ಬೆಂಗಳೂರು : ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ವಿಧಾನಪರಿಷತ್ 7 ಸ್ಥಾನಗಳಿಗೆ ಚುನಾವಣೆ ನಡೆಯಿತು ಕಾಂಗ್ರೆಸ್ಸ್’ನ 5 ಬಿಜೆಪಿಯ 2 ಹಾಗೂ ಜೆಡಿಎಸ್ ನ ಓರ್ವ ಅಭ್ಯರ್ಥಿ ಈ ಒಂದು ಪರಿಷತ್ ಚುನಾವಣೆ ಕಣದಲ್ಲಿ ಇದ್ದಾರೆ. ಇದೀಗ ಬಿಜೆಪಿ ಉಚ್ಛಾಟಿಕ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಗೆ ಅಡ್ಡ ಮತದಾನ ಹಾಕುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ ಟಿ ಸೋಮಶೇಖರ್, ಬಿಜೆಪಿ ಜೆಡಿಎಸ್ ಯಾರು ನನ್ನನ್ನು ಸಂಪರ್ಕಿಸಿಲ್ಲ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನನಗೆ ಕರೆ ಮಾಡಿ ಕರೆಸಿದರು ಅಲ್ಲಿ ನಮ್ಮ ಅಭ್ಯರ್ಥಿಗೆ ಮತ ಹಾಕಬೇಕು ಎಂದು ಮನವಿ ಮಾಡಿದರು. ನಾನು ನಮ್ಮ ಕ್ಷೇತ್ರದ ಹಲವಾರು ಸಮಸ್ಯೆಗಳನ್ನು ಅವರ ಗಮನಕ್ಕೆ ತಂದಿದ್ದೇನೆ.ಈ ಸಮಸ್ಯೆಗಳನ್ನು ಬಗೆಹರಿಸಿದರೆ ನಾನು ಕೂಡ ನೀವು ಹೇಳಿದಂತ ಅಭ್ಯರ್ಥಿಗೆ ಆತ್ಮಸಾಕ್ಷಿಯಂತೆ ಮತ ಹಾಕುತ್ತೇನೆ ಅಂತ ಹೇಳಿದ್ದೇನೆ. ಆಗ ಸಿಎಂ ಹಂತ ಹಂತವಾಗಿ ನಿಮ್ಮ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಹೇಳಿದ್ದಾರೆ. ಹಾಗಾಗಿ ನಾನು ಆತ್ಮಸಾಕ್ಷಿಯಾಗಿ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ ಎಂದು ಎಸ್ ಟಿ ಸೋಮಶೇಖರ್ ತಿಳಿಸಿದರು.








