Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್‌ನದ್ದು ಸಂಪೂರ್ಣ ಹಿಂದೂ ವಿರೋಧಿ ನೀತಿ: ಸಾಗರದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಗಣೇಶ್ ಪ್ರಸಾದ್ ವಾಗ್ದಾಳಿ

ಬಗರ್ ಹುಕುಂ ಜಮೀನು ಮಂಜೂರಾತಿ ಹಗರಣ: JDS ಮಾಜಿ ಶಾಸಕ ಕೆ.ಎಸ್.ಲಿಂಗೇಶ್ CID ವಶಕ್ಕೆ

ಶೀಘ್ರದಲ್ಲೇ ಜೋಗ್ ಫಾಲ್ಸ್‌ನಲ್ಲಿ ‘ರೋಪ್ ವೇ – ಕೇಬಲ್ ಕಾರ್’ ಸಂಚಾರ: ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ನೇತೃತ್ವದಲ್ಲಿ ಸರ್ವೆ ಚುರುಕು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಗರ್ ಹುಕುಂ ಜಮೀನು ಮಂಜೂರಾತಿ ಹಗರಣ: JDS ಮಾಜಿ ಶಾಸಕ ಕೆ.ಎಸ್.ಲಿಂಗೇಶ್ CID ವಶಕ್ಕೆ
KARNATAKA

ಬಗರ್ ಹುಕುಂ ಜಮೀನು ಮಂಜೂರಾತಿ ಹಗರಣ: JDS ಮಾಜಿ ಶಾಸಕ ಕೆ.ಎಸ್.ಲಿಂಗೇಶ್ CID ವಶಕ್ಕೆ

By ವಸಂತ ಬಿ ಈಶ್ವರಗೆರೆ

ಹಾಸನ: ಬಗರ್ ಹುಕುಂ ಜಮೀನು ಮಂಜೂರಾತಿಯಲ್ಲಿ ಭಾರಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ, ಬೇಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಸಿಐಡಿ (CID) ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಬಂಧಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಕೆ.ಎಸ್. ಲಿಂಗೇಶ್ ಅವರು ಬೇಲೂರು ತಾಲ್ಲೂಕು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ವ್ಯಾಪಕ ಪ್ರಮಾಣದ ಸರ್ಕಾರಿ ಜಮೀನನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಕುರಿತು ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಅವರು ಬೇಲೂರು ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿತ್ತು.

2,750 ಎಕರೆ ಜಮೀನು ಮೌಲ್ಯದ ಬೃಹತ್ ಹಗರಣ!

ಸಾಮಾಜಿಕ ಕಾರ್ಯಕರ್ತರು ನೀಡಿದ ದೂರಿನ ಪ್ರಕಾರ, ಸುಮಾರು 2,750 ಎಕರೆ ಸರ್ಕಾರಿ ಭೂಮಿಯನ್ನು ನಕಲಿ ದಾಖಲೆಗಳನ್ನು ಸೃಷ್ಟಿಸುವ ಮೂಲಕ ಬರೋಬ್ಬರಿ 1,430 ಬೋಗಸ್ (ನಕಲಿ) ಫಲಾನುಭವಿಗಳಿಗೆ ಕಾನೂನುಬಾಹಿರವಾಗಿ ಮಂಜೂರಾತಿ ಮಾಡಿಕೊಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಕಾನೂನು ಕ್ರಮದ ವಿವರ: ಈ ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸೇರಿದಂತೆ ಇತರ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ವಿವಿಧ ಸೆಕ್ಷನ್‌ಗಳಡಿ (ಹಿಂದಿನ ಐಪಿಸಿ ಸೆಕ್ಷನ್‌ಗಳಾದ 420, 464, 465, 468, 471, 409 ಹಾಗೂ 120(ಬಿ)) ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ.

ಹೈಕೋರ್ಟ್ ಹಾಗೂ ವಿಶೇಷ ನ್ಯಾಯಾಲಯದಲ್ಲಿ ಹಿನ್ನಡೆ:

ಇದಕ್ಕೂ ಮುನ್ನ ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ಮಾಜಿ ಶಾಸಕರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಅರ್ಜಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್, ತನಿಖೆ ಮುಂದುವರಿಸುವಂತೆ ಸಿಐಡಿಗೆ ಸ್ಪಷ್ಟ ಸೂಚನೆ ನೀಡಿತ್ತು. ಇದಾದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವೂ ಸಹ ಇವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಜಾಮೀನು ಅರ್ಜಿಗಳು ತಿರಸ್ಕೃತಗೊಂಡ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಸಿಐಡಿ ಅಧಿಕಾರಿಗಳು, ಇಂದು ಬೆಳ್ಳಂಬೆಳಿಗ್ಗೆ ಮಾಜಿ ಶಾಸಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಂಗೇಶ್ ಸೇರಿದಂತೆ ಇನ್ನೂ ಹಲವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ಹಾಗೂ ಮುಂದಿನ ಕಾನೂನು ಪ್ರಕ್ರಿಯೆಗಳು ಚುರುಕಾಗಿ ನಡೆದಿವೆ.

