SHOCKING: ಪಾಠ ಕೇಳುವಾಗಲೇ ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಸಾವು

ಚಾಮರಾಜನಗರ: ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬ ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದು ಕುಳಿತಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕುರಬರಗೇರಿಯಲ್ಲಿ 4ನೇ ತರಗತಿ ವಿದ್ಯಾರ್ಥಿ ಮನೋಜ್ ಕುಮಾರ್(10) ಪಾಠ ಕೇಳುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತ ಮನೋಜ್ ಕುಮಾರ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರಂತೆ. ಮನೋಜ್ ಗೆ ಹೃದಯದಲ್ಲಿ ಹೋಲ್ ಇತ್ತು ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಈ ಕಾರಣದಿಂದ ಜಯದೇವ, ಅಪಲೋ ಆಸ್ಪತ್ರೆಯಲ್ಲಿ ಮನೋಜ್ ಕುಮಾರ್ ಚಿಕಿತ್ಸೆ ಪಡೆಯುತ್ತಿದ್ದುದಾಗಿ ತಿಳಿದು ಬಂದಿದೆ. BREAKING: … Continue reading SHOCKING: ಪಾಠ ಕೇಳುವಾಗಲೇ ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಸಾವು