ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ಭೀಕರ ಆಹಾರ ವಿಷಪೂರಿತ (ಫುಡ್ ಪಾಯ್ಸನಿಂಗ್) ಘಟನೆಯೊಂದು ಬೆಳಕಿಗೆ ಬಂದಿದೆ. ರಸ್ತೆ ಬದಿಯ ಗಾಡಿಯಲ್ಲಿ ಪಾನಿಪೂರಿ ತಿಂದ ಸುಮಾರು 20ಕ್ಕೂ ಹೆಚ್ಚು ಮಕ್ಕಳು ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಜಿಲ್ಲೆಯ ಮುಸ್ತಬಾದ್ ಮಂಡಲದ ಗೂಡೆಮ್ ಗ್ರಾಮದಲ್ಲಿ ಈ ಆತಂಕಕಾರಿ ಘಟನೆ ನಡೆದಿದೆ.
ಗ್ರಾಮಕ್ಕೆ ಬಂದಿದ್ದ ಪಾನಿಪೂರಿ ಬಂಡಿಯ ಬಳಿ ಸ್ಥಳೀಯ ಮಕ್ಕಳು ಸಾಯಂಕಾಲ ಪಾನಿಪೂರಿ ತಿಂದಿದ್ದಾರೆ. ಆದರೆ, ಪಾನಿಪೂರಿ ತಿಂದ ಕೆಲವೇ ಗಂಟೆಗಳಲ್ಲಿ ಮಕ್ಕಳಿಗೆ ತೀವ್ರ ಹೊಟ್ಟೆನೋವು, ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ. ಒಂದೇ ಬಾರಿಗೆ ಹಲವು ಮಕ್ಕಳು ಅಸ್ವಸ್ಥರಾಗಿದ್ದರಿಂದ ಪೋಷಕರು ಗಾಬರಿಗೊಂಡಿದ್ದಾರೆ.
ಅಸ್ವಸ್ಥರಾದ ಎಲ್ಲಾ ಮಕ್ಕಳನ್ನು ತಕ್ಷಣವೇ ಮುಸ್ತಬಾದ್ ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಕ್ಕಳಿಗೆ ವೈದ್ಯರು ತುರ್ತು ಚಿಕಿತ್ಸೆ ನೀಡುತ್ತಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಪಾನಿಪೂರಿ ತಯಾರಿಕೆಯಲ್ಲಿ ಕಲುಷಿತ ನೀರು ಅಥವಾ ಹಳಸಿದ ಆಹಾರ ಪದಾರ್ಥಗಳನ್ನು ಬಳಸಿರುವುದೇ ಈ ಘಟನೆಗೆ ಕಾರಣ ಎನ್ನಲಾಗಿದೆ.
ಈ ಘಟನೆಯಿಂದಾಗಿ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದು, ರಸ್ತೆ ಬದಿಯ ಆಹಾರದ ಗುಣಮಟ್ಟದ ಕುರಿತು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Rajanna Sircilla, Telangana | 15 Children Hospitalised After Eating Panipuri; Vendor Detained
According to Thangallapally Police, after consuming panipuri from a street vendor in the colony, 15 children developed vomiting and diarrhoea. They were taken to the Civil Hospital in…
— ANI (@ANI) June 17, 2026








