ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ಹಾಗೂ ಯಶಸ್ವಿ ನಿರ್ದೇಶಕ ಪವನ್ ಒಡೆಯರ್ ಅವರ ತಾಯಿ ಗೀತಾ ಒಡೆಯರ್ (73) ಅವರು ಬುಧವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಗೀತಾ ಒಡೆಯರ್ ಅವರು ಕಳೆದ ಕೆಲವು ಸಮಯದಿಂದ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ಎರಡು ತಿಂಗಳುಗಳಿಂದ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಕಂಬನಿ ಮಿಡಿದ ಸ್ಯಾಂಡಲ್ ವುಡ್
ತಾಯಿಯ ಹಠಾತ್ ಅಗಲಿಕೆ ನಿರ್ದೇಶಕ ಪವನ್ ಒಡೆಯರ್ ಹಾಗೂ ಅವರ ಇಡೀ ಕುಟುಂಬಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ. ಗೀತಾ ಒಡೆಯರ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಸ್ಯಾಂಡಲ್ವುಡ್ನ ಪ್ರಮುಖ ಗಣ್ಯರು, ಆಪ್ತರು ಹಾಗೂ ಅಭಿಮಾನಿಗಳು ಪವನ್ ಒಡೆಯರ್ ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಚಿತ್ರರಂಗದ ತಾರೆಯರು ಕಂಬನಿ ಮಿಡಿಯುತ್ತಿದ್ದಾರೆ.
ಯಶಸ್ವಿ ನಿರ್ದೇಶಕ ಪವನ್ ಒಡೆಯರ್:
ಕೋಮಲ್ ನಟನೆಯ ‘ಗೋವಿಂದಾಯ ನಮಃ’ ಚಿತ್ರದ ಮೂಲಕ ಭರ್ಜರಿ ಯಶಸ್ಸು ಕಂಡು ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿದ ಪವನ್ ಒಡೆಯರ್, ಆನಂತರ ಯಶ್ ನಟನೆಯ ‘ಗೂಗ್ಲಿ’, ಪುನೀತ್ ರಾಜ್ಕುಮಾರ್ ನಟನೆಯ ‘ರಣ ವಿಕ್ರಮ’ ಮತ್ತು ‘ನಟಸಾರ್ವಭೌಮ’ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ಕನ್ನಡ ಚಿತ್ರರಂಗದ ಪ್ರಮುಖ ಮತ್ತು ಯಶಸ್ವಿ ನಿರ್ದೇಶಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.
Davanagere : ತೀವ್ರ ಹೃದಯಾಘಾತಕ್ಕೆ ಬಲಿಯಾದ ದಾವಣಗೆರೆಯ ರಾಷ್ಟ್ರೀಯ ಬಾಡಿ ಬಿಲ್ಡರ್ ಸುಶೀಲ್ ಕುಮಾರ್








