ಮುಂಬೈ: ಕತ್ತಿಯಿಂದ ಕೇಕ್ ಕತ್ತರಿಸಿದ 17 ವರ್ಷದ ಯುವಕನ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ವರದಿಗಳ ಪ್ರಕಾರ, ಯುವಕ ಶುಕ್ರವಾರ ರಾತ್ರಿ ತನ್ನ ಸ್ನೇಹಿತರೊಂದಿಗೆ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾನೆ.

ಯುವಕ ಕತ್ತಿಯಿಂದ 21 ಕೇಕ್‌ಗಳನ್ನು ಕತ್ತರಿಸುತ್ತಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.

ವೀಡಿಯೋ ಮುಂಬೈನ ಬೋರಿವಲಿ ಪ್ರದೇಶದ್ದು. 17 ವರ್ಷದ ಯುವಕನ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ,’’ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಆರೋಪಿ ಪರಾರಿಯಾಗಿದ್ದು, ಯುವಕನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

Share.
Exit mobile version