Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಲೋವೆರಾ ಆಧರಿತ ಕ್ರೀಮ್‌ಗಳು ಸೇರಿ 16 ಸಂಯೋಜಿತ ಔಷಧಿಗಳ ಉತ್ಪಾದನೆ ಮತ್ತು ಮಾರಾಟ ತಕ್ಷಣದಿಂದಲೇ ನಿಷೇಧಿಸಿದ ಕೇಂದ್ರ ಸರ್ಕಾರ!

​ಬಾಂಗ್ಲಾದೇಶದಲ್ಲಿ ಶ್ರೀರಾಮನ ಮೂರ್ತಿ ವಿರೂಪಕ್ಕೆ ಆಕ್ರೋಶ: ಹಿಂದೂಗಳಿಂದ ಬೃಹತ್ ಪಂಜಿನ ಮೆರವಣಿಗೆ, ಸರ್ಕಾರಕ್ಕೆ 72 ಗಂಟೆಗಳ ಗಡುವು!

BIG NEWS : `PF’ ಖಾತೆದಾರರೇ ಖಾತೆಗೆ ಬಡ್ಡಿ ಹಣ ಜಮೆಯಾಗಿದೆಯೇ? ಜಸ್ಟ್ ಮಿಸ್ಡ್ ಕಾಲ್ ಕೊಟ್ಟು ಹೀಗೆ ಚೆಕ್ ಮಾಡಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » RSS ಸಂಸ್ಥೆಯು ತನ್ನ ನೋಂದಣಿ ಹಾಗೂ ಆರ್ಥಿಕ ಪಾರದರ್ಶಕತೆಯನ್ನು ಬಹಿರಂಗಪಡಿಸಬೇಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ
KARNATAKA

RSS ಸಂಸ್ಥೆಯು ತನ್ನ ನೋಂದಣಿ ಹಾಗೂ ಆರ್ಥಿಕ ಪಾರದರ್ಶಕತೆಯನ್ನು ಬಹಿರಂಗಪಡಿಸಬೇಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

By ವಸಂತ ಬಿ ಈಶ್ವರಗೆರೆ

ನವದೆಹಲಿ: ದೇಶದ ಪ್ರಮುಖ ಸಂಘಟನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನ ಅಸ್ತಿತ್ವದ ಶತಮಾನೋತ್ಸವದ (100 ವರ್ಷ) ಸಂದರ್ಭದಲ್ಲಾದರೂ ತನ್ನ ಕಾನೂನುಬದ್ಧ ಸ್ಥಾನಮಾನವನ್ನು ಸ್ಪಷ್ಟಪಡಿಸಬೇಕು ಹಾಗೂ ಆರ್ಥಿಕ ಪಾರದರ್ಶಕತೆಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಕರ್ನಾಟಕದ ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರು ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.

ಈ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿರುವ ಸಚಿವರು, ಸಂವಿಧಾನದ ಚೌಕಟ್ಟಿನಲ್ಲಿ ಯಾವುದೇ ಸಂಸ್ಥೆಯು ಕಾನೂನು ಮೇಲ್ವಿಚಾರಣೆ ಮತ್ತು ಸಾರ್ವಜನಿಕ ಹೊಣೆಗಾರಿಕೆಯಿಂದ ಹೊರಗಿರಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ.

•ಆರ್‌ಎಸ್‌ಎಸ್ ನೋಂದಣಿ ಎಲ್ಲಿದೆ?: ದೇಶಾದ್ಯಂತ 60,000ಕ್ಕೂ ಹೆಚ್ಚು ದೈನಂದಿನ ಶಾಖೆಗಳನ್ನು ಹಾಗೂ ಕೋಟ್ಯಂತರ ಸ್ವಯಂಸೇವಕರನ್ನು ಹೊಂದಿರುವ ಇಷ್ಟು ದೊಡ್ಡ ಸಂಘಟನೆಯು ಯಾವ ಕಾನೂನಿನ ಆಧಾರದ ಮೇಲೆ ಔಪಚಾರಿಕ ನೋಂದಣಿ (Registration) ಇಲ್ಲದೆ ಇಷ್ಟೊಂದು ವ್ಯಾಪಕವಾಗಿ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಸಚಿವರು ಪ್ರಶ್ನಿಸಿದ್ದಾರೆ. ಸಂವಿಧಾನದ ಅಡಿಯಲ್ಲಿ ಪ್ರತಿಯೊಂದು ಸಂಸ್ಥೆಯೂ ಕಾನೂನಿನ ಚೌಕಟ್ಟಿಗೆ ಬದ್ಧವಾಗಿರಬೇಕು ಎಂದಿದ್ದಾರೆ.

• ಆರ್ಥಿಕ ಮತ್ತು ಆಸ್ತಿ ವಿವರಗಳ ಬಹಿರಂಗಕ್ಕೆ ಆಗ್ರಹ: ಸಾಮಾನ್ಯ ನಾಗರಿಕರು, ಕಾರ್ಮಿಕ ಸಂಘಟನೆಗಳು, ಸರ್ಕಾರೇತರ ಸಂಸ್ಥೆಗಳು (NGO), ಟ್ರಸ್ಟ್‌ಗಳು ಮತ್ತು ಕಂಪನಿಗಳು ಸರ್ಕಾರದ ನಿಯಮಾವಳಿಗಳ ಪ್ರಕಾರ ನೋಂದಣಿ ಮಾಡಿಕೊಂಡು, ತಮ್ಮ ಆದಾಯ-ವೆಚ್ಚಗಳ ವಿವರಗಳನ್ನು ನೀಡುತ್ತಿರುವಾಗ ಆರ್‌ಎಸ್‌ಎಸ್‌ಗೆ ಮಾತ್ರ ಇದರಿಂದ ಏಕೆ ವಿನಾಯಿತಿ? ಸಂಘಟನೆಯ ಒಟ್ಟು ಆಸ್ತಿ ಎಷ್ಟು, ದೇಣಿಗೆಯ ಮೂಲಗಳೇನು, ಆರ್ಥಿಕ ವೆಚ್ಚಗಳು ಹೇಗೆ ನಡೆಯುತ್ತವೆ ಮತ್ತು ಚಾಲ್ತಿಯಲ್ಲಿರುವ ತೆರಿಗೆ ಕಾನೂನುಗಳ ಪ್ರಕಾರ ತೆರಿಗೆ ಪಾವತಿಸಲಾಗುತ್ತಿದೆಯೇ ಎಂಬ ಸಂಪೂರ್ಣ ವಿವರಗಳನ್ನು ಸಾರ್ವಜನಿಕವಾಗಿ ಇಡಬೇಕು ಎಂದು ಒತ್ತಾಯಿಸಿದ್ದಾರೆ.

•ಕರ್ನಾಟಕದ ಅಂಕಿ-ಅಂಶಗಳ ಉಲ್ಲೇಖ: ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ವರದಿಯನ್ನೇ ಉಲ್ಲೇಖಿಸಿದ ಸಚಿವರು, ಕರ್ನಾಟಕವೊಂದರಲ್ಲೇ 4,127 ದೈನಂದಿನ ಶಾಖೆಗಳು, 1,389 ವಾರಾಂತರ ಸಭೆಗಳು, 60 ಮಾಸಿಕ ಮಂಡಳಿಗಳು ನಡೆಯುತ್ತಿವೆ. ಜೊತೆಗೆ 500ಕ್ಕೂ ಹೆಚ್ಚು ಪಥಸಂಚಲನಗಳು ಹಾಗೂ ಲಕ್ಷಾಂತರ ಜನರು ಭಾಗವಹಿಸುವ ಸಮಾಜೋತ್ಸವಗಳು ನಿರಂತರವಾಗಿ ಜರುಗುತ್ತಿವೆ. ಇಷ್ಟು ದೊಡ್ಡ ಮಟ್ಟದ ಸಾರ್ವಜನಿಕ ಸಜ್ಜುಗೊಳಿಸುವಿಕೆ ಹಾಗೂ ಗಣವೇಶಧಾರಿ ಪಥಸಂಚಲನಗಳನ್ನು “ಖಾಸಗಿ ಅಥವಾ ಅನೌಪಚಾರಿಕ ವ್ಯವಸ್ಥೆ” ಎಂದು ಪರಿಗಣಿಸಲು ಸಾಧ್ಯವಿಲ್ಲ. ಇದಕ್ಕೆ ಸಂಬಂಧಿಸಿದ ಆಡಳಿತಾತ್ಮಕ ಅನುಮತಿಗಳ ವಿವರಗಳನ್ನು ಒದಗಿಸಬೇಕು ಎಂದಿದ್ದಾರೆ.

