Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

​ಭಯೋತ್ಪಾದನೆ, ಸೈಬರ್ ಕ್ರೈಂ ಮತ್ತು ಡ್ರಗ್ಸ್ ದಂಧೆಗೆ ಟೆಲಿಗ್ರಾಂ ಆಪ್ ದುರುಪಯೋಗ: ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದಲ್ಲಿ ಬಡ ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ; ಸಂಯುಕ್ತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮಂಜಪ್ಪ ಹಿರೇನೆಲ್ಲೂರು ಆಕ್ರೋಶ!
KARNATAKA

ಸಾಗರದಲ್ಲಿ ಬಡ ರೈತರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ; ಸಂಯುಕ್ತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮಂಜಪ್ಪ ಹಿರೇನೆಲ್ಲೂರು ಆಕ್ರೋಶ!

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಪಕ್ಷಿಧಾಮ ನಿರ್ಮಿಸಲು ಕಾಯ್ದಿರಿಸಿದ್ದ ಅರಣ್ಯ ಪ್ರದೇಶವನ್ನು ಧ್ವಂಸಗೊಳಿಸಿರುವ ಪ್ರಭಾವಿ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು, ಬದುಕು ಕಟ್ಟಿಕೊಂಡಿರುವ ಬಡ ಮತ್ತು ಅತಿ ಸಣ್ಣ ರೈತರ ಬೇಲಿ ಕಿತ್ತು ದೌರ್ಜನ್ಯ ಎಸಗಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಯುಕ್ತ ರೈತ ಸಂಘದ ಸಾಗರ ತಾಲೂಕು ಅಧ್ಯಕ್ಷ ಎಂ.ಬಿ. ಮಂಜಪ್ಪ ಹಿರೇನೆಲ್ಲೂರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಇಲಾಖೆಯ ಏಕಪಕ್ಷೀಯ ನಡೆ ಹಾಗೂ ದಬ್ಬಾಳಿಕೆಯ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.

ಯಾರದ್ದೋ ಮಾತು ಕೇಳಿ ಸಣ್ಣ ರೈತರ ಮೇಲೆ ದಬ್ಬಾಳಿಕೆ!

ಘಟನೆಯ ವಿವರ ನೀಡಿದ ಮಂಜಪ್ಪ, “ಸೈದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆ.ಜಿ.ಕೊಪ್ಪ-ತಡಗಳಲೆ ಗ್ರಾಮದ ಸರ್ವೇ ನಂ. 243ರಲ್ಲಿ ಒಟ್ಟು 600 ಎಕರೆ ಕಂದಾಯ ಭೂಮಿ ಇದೆ. ಇದರಲ್ಲಿ ಸುಮಾರು 35 ಎಕರೆ ಪ್ರದೇಶವನ್ನು ಈ ಹಿಂದೆ ಬಂಗಾರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಿಂದಲೂ ‘ಪಕ್ಷಿಧಾಮ’ ನಿರ್ಮಿಸಲೆಂದೇ ಕಾಯ್ದಿರಿಸಲಾಗಿತ್ತು. ಈ ಕಂದಾಯ ಭೂಮಿಯ ಅತ್ಯಲ್ಪ ಭಾಗದಲ್ಲಿ ಕೆ.ಜಿ.ಕೊಪ್ಪದ 30 ಹಾಗೂ ತಡಗಳಲೆ ಗ್ರಾಮದ 20 ಕುಟುಂಬಗಳು ಮುಕ್ಕಾಲು ಎಕರೆ, ಒಂದು ಎಕರೆಯಷ್ಟು ಜಾಗದಲ್ಲಿ ಬಗರ್‌ಹುಕುಂ ಅಡಿಯಲ್ಲಿ ಗಿಡಗಳನ್ನು ನೆಟ್ಟು ಸಾಗುವಳಿ ಮಾಡುತ್ತಾ ಜೀವನ ಸಾಗಿಸುತ್ತಿವೆ” ಎಂದರು.

ಆದರೆ, ಕಳೆದ ಮಂಗಳವಾರ ಅರಣ್ಯ ಇಲಾಖೆ ಅಧಿಕಾರಿಗಳು ಯಾರದ್ದೋ ಪ್ರಚೋದನೆಗೆ ಒಳಗಾಗಿ, ಏಕಾಏಕಿ ತಡಗಳಲೆ ಗ್ರಾಮದ ಸಣ್ಣ ರೈತರ ಜಮೀನಿಗೆ ನುಗ್ಗಿ ಅವರು ಹಾಕಿದ್ದ ಬೇಲಿಗಳನ್ನು ಕಿತ್ತುಹಾಕಿ, ಗಿಡಗಳನ್ನು ನಾಶಪಡಿಸುವ ಮೂಲಕ ದೌರ್ಜನ್ಯ ಎಸಗಿದ್ದಾರೆ. ತಾಲೂಕಿನಲ್ಲಿ ಹತ್ತಾರು ಎಕರೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ಪ್ರಭಾವಿಗಳ ವಿರುದ್ಧ ಕ್ರಮ ಜರುಗಿಸಲು ಧೈರ್ಯವಿಲ್ಲದ ಅರಣ್ಯ ಇಲಾಖೆ, ಕೇವಲ ಬಡ ರೈತರನ್ನು ಗುರಿಯಾಗಿಸಿಕೊಂಡು ದಬ್ಬಾಳಿಕೆ ನಡೆಸುತ್ತಿದೆ ಎಂದು ಅವರು ದೂರಿದರು.

