ರಾಯಚೂರು : ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಓರ್ವ ಮಗು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.
ಬಾಲಕ ಹನುಮೇಶ್ (5) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮ ಪಂಚಾಯತಿ ನಿರ್ಲಕ್ಷದಿಂದ ಘಟನೆ ನಡೆದಿದ್ದು, 30 ಕ್ಕೂ ಹೆಚ್ಚು ಜನರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅರಕೇರಾ, ದೇವದುರ್ಗ ಹಾಗೂ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಜನರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಜನರು ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಘಟನೆ ಹಿನ್ನೆಲೆ ಸಾರ್ವಜನಿಕರು ಪಂಚಾಯತಿ ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ರೈಲಿನಿಂದ ಕಳಚಿದ ಇಂಜಿನ್ : ತಪ್ಪಿದ ಭಾರಿ ದುರಂತ