•ಶತಮಾನೋತ್ಸವದ ಸಂದರ್ಭದಲ್ಲಿ ಆತ್ಮಾವಲೋಕನ ಅಗತ್ಯ: ಆರ್‌ಎಸ್‌ಎಸ್ ಕೇವಲ ಸಂಭ್ರಮಾಚರಣೆಗೆ ಸೀಮಿತವಾಗದೆ, ಭಾರತೀಯ ಸಂವಿಧಾನಕ್ಕೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕು. 100ನೇ ವರ್ಷದಲ್ಲಿ ಸಂಘಟನೆಯು ಕಾನೂನುಬದ್ಧವಾಗಿ ನೋಂದಾಯಿಸಿಕೊಂಡು, ಪಾರದರ್ಶಕತೆಯಿಂದ ಕಾರ್ಯನಿರ್ವಹಿಸುವುದೇ ದೇಶಕ್ಕೆ ನೀಡುವ ಅತ್ಯುತ್ತಮ ಕೊಡುಗೆಯಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಕಾನೂನಿಗಿಂತ ಮಿಗಿಲಲ್ಲ. ಇಷ್ಟು ದೊಡ್ಡ ಸಂಘಟನೆಯ ಸಾರ್ವಜನಿಕ ಹೊಣೆಗಾರಿಕೆ, ಆರ್ಥಿಕ ಪಾರದರ್ಶಕತೆ ಮತ್ತು ದೇಶದ ಕಾನೂನುಗಳ ಪಾಲನೆಯ ಬಗ್ಗೆ ಪ್ರಶ್ನಿಸುವುದು ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದೆ ಎಂದು ಸಚಿವರು ತಮ್ಮ ಪತ್ರಿಕಾಗೋಷ್ಠಿಯಲ್ಲಿ ಪುನರುಚ್ಚರಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

1 Min Read

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

2 Mins Read

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

1 Min Read
Recent News

ಅಲೋವೆರಾ ಆಧರಿತ ಕ್ರೀಮ್‌ಗಳು ಸೇರಿ 16 ಸಂಯೋಜಿತ ಔಷಧಿಗಳ ಉತ್ಪಾದನೆ ಮತ್ತು ಮಾರಾಟ ತಕ್ಷಣದಿಂದಲೇ ನಿಷೇಧಿಸಿದ ಕೇಂದ್ರ ಸರ್ಕಾರ!

​ಬಾಂಗ್ಲಾದೇಶದಲ್ಲಿ ಶ್ರೀರಾಮನ ಮೂರ್ತಿ ವಿರೂಪಕ್ಕೆ ಆಕ್ರೋಶ: ಹಿಂದೂಗಳಿಂದ ಬೃಹತ್ ಪಂಜಿನ ಮೆರವಣಿಗೆ, ಸರ್ಕಾರಕ್ಕೆ 72 ಗಂಟೆಗಳ ಗಡುವು!

BIG NEWS : `PF’ ಖಾತೆದಾರರೇ ಖಾತೆಗೆ ಬಡ್ಡಿ ಹಣ ಜಮೆಯಾಗಿದೆಯೇ? ಜಸ್ಟ್ ಮಿಸ್ಡ್ ಕಾಲ್ ಕೊಟ್ಟು ಹೀಗೆ ಚೆಕ್ ಮಾಡಿ!

ನೀಟ್ ಮರುಪರೀಕ್ಷೆ: ಟೆಲಿಗ್ರಾಂ ನಿಷೇಧದ ನಡುವೆಯೂ ನಕಲಿ ಪ್ರಶ್ನೆಪತ್ರಿಕೆ ಮಾರಾಟ; ರಾಜಸ್ಥಾನದ ಯುವಕನ ಬಂಧನ!

State News
KARNATAKA

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

By kannadanewsnow57 KARNATAKA 1 Min Read

ವಿಜಯಪುರ: ಜಿಲ್ಲೆಯ ತಿಕೋಟ ತಾಲೂಕಿನ ಘೋನಸಗಿ ಗ್ರಾಮದಲ್ಲಿ ವಿಶಿಷ್ಟ ಹಾಗೂ ಅಪರೂಪದ ಖಗೋಳ ವಿಸ್ಮಯವೊಂದು ಸಂಭವಿಸಿದೆ. ಇಲ್ಲಿನ ಸರ್ಕಾರಿ ಕನ್ನಡ…

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

ಮನ್ಮುಲ್ ನಿಂದ ಕೆರೆಗೆ ಹರಿದ ರಾಸಾಯನಿಕಯುಕ್ತ ನೀರು: ಸಾವಿರಾರು ಮೀನುಗಳ ಮಾರಣಹೋಮ, ಲಕ್ಷಾಂತರ ರೂ. ನಷ್ಟ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.