Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಜ.27ರಂದು ಬೆಂಗಳೂರಿನ ಶಕ್ತಿಸೌಧದ ಪಶ್ಚಿಮ ದ್ವಾರದ ಬಳಿ 25 ಅಡಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ
KARNATAKA

BIG NEWS: ಜ.27ರಂದು ಬೆಂಗಳೂರಿನ ಶಕ್ತಿಸೌಧದ ಪಶ್ಚಿಮ ದ್ವಾರದ ಬಳಿ 25 ಅಡಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಶಕ್ತಿಸೌಧ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಕಂಚಿನ ಪ್ರತಿಮೆ ಭುವನೇಶ್ವರಿ ತಾಯಿಗೆ ಜ.27ರಿಂದ ನಿತ್ಯ ಆರ್ಚನೆ ನೆರವೇರಲಿದೆ.

ಈ ಬಗ್ಗೆ ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ವಿಕಾಸಸೌಧದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಈ ಮೇಲಿನ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ’ ಕನ್ನಡ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಕನ್ನಡಾಂಬೆಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಜ.27ರಂದು ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಹಬ್ಬದ ವಾತಾವರಣದಲ್ಲಿ ಸಾರ್ವಜನಿಕರು ಹಾಗೂ ಕನ್ನಡಪರ ಸಂಘಟನೆಗಳು ಪಾಲ್ಗೊಳ್ಳಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಅವರು ಮಾಧ್ಯಮದ ಮೂಲಕ ಮನವಿ ಮಾಡಿದರು.

ಪ್ರತಿಮೆಯ ವೈಶಿಷ್ಟ್ಯ ತೆ

* ನೆಲಮಟ್ಟದಿಂದ ಪ್ರತಿಮೆಯ ಎತ್ತರ – 43 ಅಡಿ 6 ಇಂಚು

* ಪ್ರತಿಮೆಯ ಲೋಹದ ಒಟ್ಟು ತೂಕ – 31.50 ಟನ್

* ಭುವನೇಶ್ವರಿ ಪ್ರತಿಮೆ – 20 ಟನ್

* ಕರ್ನಾಟಕ ನಕ್ಷೆ – 11.50 ಟನ್

* ಭುವನೇಶ್ವರಿ ಪ್ರತಿಮೆಯ ಒಟ್ಟು ವಿಸ್ತೀರ್ಣ (ಉದ್ಯಾನವನ ಸೇರಿದಂತೆ) – 4500 ಚ.ಮೀ

* ಕಲ್ಲು ಕಟ್ಟಡದ ಪೀಠದ ವಿವರ – ಕಲ್ಲಿನ ಹೊಯ್ಸಳ ಶೈಲಿಯ ಪೀಠ ಮತ್ತು ಪ್ರದಕ್ಷಣ ಪಥದ ಸುತ್ತ ಕರ್ಣಕೂಟ ಮತ್ತು ಅಲಂಕಾರಿಕ ಕಲ್ಲಿನ ಕೈಪಿಡಿ ನಿರ್ಮಿಸಲಾಗಿದೆ.

* ಕಾಮಗಾರಿಯ ಅಂದಾಜು ವೆಚ್ಚ : 21‌.24 ಕೋಟಿ

* ಕಾಮಗಾರಿ ನಿರ್ವಹಣೆ: ಲೋಕೋಪಯೋಗಿ ಇಲಾಖೆ

ಸಾರಿಗೆ ಬಸ್ ನಲ್ಲಿ ಹಾರಾಡಲಿದೆ ಕನ್ನಡದ ಧ್ವಜ

ಸ್ಥಳೀಯ ಬಿಬಿಎಂಪಿಯನ್ನು ಮೆರವಣಿಗೆಗೆ ಬಳಸಿಕೊಳ್ಳಲಾಗಿದ್ದು, ಅಂದು ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳನ್ನು ಕನ್ನಡದ ಧ್ವಜ ಹಾರಾಡಲಿದೆ. ಉಚಿತವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡದ ಧ್ವಜವನ್ನು ವಿತರಿಸಲಾಗುವುದು ಎಂದರು.‌

ಹೊಯ್ಸಳ ಶೈಲೀಯ ಪೀಠ ನಿರ್ಮಾಣ

ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ‌. ಮುಂಭಾಗದಲ್ಲಿ‌ ಭೌಗೋಳಿಕ ನಕ್ಷೆ ಇದ್ದರೆ, ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ಕರ್ನಾಟಕದ ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ ಕದಂಬ ಹಾಗೂ ಆಧುನೀಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದರಲ್ಲಿ ರಾಜಲಾಂಛನಗಳಾದ ಹೊಯ್ಸಳ ಲಾಂಛನ, ವೈಜಯಜಯಂತಿ ಮಾಲೆ, ಕಂಠಿಹಾರ, ಗಂಡ ಭೇರುಂಡ ಇರಲಿದೆ. ನಾವು ಅದುಕೊಂಡಕ್ಕಿಂತ ಚೆನ್ನಾಗಿ ಪ್ರತಿಮೆ ಮೂಡಿ ಬಂದಿದೆ ಎಂದು ಸಚಿವರು ಹೇಳಿದರು.