15 ದಿನಗಳ ಗಡುವು: ಶಿವಮೊಗ್ಗ CCF ಕಚೇರಿ ಎದುರು ಪ್ರತಿಭಟನೆ ಎಚ್ಚರಿಕೆ

ಬಡ ರೈತರ ಜಮೀನು ಹಾಗೂ ಬೇಲಿ ಧ್ವಂಸಗೊಳಿಸಿರುವ ಅರಣ್ಯ ಇಲಾಖೆಯ ಕೃತ್ಯವನ್ನು ಸಂಯುಕ್ತ ರೈತ ಸಂಘ ಉಗ್ರವಾಗಿ ಖಂಡಿಸುತ್ತದೆ. ಈ ಇಡೀ ದೌರ್ಜನ್ಯದ ಹಿಂದೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ (DCF) ಕೈವಾಡವಿದೆ ಎಂದು ಆರೋಪಿಸಿದ ಅವರು,

“ಬಡ ರೈತರ ಹೊಟ್ಟೆ ಮೇಲೆ ಹೊಡೆದಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ (RFO) ಹಾಗೂ ಅರಣ್ಯ ರಕ್ಷಕರ (Forest Guards) ವಿರುದ್ಧ ಮುಂದಿನ 15 ದಿನಗಳ ಒಳಗಾಗಿ ಸೂಕ್ತ ಶಿಸ್ತುಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತ ಸಂಘದ ವತಿಯಿಂದ ಶಿವಮೊಗ್ಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ (CCF) ಕಚೇರಿ ಮುಂಭಾಗ ಬೃಹತ್ ಮತ್ತು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು.” — ಎಂ.ಬಿ. ಮಂಜಪ್ಪ ಹಿರೇನೆಲ್ಲೂರು, ಅಧ್ಯಕ್ಷರು, ಸಂಯುಕ್ತ ರೈತ ಸಂಘ.

ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ರಾಮಪ್ಪ ಶಿರವಾಳ, ಚಂದ್ರು, ಕನ್ನಪ್ಪ, ದಿನೇಶ್, ವೀರಭದ್ರ, ರಾಜು, ಪರಶುರಾಮ, ರಾಚಪ್ಪ ಹಾಗೂ ಜಗದೀಶ್ ಉಪಸ್ಥಿತರಿದ್ದು ಇಲಾಖೆಯ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.

JOB ALERT: ಗ್ರಾಮ ಪಂಚಾಯ್ತಿಯ ಅರಿವು ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ, ಜುಲೈ.8 ಲಾಸ್ಟ್ ಡೇಟ್

ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಹಾಕಲು ಬಿಜೆಪಿಯ SIR ಸಂಚು: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗಂಭೀರ ಆರೋಪ!

Share. Facebook Twitter LinkedIn WhatsApp Email

Related Posts

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

2 Mins Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

2 Mins Read

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

1 Min Read
Recent News

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

​ಭಯೋತ್ಪಾದನೆ, ಸೈಬರ್ ಕ್ರೈಂ ಮತ್ತು ಡ್ರಗ್ಸ್ ದಂಧೆಗೆ ಟೆಲಿಗ್ರಾಂ ಆಪ್ ದುರುಪಯೋಗ: ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

​ಬಿಸಿಲಿನ ಬೇಗೆಯಿಂದ ಬಚಾವಾಗಲು ಐಪಿಎಲ್ ಮುಂಚಿತವಾಗಿಯೇ ಆರಂಭ? 2027ರ ಟೂರ್ನಿಯಲ್ಲಿ ಹೊಸ ತಂಡಗಳ ಸೇರ್ಪಡೆ ಸದ್ಯಕ್ಕಿಲ್ಲ!

State News
KARNATAKA

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ನಕಲಿ ಜಾತಿ ಪ್ರಮಾಣ ಪತ್ರವನ್ನು ಬಳಸಿಕೊಂಡು ಸರ್ಕಾರಿ ನೌಕರಿ ಹಾಗೂ ಮುಂಬಡ್ತಿ ಪಡೆದು, ನೈಜ ಪರಿಶಿಷ್ಟ ಜಾತಿಯ ಜನರಿಗೆ…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 IAS ಅಧಿಕಾರಿ’ಗಳನ್ನು ವರ್ಗಾವಣೆ | IAS Officer Transfer

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಕಾಂಗ್ರೆಸ್ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಭರ್ಜರಿ ಗೆಲುವು

BIG BREAKING: ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 222 ಮತಗಳ ಪೈಕಿ ಒಂದು ಮತ ಅಸಿಂಧು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.