Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಇಂದು `ಪಿಎಂ ಕಿಸಾನ್ ಯೋಜನೆ’ಯ 23ನೇ ಕಂತಿನ ಹಣ ಬಿಡುಗಡೆ | PM Kisan Scheme

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು
KARNATAKA

ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಆರೋಪ: ಸಾಗರ ನಗರಸಭೆ ಮೇಸ್ತ್ರಿ ನಾಗರಾಜ್ ವಿರುದ್ಧ ಡಿಸಿಗೆ DSS ದೂರು

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ನಕಲಿ ಜಾತಿ ಪ್ರಮಾಣ ಪತ್ರವನ್ನು ಬಳಸಿಕೊಂಡು ಸರ್ಕಾರಿ ನೌಕರಿ ಹಾಗೂ ಮುಂಬಡ್ತಿ ಪಡೆದು, ನೈಜ ಪರಿಶಿಷ್ಟ ಜಾತಿಯ ಜನರಿಗೆ ವಂಚಿಸುತ್ತಿರುವ ಸಾಗರ ನಗರಸಭೆಯ ನೌಕರ ಮೇಸ್ತ್ರಿ ನಾಗರಾಜ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಆತನ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.), ಸಾಗರ ತಾಲ್ಲೂಕು ಶಾಖೆಯು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರನ್ನು ಸಲ್ಲಿಸಿದೆ.

​ಹಿನ್ನೆಲೆ ಮತ್ತು ಆರೋಪ:

​ಸಾಗರ ಟೌನ್‌ನ ಎಸ್‌.ಎನ್. ನಗರದ ಎ.ಕೆ. ಕಾಲೋನಿ ನಿವಾಸಿಯಾದ ನಾಗರಾಜ್ ಬಿನ್ ಮಾಣಿಕ್ಯ ಎಂಬುವವರು ಸಾಗರ ನಗರಸಭೆಯಲ್ಲಿ ಪೌರನೌಕರ ಮೇಸ್ತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಕೆಲಸಕ್ಕೆ ಸೇರುವ ಸಂದರ್ಭದಲ್ಲಿ ತಪ್ಪು ಮಾಹಿತಿ ನೀಡಿ ‘ಆದಿಕರ್ನಾಟಕ’ (SC) ಜನಾಂಗದ ಪ್ರಮಾಣ ಪತ್ರವನ್ನು ಪಡೆದುಕೊಂಡು ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಈ ನಕಲಿ ದಾಖಲೆಯ ಆಧಾರದ ಮೇಲೆ ಸರ್ಕಾರದಿಂದ ಸಿಗುವ ಮುಂಬಡ್ತಿ (ಪ್ರಮೋಷನ್) ಸೌಲಭ್ಯಗಳನ್ನೂ ಸಹ ಪಡೆದುಕೊಂಡಿದ್ದಾರೆ ಎಂದು ಡಿ.ಎಸ್.ಎಸ್. ತನ್ನ ದೂರಿನಲ್ಲಿ ಗಂಭೀರವಾಗಿ ಆರೋಪಿಸಿದೆ.

​ತನಿಖೆಯಲ್ಲಿ ಬೆಳಕಿಗೆ ಬಂದ ಸತ್ಯ:

​ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಈ ವಿಷಯದ ಬಗ್ಗೆ ಕೂಲಂಕುಶವಾಗಿ ಪರಿಶೀಲನೆ ನಡೆಸಿದಾಗ ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಆರೋಪಿ ನಾಗರಾಜ್ ಅವರು ಸಾಗರ ನಗರಸಭೆಯ ಮಾಜಿ ಅಧ್ಯಕ್ಷರಾದ ಗಣಾದೀಶ ಬಿನ್ ತೊಪ್ಪಲರಾಜು ಅವರ ರಕ್ತಸಂಬಂಧಿಯಾಗಿದ್ದಾರೆ. ಗಣಾದೀಶ ಅವರು ಮೂಲತಃ ‘ಅರುಂಧತಿಯರ್’ ಜಾತಿಗೆ ಸೇರಿದವರಾಗಿದ್ದು, ಅವರು ಪಡೆದಿದ್ದ ಎಸ್‌.ಸಿ. ಜಾತಿ ಪ್ರಮಾಣ ಪತ್ರವನ್ನು ಈಗಾಗಲೇ ಶಿವಮೊಗ್ಗ ಜಿಲ್ಲಾ ಜಾತಿ ಆದಾಯ ಪರಿಶೀಲನಾ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಪರಿಶೀಲಿಸಿ, ಅಂತಿಮ ಆದೇಶದ ಮೂಲಕ ರದ್ದುಗೊಳಿಸಿದ್ದಾರೆ.