ಪ್ರತಿಮೆಯ ಸುತ್ತಲೂ ಉದ್ಯಾನವನ, ಆವರಣದ ಸುತ್ತಲೂ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಪಶ್ಚಿಮದ ದ್ವಾರಕ್ಕೆ ಇರುವ ನಾಡದೇವಿ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಇದಕ್ಕೆಂದೇ ಪಶ್ಚಿಮಕ್ಕೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶ ಇರಲಿದೆ ಎಂದರು.

ಪ್ರತಿಮೆ ಅನಾವರಣದ ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ 4 ದಿಕ್ಕುಗಳಿಂದ ಮೆರವಣಿಗೆ ಆಗಮಿಸಲಿದ್ದು, ಜ್ಞಾನಪೀಠ ಪುರಸ್ಕೃತರು ಹಾಗೂ ನಾಡಿನ ಹೆಸರಾಂತ ಮಹನೀಯರ ಫೋಟೋಗಳನ್ನು ಇಡಲಾದ ಪಲ್ಲಕ್ಕಿ ಮೆರವಣಿಗೆಯಲ್ಲಿ ಸಾಗಲಿದೆ. ಪೂರ್ವ ದಿಕ್ಕಿನಿಂದ (ಇಂದಿರಾ ನಗರ ): ಪಂಪ, ರನ್ನ, ಪೊನ್ನ, ಜನ್ನ, ಸರ್‌.ಎಂ. ವಿಶ್ವೇಶ್ವರಯ್ಯ, ಸರ್‌ ಸಿ.ವಿ. ರಾಮನ್, ಸಿ.ಎನ್‌.ಆರ್‌. ರಾವ್, ಭೀಮ್‌ಸೇನ್‌ ಜೋಷಿ, ಡಾ. ರಾಜ್‌ಕುಮಾರ್‌, ಎಸ್.‌ ನಿಜಲಿಂಗಪ್ಪ, ಶ್ರೀ ಶಿವಕುಮಾರ ಸ್ವಾಮೀಜಿ‌, ದೇ. ಜವರೇಗೌಡ, ಡಾ. ವಿರೇಂದ್ರ ಹೆಗಡೆ, ಡಾ. ಪುನೀತ್‌ ರಾಜ್‌ಕುಮಾರ್ ಅವರ ಫೋಟೋವಿರುವ ಪಲ್ಲಕ್ಕಿ ಮೆರವಣಿಗೆಯಲ್ಲಿ ಸಾಗಲಿದೆ.

ಪಶ್ಚಿಮ ದಿಕ್ಕು: (ಕೆಂಗೇರಿ ಉಪನಗರ ): ಜ್ಞಾನಪೀಠ ಪ್ರಶಸ್ತಿ ಪುರಸ್ಕತರು ಹಾಗೂ ರಾಷ್ಟ್ರಕವಿಗಳಾದ ಕುವೆಂಪು, ದ.ರಾ.ಬೇಂದ್ರೆ, ಶಿವರಾಮಕಾರಂತ, ಮಾಸ್ತಿ ವೆಂಕಟೇಶ ಅಯ್ಯಾಂಗಾರ್‌, ವಿ‌.ಕೃ. ಗೋಕಾಕ್‌, ಡಾ. ಯು. ಆರ್.‌ ಅನಂತ ಮೂರ್ತಿ, ಡಾ. ಗಿರೀಶ್‌ ಕಾರ್ನಾಡ್‌, ಡಾ. ಚಂದ್ರಶೇಖರ ಕಂಬಾರ, ಮಂಜೇಶ್ವರ ಗೋವಿಂದ ಪೈ, ಡಾ. ಜಿ.ಎಸ್.‌ ಶಿವರುದ್ರಪ್ಪ ಅವರ ಫೋಟೋ ಮೆರವಣಿಗೆಯಲ್ಲಿ ಬರಲಿದೆ.

ಉತ್ತರ ದಿಕ್ಕು : (ಹೆಬ್ಬಾಳ) ಈ ದಿಕ್ಕಿನಿಂದ

ಕದಂಬರು, ಚಾಲುಕ್ಯರು, ರಾಷ್ಟ್ರಕೂಟರು, ಹೊಯ್ಸಳರು, ವಿಜಯನಗರ ಅರಸರು, ಗಂಗರು, ಮೈಸೂರು ರಾಜ್ಯರ ಲಾಂಛನ ಹಾಗೂ ಹಲ್ಮಿಡಿ ಶಾಸನದ ಪ್ರತಿರೂಪ ಇರಲಿದೆ.

ದಕ್ಷಿಣ ದಿಕ್ಕು : (ಬಸವನಗುಡಿ ಬುಲ್ ಟೆಂಪಲ್ ) ಇನ್ನು ದಕ್ಷಿಣ ದಿಕ್ಕಿನಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ, ಕನಕದಾಸರು, ಪುರಂದರದಾಸರು, ಸಂಚಿ ಹೊನ್ನಮ್ಮ, ದಾನ ಚಿಂತಾಮಣಿ ಅತ್ತಿಮಬ್ಬೆ, ಅಕ್ಕಮಹಾದೇವಿ, ಕುಮಾರವ್ಯಾಸ, ಸಂತ ಶಿಶುನಾಳ ಷರೀಫ, ರೆವರೆಂಡ್ ಎಫ್ ಕಿಟ್ಟೆಲ್, ಬಿ.ಎಲ್.‌ ರೈಸ್ ಅವರ ಪಲ್ಲಕ್ಕಿ ಬರಲಿದ್ದು, ನಾಲ್ಕು ದಿಕ್ಕುಗಳಿನಿಂದ ಮೆರವಣಿಗೆ ಸಾಗಿ ಅಂತಿಮವಾಗಿ ನಾಡದೇವಿ ಭುವನೇಶ್ವರಿ ಪ್ರತಿಮೆ ಇರುವ ವಿಧಾನಸೌಧದ ಬಳಿ ತಲುಪಲಿವೆ. ಅಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಪ್ರತಿಯೊಂದು ದಿಕ್ಕಿನಲ್ಲಿ ಶಾಸಕರು ಮೆರವಣಿಗೆ ಚಾಲನೆ ನೀಡಲಾಗಿದ್ದು, ಹತ್ತಾರು ಕಲಾ ತಂಡಗಳು ಸೇರಿದಂತೆ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ನಾಡದೇವಿ ಭುವನೇಶ್ವರಿ ಪ್ರತಿಮೆ ಅನಾವರಣದ ಬಳಿಕ ಕನ್ನಡ ಗೀತೆಗಳ ಕಾರ್ಯಕ್ರಮ ಮತ್ತು ಹೊನ್ನ ಬಿತ್ತೇವು – ನೃತ್ಯ ರೂಪಕ ಕಾರ್ಯಕ್ರಮ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ ಎಂದು ಸಚಿವರು ವಿವರಿಸಿದರು.

ಶಿವಮೊಗ್ಗದ ‘ಮೌಂಟ್ ಕಾರ್ಮೆಲ್ ಶಾಲೆ’ಗೆ ‘CBSE ಮಾನ್ಯತೆ’: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಅನುಮತಿ

ಟ್ರಂಪ್ ಅಧಿಕಾರ ಸ್ವೀಕರಿಸಿದ ಬಳಿಕ ಅಮೆರಿಕಾದಿಂದ 500ಕ್ಕೂ ಹೆಚ್ಚು ‘ಅಕ್ರಮ ವಲಸಿಗರ’ ಬಂಧನ

Share. Facebook Twitter LinkedIn WhatsApp Email

Related Posts

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

2 Mins Read

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

1 Min Read

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

2 Mins Read
Recent News

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

ಬ್ರಿಕ್ಸ್‌ ಶೃಂಗಸಭೆಗೆ ದೆಹಲಿ ಸಜ್ಜು: ಇರಾನ್‌ನ ಅರಾಗ್ಚಿ ಮತ್ತು ರಷ್ಯಾದ ಲಾವ್ರೊವ್ ಭಾರತಕ್ಕೆ ಆಗಮನ!

State News
KARNATAKA

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯು 2026ನೇ ಸಾಲಿನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗಳ…

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

ಸಾಗರ ಮಾರ್ಕೆಟ್ ರಸ್ತೆ ಅಗಲೀಕರಣ ಅನಿವಾರ್ಯ: ಜಾಗ ಬಿಟ್ಟುಕೊಡಲು ನಿವಾಸಿಗಳಿಗೆ ‘AC ವಿರೇಶ ಕುಮಾರ್’ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.