ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೆನ್ನೆ ರಾತ್ರಿ ವಿಶೇಷ ವಿಮಾನದ ಮೂಲಕ ತಿರುಪತಿಗೆ ಪ್ರಯಾಣ ಬೆಳೆಸಿದ್ದಾರೆ.
ಇಂದು ಮುಂಜಾನೆ ಅವರು ತಮ್ಮ ಪತ್ನಿ ಸಮೇತರಾಗಿ ಪವಿತ್ರ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪರಿಷತ್ ಚುನಾವಣೆಯಲ್ಲಿ ನಾಲ್ಕು ಅಭ್ಯರ್ಥಿಗಳು ಸಾಕು ಎಂದಿದ್ದರೂ ಸಹ, ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ರಾಜಕೀಯ ತಂತ್ರಗಾರಿಕೆ ನಡೆಸಲಾಗಿತ್ತು. ಈ ಚುನಾವಣಾ ಆಪರೇಷನ್ ಯಶಸ್ವಿಯಾಗಿದ್ದು, ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಅವರು ಬರೊಬ್ಬರಿ 32 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದಾರೆ.
ಈ ಮಹತ್ತರ ರಾಜಕೀಯ ಯಶಸ್ಸಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ತಿರುಪತಿ ತಿಮ್ಮಪ್ಪನಿಗೆ ಕೃತಜ್ಞತೆ ಸಲ್ಲಿಸಲು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.