​ಮಾಜಿ ಅಧ್ಯಕ್ಷ ಗಣಾದೀಶ ಅವರ ಜಾತಿ ಪ್ರಮಾಣ ಪತ್ರವೇ ರದ್ದಾಗಿರುವುದರಿಂದ, ಅವರ ರಕ್ತಸಂಬಂಧಿಯಾದ ನಾಗರಾಜ್ ಕೂಡ ನಕಲಿ ಎಸ್ಸಿ ಜಾತಿ ಪ್ರಮಾಣ ಪತ್ರದ ಮೂಲಕವೇ ಸೌಲಭ್ಯ ಪಡೆದಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಸಂಘಟನೆ ವಾದಿಸಿದೆ.

​ದೌರ್ಜನ್ಯ ಮತ್ತು ವಂಚನೆ:

​ನಾಗರಾಜ್ ಅವರು ನಕಲಿ ಪ್ರಮಾಣ ಪತ್ರದ ಮೂಲಕ ನೈಜ ಪರಿಶಿಷ್ಟ ಜಾತಿ (SC) ವರ್ಗದವರಿಗೆ ಸಿಗಬೇಕಾದ ಸರ್ಕಾರಿ ಸೌಲಭ್ಯಗಳನ್ನು ಕಿತ್ತುಕೊಂಡು ವಂಚಿಸುತ್ತಿದ್ದಾರೆ. ಇದಲ್ಲದೆ, ಈ ಹುದ್ದೆಯ ಬಲದಿಂದ ಸಹೋದ್ಯೋಗಿ ನೌಕರರು ಹಾಗೂ ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

​ಡಿ.ಎಸ್.ಎಸ್ ಸಂಘಟನೆಯ ಆಗ್ರಹ:

​”ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ನೌಕರಿ ಪಡೆದಿರುವ ನಾಗರಾಜ ಬಿನ್ ಮಾಣಿಕ್ಯ ಅವರ ಜಾತಿ ಪ್ರಮಾಣ ಪತ್ರವನ್ನು ತಕ್ಷಣವೇ ರದ್ದುಪಡಿಸಬೇಕು. ಅಲ್ಲದೆ, ಆತನಿಗೆ ನಕಲಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಮತ್ತು ವಂಚನೆ ಎಸಗಿದ ನಾಗರಾಜನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.” – ಎಸ್. ಲಕ್ಷ್ಮಣ್ ಸಾಗರ್, ತಾಲ್ಲೂಕು ಸಂಚಾಲಕರು, ಡಿ.ಎಸ್.ಎಸ್, ಸಾಗರ.

​ಈ ಮನವಿಯೊಂದಿಗೆ ಮಾಜಿ ಅಧ್ಯಕ್ಷ ಗಣಾಧೀಶರ ಜಾತಿ ಪ್ರಮಾಣ ಪತ್ರ ವಜಾವಾಗಿರುವ ಸಂಪೂರ್ಣ ಮಾಹಿತಿಯ ದಾಖಲೆಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿದ್ದು, ಸೂಕ್ತ ನ್ಯಾಯ ದೊರಕಿಸಿಕೊಡುವಂತೆ ಸಮಿತಿಯ ಪ್ರಮುಖರಾದ ರವಿ ಜಂಬಗಾರು, ಧರ್ಮರಾಜ್ ಬೆಳಲಮಕ್ಕಿ, ಚಂದ್ರಪ್ಪ ಜೋಗ್, ಸಂತೋಷ್ ಬಂದಗದ್ದೆ, ಚಂದ್ರಪ್ಪ ತ್ಯಾಗರ್ತಿ, ನಾಗಪ್ಪ ಹುರುಳಿ ಹಾಗೂ ಸುರೇಶ್ ಬಿ.ಆರ್. ಸೇರಿದಂತೆ ಹಲವರು ಆಗ್ರಹಿಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…

Share. Facebook Twitter LinkedIn WhatsApp Email

Related Posts

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

1 Min Read

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

2 Mins Read

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

2 Mins Read
Recent News

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಇಂದು `ಪಿಎಂ ಕಿಸಾನ್ ಯೋಜನೆ’ಯ 23ನೇ ಕಂತಿನ ಹಣ ಬಿಡುಗಡೆ | PM Kisan Scheme

ಮೇಖೆದಾಟು ಯೋಜನೆ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ವಿಧಾನಸಭೆಯ ನಿರ್ಣಯ ಶ್ಲಾಘಿಸಿದ ನಟ ಕಮಲ್ ಹಾಸನ್ 

State News
KARNATAKA

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಮೆಟ್ರಿಕ್-ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ…

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.