ಬೆಂಗಳೂರು : ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ ಭವನಕ್ಕೆ ತೆರಳಿ l ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದುz ಅದಕ್ಕೂ ಮುನ್ನ ಇಂದು ತಮ್ಮ ಕಾವೇರಿ ನಿವಾಸದಲ್ಲಿ ಸಚಿವ ಸಂಪುಟದ ಎಲ್ಲ ಸಚಿವರಿಗೂ ಬ್ರೇಕ್ ಫಾಸ್ಟ್ ಮೀಟಿಂಗ್ ಆಯೋಜನೆ ಮಾಡಿದ್ದು, ಈ ಒಂದು ಸಭೆಗೆ ಡಿಕೆ ಶಿವಕುಮಾರ್ ಆಗಮಿಸಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿ ಪರಸ್ಪರ ಆಲಿಂಗನ ಮಾಡಿಕೊಂಡರು. ಈ ಒಂದು ಉಪಹಾರಕೂಟ ಭಾವುಕ ಕ್ಷಣಕ್ಕೆ ಸಾಕ್ಷಿ ಆಯಿತು.
ಹೌದು ಹೈಕಮಾಂಡ್ ನಾಯಕರ ಸೂಚನೆಯಂತೆ ಇಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದು ಅದಕ್ಕೂ ಮುನ್ನ ಅವರು ತಮ್ಮ ಕಾವೇರಿ ನಿವಾಸದಲ್ಲಿ ಸಚಿವರಿಗೆ ಉಪಹಾರಕೂಟ ಸಭೆ ಆ ಯೋಜನೆ ಮಾಡಿದರು ಈ ವೇಳೆ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ನಮಸ್ಕರಿಸಿದ್ದು, ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು. ಉಳಿದ ಎಲ್ಲಾ ಸಚಿವರನ್ನು ಹೊರಗಡೆ ಕಳುಹಿಸಿ ಪ್ರತ್ಯೇಕ ಕೊಠಡಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.








