಂದ ಬೆಂಗಳೂರಿಗೆ ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಪ್ರಯಾಣಿಕನ ಬ್ಯಾಕ್ ತಪಾಸನೆ ಸಂದರ್ಭದಲ್ಲಿ ಗಾಂಜಾ ಪತ್ತೆಯಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ಕಸ್ಟಮ್ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಎನ್ ಡಿ ಪಿ ಎಸ್ ಕಾಯ್ದೆ ಅಡಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.