Share. Facebook Twitter LinkedIn WhatsApp Email

Related Posts

ಕಾಂಗ್ರೆಸ್‌ನದ್ದು ಸಂಪೂರ್ಣ ಹಿಂದೂ ವಿರೋಧಿ ನೀತಿ: ಸಾಗರದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಗಣೇಶ್ ಪ್ರಸಾದ್ ವಾಗ್ದಾಳಿ

3 Mins Read

ಶೀಘ್ರದಲ್ಲೇ ಜೋಗ್ ಫಾಲ್ಸ್‌ನಲ್ಲಿ ‘ರೋಪ್ ವೇ – ಕೇಬಲ್ ಕಾರ್’ ಸಂಚಾರ: ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ನೇತೃತ್ವದಲ್ಲಿ ಸರ್ವೆ ಚುರುಕು

2 Mins Read

ALERT : ವಾಟ್ಸಾಪ್ ನಲ್ಲಿ ಯಾರಾದರೂ `ಬ್ಲ್ಯಾಕ್ ಮೇಲ್’ ಮಾಡಿದರೆ ಇಲ್ಲಿ ದೂರು ನೀಡಿ.!

1 Min Read
Recent News

ಕಾಂಗ್ರೆಸ್‌ನದ್ದು ಸಂಪೂರ್ಣ ಹಿಂದೂ ವಿರೋಧಿ ನೀತಿ: ಸಾಗರದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಗಣೇಶ್ ಪ್ರಸಾದ್ ವಾಗ್ದಾಳಿ

ಬಗರ್ ಹುಕುಂ ಜಮೀನು ಮಂಜೂರಾತಿ ಹಗರಣ: JDS ಮಾಜಿ ಶಾಸಕ ಕೆ.ಎಸ್.ಲಿಂಗೇಶ್ CID ವಶಕ್ಕೆ

ಶೀಘ್ರದಲ್ಲೇ ಜೋಗ್ ಫಾಲ್ಸ್‌ನಲ್ಲಿ ‘ರೋಪ್ ವೇ – ಕೇಬಲ್ ಕಾರ್’ ಸಂಚಾರ: ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ನೇತೃತ್ವದಲ್ಲಿ ಸರ್ವೆ ಚುರುಕು

ALERT : ವಾಟ್ಸಾಪ್ ನಲ್ಲಿ ಯಾರಾದರೂ `ಬ್ಲ್ಯಾಕ್ ಮೇಲ್’ ಮಾಡಿದರೆ ಇಲ್ಲಿ ದೂರು ನೀಡಿ.!

State News
KARNATAKA

ಕಾಂಗ್ರೆಸ್‌ನದ್ದು ಸಂಪೂರ್ಣ ಹಿಂದೂ ವಿರೋಧಿ ನೀತಿ: ಸಾಗರದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಗಣೇಶ್ ಪ್ರಸಾದ್ ವಾಗ್ದಾಳಿ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಅನುದಾನ ಹಂಚಿಕೆಯಲ್ಲಿ…

ಬಗರ್ ಹುಕುಂ ಜಮೀನು ಮಂಜೂರಾತಿ ಹಗರಣ: JDS ಮಾಜಿ ಶಾಸಕ ಕೆ.ಎಸ್.ಲಿಂಗೇಶ್ CID ವಶಕ್ಕೆ

ಶೀಘ್ರದಲ್ಲೇ ಜೋಗ್ ಫಾಲ್ಸ್‌ನಲ್ಲಿ ‘ರೋಪ್ ವೇ – ಕೇಬಲ್ ಕಾರ್’ ಸಂಚಾರ: ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ನೇತೃತ್ವದಲ್ಲಿ ಸರ್ವೆ ಚುರುಕು

ALERT : ವಾಟ್ಸಾಪ್ ನಲ್ಲಿ ಯಾರಾದರೂ `ಬ್ಲ್ಯಾಕ್ ಮೇಲ್’ ಮಾಡಿದರೆ ಇಲ್ಲಿ ದೂರು ನೀಡಿ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.